ಬಜರಂಗ ದಳ ನಿಷೇಧ ವಿವಾದದಿಂದ ಬಿಜೆಪಿಗೆ ಹೆಚ್ಚು ಮತಗಳು ಬರಲಿವೆ: ಗೋವಾ ಸಿಎಂ ಪ್ರಮೋದ್ ಸಾವಂತ್

ಕಾಂಗ್ರೆಸ್ ಪಕ್ಷವು ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಜನರನ್ನು ವಿಭಜಿಸುತ್ತಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಭಾನುವಾರ ವಾಗ್ದಾಳಿ ನಡೆಸಿದ್ದಾರೆ.
ಪ್ರಮೋದ್ ಸಾವಂತ್
ಪ್ರಮೋದ್ ಸಾವಂತ್
Updated on

ಬೆಳಗಾವಿ: ಕಾಂಗ್ರೆಸ್ ಪಕ್ಷವು ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಜನರನ್ನು ವಿಭಜಿಸುತ್ತಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಭಾನುವಾರ ವಾಗ್ದಾಳಿ ನಡೆಸಿದ್ದಾರೆ.

ಬೆಳಗಾವಿಯಲ್ಲಿ ರೋಡ್ ಶೋ ನಡೆಸಿದ ಅವರು, ಕಾಂಗ್ರೆಸ್ ಜನರನ್ನು ಜಾತಿ ಮತ್ತು ಧರ್ಮದ ಹೆಸರಿನಲ್ಲಿ ವಿಭಜಿಸುತ್ತಿದೆ. ಆದರೆ, ನಾವು ಅಭಿವೃದ್ಧಿಯ ಮಾರ್ಗದಲ್ಲಿ ನಮಗೆ ಮತ ನೀಡುವಂತೆ ಜನರನ್ನು ಕೇಳುತ್ತಿದ್ದೇವೆ ಮತ್ತು ಜನರು ನಮಗೆ ಮತ ಹಾಕುತ್ತಾರೆ ಎಂದು ಹೇಳಿದರು. 

'ಡಬಲ್ ಇಂಜಿನ್' ಸರ್ಕಾರವು ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತಿರುವುದರಿಂದ ಕರ್ನಾಟಕದ ಜನರು ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಅಧಿಕಾರಕ್ಕೆ ತರುತ್ತಾರೆ. ಕರ್ನಾಟಕದಲ್ಲಿ ನಡೆದಿರುವ ಮೂಲಸೌಕರ್ಯ ಅಭಿವೃದ್ಧಿಗೆ ಡಬಲ್ ಇಂಜಿನ್ ಸರ್ಕಾರವೇ ಕಾರಣ. ಕರ್ನಾಟಕದ ಜನರು ಕಮಲದ ಚಿಹ್ನೆಗೆ ಮತ ಹಾಕಲಿದ್ದಾರೆ' ಎಂದು ಅವರು ಹೇಳಿದರು.

ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಬಜರಂಗ ದಳವನ್ನು ನಿಷೇಧಿಸುವ ಭರವಸೆ ನೀಡಿದ ನಂತರ ಭಗವಾನ್ ಹನುಮಂತನ ಸುತ್ತಲಿನ ಧಾರ್ಮಿಕ ವಿವಾದವು ಈ ಚುನಾವಣೆಯಲ್ಲಿ ಪ್ರಮುಖ ವಿಚಾರವಾಗಿ ಬದಲಾಗಿದೆ. ಜನರಿಗೆ ಭಜರಂಗಬಲಿ ಬೇಕು. ಹೀಗಾಗಿ, ಬಿಜೆಪಿಗೆ ಮತಹಾಕಲು ಜನರು ಖಂಡಿತವಾಗಿಯೂ ಸಿದ್ಧರಿದ್ದಾರೆ. ಇದರಿಂದ ಶೇ 10ರಷ್ಟು ಹೆಚ್ಚು ಮತಗಳನ್ನು ನಾವು ಪಡೆಯುತ್ತೇವೆ ಎಂದು ತಿಳಿಸಿದರು. 

ಮುಂಬರುವ ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷವು ಬಜರಂಗದಳ, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಇತರ ಸಂಘಟನೆಗಳನ್ನು ನಿಷೇಧಿಸುವುದು ಸೇರಿದಂತೆ ಕಾನೂನಿನ ಪ್ರಕಾರ 'ನಿರ್ಣಾಯಕ ಕ್ರಮ' ತೆಗೆದುಕೊಳ್ಳುವುದಾಗಿ ಹೇಳಿದೆ.

ಜಾತಿ ಮತ್ತು ಧರ್ಮದ ಆಧಾರದ ಮೇಲೆ ಸಮುದಾಯಗಳ ನಡುವೆ ದ್ವೇಷ ಹರಡುವ ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ದೃಢ ಮತ್ತು ನಿರ್ಣಾಯಕ ಕ್ರಮ ಕೈಗೊಳ್ಳಲು ಪಕ್ಷ ಬದ್ಧವಾಗಿದೆ ಎಂದು ಕಾಂಗ್ರೆಸ್ ಪ್ರಣಾಳಿಕೆ ಹೇಳಿದೆ.

ಮೋದಿ ವಿರುದ್ಧ ಕಾಂಗ್ರೆಸ್ ನಿಂದನೆ ಮಾಡುತ್ತಿದೆ ಎಂದು ಆರೋಪಿಸಿದ ಅವರು, ಕರ್ನಾಟಕದ ಜನರು ಈ ಕಪ್ಪು ಸಂಸ್ಕೃತಿಯನ್ನು ಬೆಂಬಲಿಸುವುದಿಲ್ಲ ಮತ್ತು ಮತ ಚಲಾಯಿಸುವಾಗ 'ಜೈ ಭಜರಂಗಬಲಿ' ಎಂದು ಹೇಳುವ ಮೂಲಕ ನಿಂದನೆ ಮಾಡುವವರನ್ನು ಶಿಕ್ಷಿಸಬೇಕು ಎಂದು ಹೇಳಿದರು. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com