ಅನಾರೋಗ್ಯದ ನಡುವೆಯೂ ಶನಿವಾರ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ರಾಜ್ಯದಲ್ಲಿ ಪ್ರಚಾರ

ಅನಾರೋಗ್ಯದ ಕಾರಣದಿಂದ ಪ್ರಚಾರದಿಂದ ದೂರ ಉಳಿದಿದ್ದ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಶನಿವಾರ ಹುಬ್ಬಳ್ಳಿಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಸೋನಿಯಾ ಗಾಂಧಿ
ಸೋನಿಯಾ ಗಾಂಧಿ

ನವದೆಹಲಿ: ಅನಾರೋಗ್ಯದ ಕಾರಣದಿಂದ ಪ್ರಚಾರದಿಂದ ದೂರ ಉಳಿದಿದ್ದ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಶನಿವಾರ ಹುಬ್ಬಳ್ಳಿಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಕಾಂಗ್ರೆಸ್ ಮೂಲಗಳ ಪ್ರಕಾರ, ಇದು ಚುನಾವಣಾ ಕಣದಲ್ಲಿರುವ ರಾಜ್ಯದಲ್ಲಿ ಅವರ ಮೊದಲ ಸಾರ್ವಜನಿಕ ಸಭೆಯಾಗಿದೆ.
ಈಮಧ್ಯೆ, ಮೇ 10ರಂದು ಚುನಾವಣೆ ನಡೆಯಲಿರುವ ಕರ್ನಾಟಕದಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ.

ಕಳೆದ ವರ್ಷ ಅಕ್ಟೋಬರ್ 6ರಂದು ಕರ್ನಾಟಕದ ಮಂಡ್ಯದ ಮೂಲಕ ಸಾಗುತ್ತಿದ್ದ ಭಾರತ್ ಜೋಡೋ ಯಾತ್ರೆಯಲ್ಲಿ ಸೋನಿಯಾ ಗಾಂಧಿ ಭಾಗವಹಿಸಿದ್ದರು ಮತ್ತು ರಾಹುಲ್ ಗಾಂಧಿ ಅವರೊಂದಿಗೆ ಹೆಜ್ಜೆಹಾಕಿದ್ದರು.

ಆರೋಗ್ಯದ ಕಾರಣಗಳಿಂದಾಗಿ ಅವರು ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದರಿಂದ ದೂರ ಉಳಿದಿದ್ದಾರೆ. ಜ್ವರದಿಂದ ಬಳಲುತ್ತಿದ್ದ ಅವರು ಕಳೆದ ಮಾರ್ಚ್ 2ರಂದು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದರು.
ಕಳೆದ ವರ್ಷ ಜೂನ್‌ನಲ್ಲಿ ಅವರಿಗೆ ಕೋವಿಡ್ ಪಾಸಿಟಿವ್ ಆಗಿತ್ತು. 

ಈ ಹಿಂದೆ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸೋನಿಯಾ ಗಾಂಧಿಯನ್ನು ಗುರಿಯಾಗಿಸಿಕೊಂಡು ಅವರನ್ನು 'ವಿಷಕನ್ಯೆ' ಮತ್ತು 'ಪಾಕಿಸ್ತಾನ ಮತ್ತು ಚೀನಾದ ಏಜೆಂಟ್' ಎಂದು ಬಣ್ಣಿಸಿದ್ದರು. ಬಿಜೆಪಿ ನಾಯಕರ ಹೇಳಿಕೆಯನ್ನು ಕಾಂಗ್ರೆಸ್ ಖಂಡಿಸಿತ್ತು.

ಮೇ 10 ರಂದು 224 ಸದಸ್ಯ ಬಲದ ವಿಧಾನಸಭೆಗೆ ಚುನಾವಣೆ ನಿಗದಿಯಾಗಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com