ಬೆಂಗಳೂರಿನಲ್ಲಿ ಮೋದಿ ರೋಡ್ ಶೋ: ಮಾಸ್ ಲೀಡರ್‌ಗೆ ಅದ್ಧೂರಿ ಸ್ವಾಗತ ನೀಡಲು ಬಿಜೆಪಿ ಅಭ್ಯರ್ಥಿಗಳಿಂದ ಭರ್ಜರಿ ಸಿದ್ಧತೆ

ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಮತ್ತು ಭಾನುವಾರ ಬೆಂಗಳೂರಿನಲ್ಲಿ ರೋಡ್ ಶೋ ನಡೆಸುತ್ತಿದ್ದು, ಬಿಜೆಪಿ ಅಭ್ಯರ್ಥಿಗಳು ಮಾಸ್ ಲೀಡರ್‌ಗೆ ಅದ್ಧೂರಿ ಸ್ವಾಗತ ನೀಡಲು ಬಿರುಸಿನ ತಯಾರಿ ನಡೆಸುತ್ತಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸಾಂದರ್ಭಿಕ ಚಿತ್ರ
ಪ್ರಧಾನಿ ನರೇಂದ್ರ ಮೋದಿ ಸಾಂದರ್ಭಿಕ ಚಿತ್ರ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಮತ್ತು ಭಾನುವಾರ ಬೆಂಗಳೂರಿನಲ್ಲಿ ರೋಡ್ ಶೋ ನಡೆಸುತ್ತಿದ್ದು, ಬಿಜೆಪಿ ಅಭ್ಯರ್ಥಿಗಳು ಮಾಸ್ ಲೀಡರ್‌ಗೆ ಅದ್ಧೂರಿ ಸ್ವಾಗತ ನೀಡಲು ಬಿರುಸಿನ ತಯಾರಿ ನಡೆಸುತ್ತಿದ್ದಾರೆ.

ಪ್ರಧಾನಿ ಮೋದಿಯ ಮಾಸ್ ಅಪ್ಪಿಲು ಮತಗಳಾಗಿ ಪರಿವರ್ತಿಸುತ್ತದೆ ಮತ್ತು ತಮ್ಮ ಗೆಲುವಿಗೆ ಸಹಾಯ ಮಾಡುತ್ತದೆ ಎಂದು ಬಿಜೆಪಿ ಅಭ್ಯರ್ಥಿಗಳು ಹೇಳುತ್ತಿದ್ದಾರೆ.

ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಅವರು ಪ್ರಧಾನಿ ಮೋದಿಗೆ ಪುಷ್ಪ ಗೌರವ ಸಲ್ಲಿಸುವ ಸಿದ್ಧತೆ ಕುರಿತು ತಮ್ಮ ಬೆಂಬಲಿಗರೊಂದಿಗೆ ಸಭೆ ನಡೆಸಿದರೆ, ಜಯನಗರ ಅಭ್ಯರ್ಥಿ ಸಿ.ಕೆ.ರಾಮಮೂರ್ತಿ ಬೆಳಗಿನ ಜಾವ ವಾಕಿಂಗ್ ಮಾಡುವವರನ್ನು ಭೇಟಿ ಮಾಡಿ ಜಯನಗರದ 24ನೇ ಮುಖ್ಯರಸ್ತೆಯಲ್ಲಿ ಭಾನುವಾರ ಸರತಿ ಸಾಲಿನಲ್ಲಿ ನಿಂತು ಪ್ರಧಾನಿಯನ್ನು ಸ್ವಾಗತಿಸುವಂತೆ ಮನವಿ ಮಾಡಿದರು.

ಇನ್ನು ಚಿಕ್ಕಪೇಟೆ ಶಾಸಕ ಉದಯ್ ಗರುಡಾಚಾರ್ ಮಾತನಾಡಿ, ಪ್ರಧಾನಿ ಮಾರ್ಗದುದ್ದಕ್ಕೂ ವಿವಿಧ ಬಣ್ಣಗಳ ಪುಷ್ಪಗಳ ಸುರಿಮಳೆಯಾಗುವಂತೆ ನೋಡಿಕೊಳ್ಳಲು ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸಿದರು. ಅಲ್ಲದೆ ಪ್ರಧಾನಿಯವರ ಬೆಂಗಾವಲು ವಾಹನದ ಮೇಲೆ ಯಾರೂ ಯಾವುದೇ ವಸ್ತುಗಳನ್ನು ಎಸೆಯದಂತೆ ನೋಡಿಕೊಳ್ಳಬೇಕು ಎಂದು ವಿಶೇಷವಾಗಿ ತಮ್ಮ ಬೆಂಬಲಿಗರಿಗೆ ಮನವಿ ಮಾಡಿದರು.

ಪ್ರಧಾನಿ ರೋಡ್ ಶೋ ನಡೆಯುವ ಮಾರ್ಗದಲ್ಲಿ ಎರಡು ಗಂಟೆ ಮುಂಚಿತವಾಗಿ ಬರುವಂತೆ ಬೆಂಬಲಿಗರಿಗೆ ತಿಳಿಸಲಾಗಿದೆ ಎಂದು ಸಚಿವ ಕೆ ಗೋಪಾಲಯ್ಯ ಹೇಳಿದ್ದಾರೆ.

ಶನಿವಾರ ಸಿವಿ ರಾಮನ್‌ನಗರದ ಸುರಂಜನದಾಸ್‌ ರಸ್ತೆಯಿಂದ ಮೋದಿಯವರ ರೋಡ್ ಶೋ ಆರಂಭಗೊಂಡು ಕೆಆರ್‌ ಪುರಂ, ಮಹದೇವಪುರ, ಶಿವಾಜಿನಗರ ಮತ್ತು ಶಾಂತಿನಗರದ ಮೂಲಕ ಸಾಗಲಿದೆ.

ಭಾನುವಾರ ಬೊಮ್ಮನಹಳ್ಳಿ, ಪದ್ಮನಾಭನಗರ, ಬಸವನಗುಡಿ, ಜಯನಗರ, ಚಿಕ್ಕಪೇಟೆ, ಮಹಾಲಕ್ಷ್ಮೀಪುರಂ, ವಿಜಯನಗರ, ಗೋವಿಂದರಾಜನಗರ, ರಾಜಾಜಿನಗರ ಮತ್ತು ಮಲ್ಲೇಶ್ವರಂನಲ್ಲಿ ಪ್ರಧಾನಿ ಮೋದಿ ರೋಡ್ ಶೋ ನಡೆಸಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com