ಗೆಲುವಿಗೆ ಅಡ್ಡಿಯಾಗಲಿಲ್ಲ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಕೇಸ್: ಸರ್ವಜ್ಞನಗರಕ್ಕೆ ಕೆ.ಜೆ ಜಾರ್ಜ್ ಬಾಸ್!

ಅಸೆಂಬ್ಲಿ ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳ ಕೊರತೆಯಿದೆ, ಕುಡಿಯುವ ನೀರಿನ ಅಗತ್ಯಗಳನ್ನು ಇನ್ನೂ ಪೂರೈಸಬೇಕಾಗಿದೆ ಎಂದು ಹೇಳಿದರು. ಶಾಸಕ, ಸಚಿವರಾಗಿದ್ದ ಅವಧಿಯಲ್ಲಿ ಹಲವು ಯೋಜನೆಗಳನ್ನು ಜಾರಿಗೆ ತಂದಿರುವುದಾಗಿ ತಿಳಿಸಿದರು.
ಕೆ.ಜೆ ಜಾರ್ಜ್ ಮತಯಾಚನೆ
ಕೆ.ಜೆ ಜಾರ್ಜ್ ಮತಯಾಚನೆ
Updated on

ಬೆಂಗಳೂರು: ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಕೆ.ಜೆ.ಜಾರ್ಜ್ ಶುಕ್ರವಾರ ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದಾದ್ಯಂತ ಸಂಚರಿಸಿ ಮತಯಾಚಿಸಿದರು.

ಕಲ್ಯಾಣನಗರ, ಲಿಂಗರಾಜಪುರ, ಕನಕದಾಸ ಲೇಔಟ್‌ನಲ್ಲಿ ಮತದಾರರೊಂದಿಗೆ ಸಂವಾದ ನಡೆಸಿದರು. ಹೆಣ್ಣೂರು ಮತ್ತು ಕೆ.ಜಿ.ಹಳ್ಳಿ ವಾರ್ಡ್‌ಗಳಲ್ಲಿ ಮಸೀದಿ ಸಮಿತಿ ಸದಸ್ಯರನ್ನು ಭೇಟಿ ಮಾಡಿದರು. ಹೆಣ್ಣೂರು ಟ್ರೀ ಪಾರ್ಕ್‌ನಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳನ್ನು ಪರಿಗಣಿಸಿ ತಮಗೆ ಮತ ನೀಡುವಂತೆ ಮನವಿ ಮಾಡಿದರು.

ಈ ವೇಳೆ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ಮಾತನಾಡಿದ ಜಾರ್ಜ್ ತಮ್ಮ ಅಸೆಂಬ್ಲಿ ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳ ಕೊರತೆಯಿದೆ, ಕುಡಿಯುವ ನೀರಿನ ಅಗತ್ಯಗಳನ್ನು ಇನ್ನೂ ಪೂರೈಸಬೇಕಾಗಿದೆ ಎಂದು ಹೇಳಿದರು. ಶಾಸಕ, ಸಚಿವರಾಗಿದ್ದ ಅವಧಿಯಲ್ಲಿ ಹಲವು ಯೋಜನೆಗಳನ್ನು ಜಾರಿಗೆ ತಂದಿರುವುದಾಗಿ ತಿಳಿಸಿದರು. ವಿವಿಧ ಕಂಪನಿಗಳ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್) ನಿಧಿಯಿಂದ 20 ಸರ್ಕಾರಿ ಶಾಲೆಗಳ ಸ್ಥಿತಿಯನ್ನು ಸುಧಾರಿಸಲಾಗಿದೆ ಎಂದು ಅವರು ಹೇಳಿದರು.

ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಬಿರುಸಿನ ರೋಡ್ ಶೋಗಳು ಮತ್ತು ಪಿಎಫ್‌ಐ ಮತ್ತು ಬಜರಂಗದಳವನ್ನು ನಿಷೇಧಿಸುವ ಭರವಸೆಯ ಕಾಂಗ್ರೆಸ್ ಪ್ರಣಾಳಿಕೆಯನ್ನು ಬಿಜೆಪಿ ಪ್ರಮುಖ ಚುನಾವಣಾ ವಿಷಯವಾಗಿ ಪರಿವರ್ತಿಸುವುದರಿಂದ ಯಾವುದೇ ವ್ಯತ್ಯಾಸವಾಗುವುದಿಲ್ಲ, ಜನರು ಬೆಲೆ ಏರಿಕೆ ಮತ್ತು ಕೋಮು ಸಮಸ್ಯೆಗಳನ್ನು ನೋಡಿದ್ದಾರೆ ಎಂದು ಅವರು ಸಮರ್ಥಿಸಿಕೊಂಡರು.

ಸರ್ವಜ್ಞನಗರ ವಿಧಾನಸಭಾ ಕ್ಷೇತ್ರವು ನಾಗವಾರ, ಎಚ್‌ಬಿಆರ್ ಲೇಔಟ್, ಕೆಜಿಹಳ್ಳಿ, ಲಿಂಗರಾಜಪುರ, ಮಾರುತಿಸೇವಾ ನಗರ, ಕಚರಕನಹಳ್ಳಿ, ಬಾಣಸವಾಡಿ ಮತ್ತು ಕಮ್ಮನಹಳ್ಳಿಯ ಎಂಟು ಬಿಬಿಎಂಪಿ ವಾರ್ಡ್‌ಗಳನ್ನು ಹೊಂದಿದ್ದು, ಒಂದು ಲಕ್ಷ ಮುಸ್ಲಿಮರು ಸೇರಿದಂತೆ 3.5 ಲಕ್ಷಕ್ಕೂ ಹೆಚ್ಚು ಮತದಾರರನ್ನು ಹೊಂದಿದೆ. ಲಿಂಗರಾಜಪುರಂ, ಮಾರುತಿ ಸೇವಾನಗರ ಮತ್ತು ಬಾಣಸವಾಡಿ ವಾರ್ಡ್‌ಗಳಲ್ಲಿ ಸಾಕಷ್ಟು ಕ್ರಿಶ್ಚಿಯನ್ ಮತ್ತು ತಮಿಳು ಮತದಾರರಿದ್ದಾರೆ.

ಈ ವಿಭಾಗವು ಕೆಲವು ಸೂಕ್ಷ್ಮ ಪ್ರದೇಶಗಳನ್ನು ಹೊಂದಿದೆ, ಅಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾದ ಘಟನೆಗಳು ವರದಿಯಾಗಿವೆ. ಕಮ್ಮನಹಳ್ಳಿ, ಬಾಣಸವಾಡಿ, ಹೆಣ್ಣೂರು ಬಡಾವಣೆಗಳಲ್ಲಿ ಗಲಾಟೆ, ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂದು ನಿವಾಸಿ ಕ್ಷೇಮಾಭಿವೃದ್ಧಿ ಸಂಘಗಳು ದೂರು ನೀಡಿವೆ. ಅವರ ಪ್ರಮುಖ ಎದುರಾಳಿ ಪದ್ಮನಾಭ ರೆಡ್ಡಿ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದಾರೆ.

2018 ರ ಚುನಾವಣೆಯಲ್ಲಿ ಜಾರ್ಜ್ ವಿರುದ್ಧ ಪೊಲೀಸ್ ಇಲಾಖೆ ಕಾರ್ಯಾಚರಣೆಗಳ ಮೇಲ್ವಿಚಾರಣೆಗಾಗಿ ಕೇಸರಿ ಪಕ್ಷವು ಡಿವೈಎಸ್ಪಿ ಗಣಪತಿ ಅವರ ಆತ್ಮಹತ್ಯೆ  ಪ್ರಕರಣ ಹಾಗೂ ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯ ಅವರನ್ನು ತಮ್ಮ ಸಲಹೆಗಾರರನ್ನಾಗಿ ನೇಮಿಸಿಕೊಂಡಿದ್ದರಿಂದ ಹಲವು ಸಮಸ್ಯೆಗಳು ಎದುರಾದರೂ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದ್ದರು.

ಈ ಚುನಾವಣೆಯಲ್ಲೂ ಗೆಲವು ಪುನರಾವರ್ತನೆಯಾಗುವ ನಿರೀಕ್ಷೆಯಲ್ಲಿದ್ದಾರೆ. ಮೂಲತಃ ಕೋಲಾರದವರಾದ ಮುಸ್ತಫಾ ಎಂಬ ಮುಸ್ಲಿಂ ಅಭ್ಯರ್ಥಿಯನ್ನು ಜೆಡಿಎಸ್ ಕಣಕ್ಕಿಳಿಸಿದೆ. ಎಸ್‌ಡಿಪಿಐ ಅಬ್ದುಲ್‌ ಹನ್ನಾನ್‌ರನ್ನು ಕಣಕ್ಕಿಳಿಸಿದ್ದು, ಮುಸ್ಲಿಂ ಮತಗಳನ್ನು ಕಸಿದುಕೊಳ್ಳುವ ನಿರೀಕ್ಷೆಯಲ್ಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com