ಮೋದಿ ರೋಡ್ ಶೋನಲ್ಲಿ ಬದಲಾವಣೆ: ಬೆಂಗಳೂರಿನಲ್ಲಿ ಶನಿವಾರ, ಭಾನುವಾರ 2 ದಿನ ಪ್ರಧಾನಿ ಪ್ರಚಾರ

ಮಳೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಶನಿವಾರ ಸಂಜೆ ನಡೆಯಬೇಕಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋನಲ್ಲಿ ಬದಲಾವಣೆ ಆಗಿದ್ದು, ಸಂಜೆ ಬದಲು ಶನಿವಾರ ಬೆಳಗ್ಗೆ ಮತ್ತು ಭಾನುವಾರ ಬೆಳಗ್ಗೆ ಎರಡು ದಿನ ರೋಡ್ ಶೋ ನಡೆಯಲಿದೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ಬೆಂಗಳೂರು: ಮಳೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಶನಿವಾರ ಸಂಜೆ ನಡೆಯಬೇಕಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋನಲ್ಲಿ ಬದಲಾವಣೆ ಆಗಿದ್ದು, ಸಂಜೆ ಬದಲು ಶನಿವಾರ ಬೆಳಗ್ಗೆ ಮತ್ತು ಭಾನುವಾರ ಬೆಳಗ್ಗೆ ಎರಡು ದಿನ ರೋಡ್ ಶೋ ನಡೆಯಲಿದೆ.

ಬೆಂಗಳೂರಿನಲ್ಲಿ ಶನಿವಾರ ಮತ್ತು ಭಾನುವಾರ ಎರಡು ದಿನಗಳ ಕಾಲ ಪ್ರಧಾನಿ ಮೋದಿ ರೋಡ್​ಶೋ ನಡೆಸಲಿದ್ದಾರೆ. ಶನಿವಾರ ಸಂಜೆ ನಡೆಯಬೇಕಿದ್ದ ರೋಡ್​ಶೋ ಭಾನುವಾರಕ್ಕೆ ನಿಗದಿಯಾಗಿದ್ದು, ಸಂಜೆ ಮಳೆ ಬರುವ ಸಾಧ್ಯತೆ ಹಿನ್ನೆಲೆಯಲ್ಲಿ ಭಾನುವಾರ ಬೆಳಗ್ಗೆ ರೋಡ್​ಶೋ ನಡೆಯಲಿದೆ.

ಶನಿವಾರ ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಹಾಗೂ ಭಾನುವಾರ ಬೆಳಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆವರೆಗೆ ಪ್ರಧಾನಿ ಮೋದಿ ರೋಡ್ ​ಶೋ ನಡೆಯಲಿದೆ.

ಪ್ರಧಾನಿ ಮೋದಿ ಮೇ 6 ರಂದು ರಾಜಧಾನಿ ಬೆಂಗಳೂರಿನ 17 ಕ್ಷೇತ್ರಗಳಲ್ಲಿ ಶನಿವಾರ ಮತ್ತು ಭಾನುವಾರ 'ನಮ್ಮ ಕರ್ನಾಟಕ ಯಾತ್ರೆ ಹೆಸರಿನಡಿ ಒಟ್ಟು 36.6 ಕಿ. ಮೀ ದೂರ ಬೃಹತ್ ರೋಡ್ ಶೋ ನಡೆಸಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com