ಇದು ನನ್ನ ಕೊನೆಯ ಚುನಾವಣೆ, ನನ್ನನ್ನು ರಾಜಕೀಯವಾಗಿ ಮುಗಿಸಲು ಕೆಲವರಿಂದ ಷಡ್ಯಂತ್ರ: ಕರಪತ್ರ ಮೂಲಕ ಜಗದೀಶ್ ಶೆಟ್ಟರ್ ಘೋಷಣೆ
ಇದು ನನ್ನ ಕೊನೆಯ ಚುನಾವಣೆ, ನನ್ನನ್ನು ರಾಜಕೀಯವಾಗಿ ಮುಗಿಸಲು ಕೆಲವರಿಂದ ಷಡ್ಯಂತ್ರವಾಗಿದೆ ಎಂದು ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕರಪತ್ರದ ಮೂಲಕ ಘೋಷಣೆ ಮಾಡಿದ್ದಾರೆ.
Published: 03rd May 2023 01:31 PM | Last Updated: 03rd May 2023 02:17 PM | A+A A-

ಜಗದೀಶ್ ಶೆಟ್ಟರ್
ಹುಬ್ಬಳ್ಳಿ: ಇದು ನನ್ನ ಕೊನೆಯ ಚುನಾವಣೆ, ನನ್ನನ್ನು ರಾಜಕೀಯವಾಗಿ ಮುಗಿಸಲು ಕೆಲವರಿಂದ ಷಡ್ಯಂತ್ರವಾಗಿದೆ ಎಂದು ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕರಪತ್ರದ ಮೂಲಕ ಘೋಷಣೆ ಮಾಡಿದ್ದಾರೆ.
ಇದು ನನ್ನ ಕೊನೆಯ ಚುನಾವಣೆ. ನಾನು ಏಳನೇ ಬಾರಿ ಚುನಾವಣೆ ಎದುರಿಸುತ್ತಿದ್ದೇನೆ. ಈ ಬಾರಿಯೂ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ. ಕೆಟ್ಟು ಹೋಗಿರುವ ವ್ಯವಸ್ಥೆ ಸರಿಪಡಿಸುವ ಉದ್ದೇಶ ಇದೆ ಎಂದು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಮನವಿ ಮಾಡಿದ್ದಾರೆ.
4 ದಶಕಗಳ ಕಾಲ ಉತ್ತರ ಕರ್ನಾಟಕದಲ್ಲಿ ಬಿಜೆಪಿ ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ನಾನು ನನ್ನದೇ ಆದ ರೀತಿಯಲ್ಲಿ ಕಷ್ಟಪಟ್ಟಿದ್ದೇನೆ, ಬೆವರು ಹರಿಸಿದ್ದೇನೆ, ಆದರೆ ಕೊನೆಯ ಸಮಯದಲ್ಲಿ ನನ್ನನ್ನು ಅವಮಾನದಿಂದ ಮನೆಯಿಂದ ಹೊರಹಾಕಲಾಯಿತು. ರಾಜಕೀಯವಾಗಿ ನನ್ನನ್ನು ಮುಗಿಸಲು ಬಿಜೆಪಿ ಪಕ್ಷದಲ್ಲಿಯೇ ಕೆಲವರು ಷಡ್ಯಂತ್ರ ರೂಪಿಸಿದ್ದಾರೆ ಎಂದು ಜಗದೀಶ್ ಶೆಟ್ಟರ್ ಕರಪತ್ರದಲ್ಲಿ ಪರೋಕ್ಷವಾಗಿ ಬಿ ಎಲ್ ಸಂತೋಷ್ ಕುಮಾರ್, ಪ್ರಹ್ಲಾದ್ ಜೋಷಿ ವಿರುದ್ಧ ಆರೋಪ ಮಾಡಿದ್ದಾರೆ.
ಇದನ್ನೂ ಓದಿ: ತವರು ನೆಲದಲ್ಲಿಯೇ ಜಗದೀಶ್ ಶೆಟ್ಟರ್ ಸೋಲಿಸಲು ಬಿಜೆಪಿ ಸಖತ್ ತಂತ್ರ; ಚುನಾವಣೆಗೂ ಮುನ್ನವೇ 'ಆಪರೇಷನ್ ಕಮಲ'!
ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಂಡಾಯವೆದ್ದು ಇತ್ತೀಚೆಗೆ ಕಾಂಗ್ರೆಸ್ ಸೇರ್ಪಡೆಯಾಗಿರುವ ಜಗದೀಶ್ ಶೆಟ್ಟರ್ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.