ಕಾಂಗ್ರೆಸ್ ಪರ ಪ್ರಚಾರಕ್ಕೆ ಯಾರೇ ಬಂದರೂ ಬಿಜೆಪಿ ಅಧಿಕಾರಕ್ಕೆ ಬರುತ್ತದೆ: ಸೋನಿಯಾ ಗಾಂಧಿ ಪ್ರಚಾರ ಕುರಿತು ಪ್ರಲ್ಹಾದ್ ಜೋಶಿ

ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಹುಬ್ಬಳ್ಳಿಗೆ ಭೇಟಿ ನೀಡಲಿರುವ ಕುರಿತು ಶುಕ್ರವಾರ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯಕ್ಕೆ ಕಾಂಗ್ರೆಸ್ ಪರ ಪ್ರಚಾರಕ್ಕಾಗಿ ಯಾರೇ ಬಂದರೂ, ಪೂರ್ಣ ಬಹುಮತದೊಂದಿಗೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದರು.
ಪ್ರಹ್ಲಾದ್ ಜೋಶಿ
ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಹುಬ್ಬಳ್ಳಿಗೆ ಭೇಟಿ ನೀಡಲಿರುವ ಕುರಿತು ಶುಕ್ರವಾರ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯಕ್ಕೆ ಕಾಂಗ್ರೆಸ್ ಪರ ಪ್ರಚಾರಕ್ಕಾಗಿ ಯಾರೇ ಬಂದರೂ, ಪೂರ್ಣ ಬಹುಮತದೊಂದಿಗೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದರು.

ಕರ್ನಾಟಕದಲ್ಲಿ ಇದು ನಿರ್ಣಾಯಕ ಚುನಾವಣೆಯಾಗಿದ್ದು, ಪಕ್ಷವನ್ನು ಅಧಿಕಾರಕ್ಕೆ ತರಲು ಮತದಾರರನ್ನು ಓಲೈಸಲು ನೆಹರು-ಗಾಂಧಿ ಕುಟುಂಬದ ಮೂವರು ಸದಸ್ಯರು ರಾಜ್ಯದಲ್ಲಿ ಚುನಾವಣಾ ಪ್ರಚಾರದ ಅಖಾಡಕ್ಕೆ ಧುಮುಕಿರುವುದು ಇದೇ ಮೊದಲು.
ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಈಗಾಗಲೇ ಕರ್ನಾಟಕದಲ್ಲಿ ವ್ಯಾಪಕ ಪ್ರಚಾರ ನಡೆಸಿದ್ದು, ಸೋನಿಯಾ ಗಾಂಧಿ ಶನಿವಾರ ಹುಬ್ಬಳ್ಳಿಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಎಎನ್‌ಐ ಜೊತೆ ಮಾತನಾಡಿದ ಕೇಂದ್ರ ಸಚಿವ ಜೋಶಿ, 'ಈ ಹಿಂದೆ ಪ್ರಿಯಾಂಕಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಕರ್ನಾಟಕಕ್ಕೆ ಬಂದಿದ್ದರು. ರಾಜ್ಯಕ್ಕೆ ಚುನಾವಣಾ ಪ್ರಚಾರಕ್ಕೆ ಯಾರೇ ಬಂದರೂ ಬಿಜೆಪಿ ಪೂರ್ಣ ಬಹುಮತದೊಂದಿಗೆ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.

1978 ರಲ್ಲಿ ನಡೆದ ಉಪಚುನಾವಣೆಯಲ್ಲಿ ಇಂದಿರಾ ಗಾಂಧಿ ಕರ್ನಾಟಕದ ಚಿಕ್ಕಮಗಳೂರಿನಿಂದ ರಾಜಕೀಯ ಪುನರಾಗಮನವನ್ನು ಮಾಡಿದ್ದರು. ಸೋನಿಯಾ ಗಾಂಧಿ ಅವರು ತಮ್ಮ ಚೊಚ್ಚಲ ಚುನಾವಣೆಯಲ್ಲಿ ರಾಜ್ಯದ ಬಳ್ಳಾರಿಯಿಂದ ಸ್ಪರ್ಧಿಸಿದ್ದರು. ಅಲ್ಲದೆ, ಅಮೇಥಿಯಿಂದಲೂ ಅವರು ಕಣದಲ್ಲಿದ್ದರು.

ರಾಹುಲ್ ಗಾಂಧಿ ಕರ್ನಾಟಕದಲ್ಲಿ ಇದುವರೆಗೆ 17 ರ‍್ಯಾಲಿ ಮತ್ತು ರೋಡ್‌ಶೋಗಳನ್ನು ನಡೆಸಿದ್ದರೆ, ಅವರ ಸಹೋದರಿ ಪ್ರಿಯಾಂಕಾ ಗಾಂಧಿ 19 ರ‍್ಯಾಲಿಗಳನ್ನು ಮಾಡಿದ್ದಾರೆ.

ಸೋನಿಯಾ ಗಾಂಧಿ ಅವರ ಸಾರ್ವಜನಿಕ ಸಭೆಗೆ ಪ್ರತಿಕ್ರಿಯಿಸಿದ ಜಗದೀಶ್ ಶೆಟ್ಟರ್ ಅವರ ಪ್ರತಿಸ್ಪರ್ಧಿ ಮಹೇಶ್ ಟೆಂಗಿನಕಾಯಿ, ರಾಜ್ಯಗಳಲ್ಲಿ ಚುನಾವಣೆ ಸಂದರ್ಭದಲ್ಲಿ ಗಾಂಧಿ ಕುಟುಂಬ ಗುಜರಾತ್ ಮತ್ತು ಗೋವಾಗೆ ಭೇಟಿ ನೀಡಿತು. ಆದರೆ ಏನೂ ಆಗಲಿಲ್ಲ. ಕರ್ನಾಟಕದಲ್ಲಿಯೂ ಅವರ ಭೇಟಿಯ ನಂತರ ಏನೂ ಬದಲಾಗುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಪೂರ್ಣ ಬಹುಮತದೊಂದಿಗೆ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದರು.

ಇದೇ ವೇಳೆ ಸೋನಿಯಾ ಗಾಂಧಿ ಕರ್ನಾಟಕ ಪ್ರವಾಸದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ಜಗದೀಶ್ ಶೆಟ್ಟರ್, ಸೋನಿಯಾ ಗಾಂಧಿ ಅವರ ಭೇಟಿ ಮತ್ತು ಸಾರ್ವಜನಿಕ ಸಭೆ ಖಂಡಿತವಾಗಿಯೂ ಕಾರ್ಯಕರ್ತರ ನೈತಿಕ ಬೆಂಬಲವನ್ನು ಹೆಚ್ಚಿಸುತ್ತದೆ ಮತ್ತು ಸಾರ್ವಜನಿಕ ಅಭಿಪ್ರಾಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುತ್ತದೆ ಎಂದು ಹೇಳಿದರು.

ಇನ್ನು, ಕಾಂಗ್ರೆಸ್ ನಾಯಕ ಮಾಣಿಕ್ಕಂ ಠಾಗೋರ್ ಮಾತನಾಡಿ, 'ಸೋನಿಯಾ ಗಾಂಧಿಯವರ ಹುಬ್ಬಳ್ಳಿ ಭೇಟಿಯು ಪಕ್ಷಕ್ಕೆ ಐತಿಹಾಸಿಕ ಕ್ಷಣ ಮತ್ತು ಪಕ್ಷಕ್ಕೆ ಉತ್ತಮ ಅವಕಾಶವಾಗಿದೆ. 1999 ರಲ್ಲಿ ಸೋನಿಯಾ ಗಾಂಧಿ ಅವರು ಕರ್ನಾಟಕದ ಬಳ್ಳಾರಿಯಿಂದ ಸ್ಪರ್ಧಿಸಿದ್ದರು. ಸೋನಿಯಾ ಗಾಂಧಿಯವರ ಈ ಭೇಟಿಯು ಪಕ್ಷವು 150 ಸ್ಥಾನಗಳನ್ನು ಗೆಲ್ಲುವುದನ್ನು ಖಚಿತಪಡಿಸುತ್ತದೆ' ಎಂದರು.

ಕರ್ನಾಟಕ ವಿಧಾನಸಭಾ ಚುನಾವಣೆಯು ಮೇ 10 ರಂದು ಒಂದೇ ಹಂತದಲ್ಲಿ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com