ಸಿದ್ರಾಮಣ್ಣ ಪರವಾಗಿ ಪ್ರಚಾರಕ್ಕಿಳಿದ ಶಿವಣ್ಣ! ಅವರವರ ಭಾವ ಭಕುತಿಗೆ- ಪ್ರತಾಪ್ ಸಿಂಹ ಕಿಡಿ

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೂ ಕೇವಲ ಐದು ದಿನಗಳಷ್ಟೇ ಬಾಕಿಯಿರುವಂತೆಯೇ ಪ್ರಚಾರದ ಕಣ ಮತ್ತಷ್ಟು ತಾರಕ್ಕೇರಿದೆ. ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ನೇತಾರರು ತಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.
ಶಿವರಾಜ್ ಕುಮಾರ್, ಸಿದ್ದರಾಮಯ್ಯ ಪ್ರಚಾರದ ಚಿತ್ರ
ಶಿವರಾಜ್ ಕುಮಾರ್, ಸಿದ್ದರಾಮಯ್ಯ ಪ್ರಚಾರದ ಚಿತ್ರ
Updated on

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೂ ಕೇವಲ ಐದು ದಿನಗಳಷ್ಟೇ ಬಾಕಿಯಿರುವಂತೆಯೇ ಪ್ರಚಾರದ ಕಣ ಮತ್ತಷ್ಟು ತಾರಕ್ಕೇರಿದೆ. ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ನೇತಾರರು ತಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.

ಅದರಲ್ಲೂ ದೇಶದ ಗಮನ ಸೆಳೆದಿರುವ ಮೈಸೂರಿನ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಗುರುವಾರ ಅಬ್ಬರದ ರೋಡ್ ಶೋ ನಡೆಸುವ ಮೂಲಕ ಮತಯಾಚಿಸಿದರು. ಈ ಸಂದರ್ಭದಲ್ಲಿ ಖ್ಯಾತ ಚಿತ್ರನಟ ಡಾ. ಶಿವರಾಜ್ ಕುಮಾರ್, ರಮ್ಯಾ ಹಾಗೂ ನಿಶ್ವಿಕಾ ನಾಯ್ಡು ಸಿದ್ದರಾಮಯ್ಯರಿಗೆ ಸಾಥ್ ನೀಡಿದರು. ಶಿವರಾಜ್ ಕುಮಾರ್ ಹಾಡೊಂದನ್ನು ಹಾಡುವ ಮೂಲಕ ನೆರೆದಿದ್ದ ಮತದಾರರನ್ನು ರಂಜಿಸಿದರು.

ಈ ಮಧ್ಯೆ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಪರ ಶಿವರಾಜ್ ಕುಮಾರ್ ಪ್ರಚಾರ ನಡೆಸಿರುವುದಕ್ಕೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಸಿದ್ದರಾಮಯ್ಯ ಪ್ರಚಾರದ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಸಂಸದ ಪ್ರತಾಪ್ ಸಿಂಹ, ಪುನೀತ್ ರಾಜಕುಮಾರ್ ಸರ್ ಹೆಸರಿನಲ್ಲಿ ಬಡವರಿಗಾಗಿ ಆಸ್ಪತ್ರೆ ಕಟ್ಟಿದ ಸೋಮಣ್ಣ, ಮನಮೆಚ್ಚಿ ಶ್ಲಾಘಿಸಿದ ರಾಘಣ್ಣ, ಸಿದ್ರಾಮಣ್ಣ ಪರವಾಗಿ ಪ್ರಚಾರಕ್ಕಿಳಿದ ಶಿವಣ್ಣ! ಅವರವರ ಭಾವ ಭಕುತಿಗೆ ಎಂದು ಕಿಡಿಕಾರಿದ್ದಾರೆ.

ಇನ್ನೊಂದೆಡೆ ಶಿವರಾಜ್ ಕುಮಾರ್ ನಡೆಗೆ ವರುಣಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸೋಮಣ್ಣ ಕೂಡಾ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಬಡವರಿಗಾಗಿ ಆಸ್ಪತ್ರೆ ಕಟ್ಟಿದ್ದರೂ ತಮ್ಮ ಎದುರಾಳಿ ಪರ ಶಿವರಾಜ್ ಕುಮಾರ್ ಪ್ರಚಾರ ಮಾಡಿರುವುದು ಬೇಸರ ಉಂಟುಮಾಡಿದೆ ಎಂದಿದ್ದಾರೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com