ಸಂದರ್ಶನ: ಜನರ ಮೂಡ್ ಬಿಜೆಪಿ ಪರವಾಗಿದೆ, ಮತ್ತೆ ಅಧಿಕಾರಕ್ಕೆ ಬರುತ್ತೇವೆ - ಸಿಎಂ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಸ್ವಕ್ಷೇತ್ರವಾದ ಶಿಗ್ಗಾಂವಿಯನ್ನು ಉಳಿಸಿಕೊಳ್ಳುವ ಮೂಲಕ ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸದಲ್ಲಿದ್ದಾರೆ. ಅವರ ವಿಶ್ವಾಸದ ಹಿಂದಿನ ಕಾರಣ, ರಾಜ್ಯದಲ್ಲಿನ ಬಿಜೆಪಿ...
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಸ್ವಕ್ಷೇತ್ರವಾದ ಶಿಗ್ಗಾಂವಿಯನ್ನು ಉಳಿಸಿಕೊಳ್ಳುವ ಮೂಲಕ ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸದಲ್ಲಿದ್ದಾರೆ. ಅವರ ವಿಶ್ವಾಸದ ಹಿಂದಿನ ಕಾರಣ, ರಾಜ್ಯದಲ್ಲಿನ ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಗಳು ಮತ್ತು ಕೋವಿಡ್ ಸಾಂಕ್ರಾಮಿಕ ಹಾಗೂ ನೈಸರ್ಗಿಕ ವಿಕೋಪಗಳ ಸಂದರ್ಭದಲ್ಲಿ ಸರ್ಕಾರ ತೆಗೆದುಕೊಂಡ ಕ್ರಮಗಳು ಎಂದು ದಿ ನ್ಯೂ ಸಂಡೆ ಎಕ್ಸ್‌ಪ್ರೆಸ್‌ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಹೇಳಿದ್ದಾರೆ.

ಈ ಚುನಾವಣೆಯಲ್ಲಿ ಬಿಜೆಪಿ ಪ್ರಮುಖವಾಗಿ ಯಾವ ವಿಷಯಗಳನ್ನು ಮುಂದಿಟ್ಟುಕೊಂಡು ಮತಯಾಚಿಸುತ್ತಿದೆ?
ಮೂರು ಪ್ರಮುಖ ವಿಷಯಗಳ ಆಧಾರದ ಮೇಲೆ ನಾನು ಮತ ಕೇಳುತ್ತಿದ್ದೇವೆ. ನಮ್ಮ ಸರ್ಕಾರ ಇತರ ಹಿಂದಿನ ಸರ್ಕಾರಗಳಿಗಿಂತ ಭಿನ್ನವಾಗಿ ಕೆಲಸ ಮಾಡಿದೆ. ಮೊದಲನೆಯದಾಗಿ, ಕೋವಿಡ್-19 ಸಾಂಕ್ರಾಮಿಕ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಿದೆ. ಆರೋಗ್ಯ ತುರ್ತು ಪರಿಸ್ಥಿತಿಯನ್ನು ಪರಿಹರಿಸಲು ತಂತ್ರಜ್ಞಾನವನ್ನು ಬಳಸಿಕೊಂಡು ಸಾಕಷ್ಟು ವಿಭಿನ್ನವಾಗಿ ಕಾರ್ಯನಿರ್ವಹಿಸಿತು. ಇದು ಐಸಿಯು ಹಾಸಿಗೆಗಳು, ಆಮ್ಲಜನಕ ಪೂರೈಕೆ ಸೇರಿದಂತೆ ಹಲವು ಸಮಸ್ಯೆಗಳನ್ನು ಪರಿಹರಿಸಿದೆ. ಎರಡನೆಯದಾಗಿ, ಪ್ರವಾಹದ ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದೆ. ನಮ್ಮ ಅಧಿಕಾರಾವಧಿಯಲ್ಲಿ ಪ್ರವಾಹವು ಸಾಕಷ್ಟು ವಿಚಿತ್ರವಾಗಿತ್ತು. ಏಕೆಂದರೆ ರಾಜ್ಯದಾದ್ಯಂತ ಅತಿವೃಷ್ಟಿ ಉಂಟಾಯಿತು. ಆದರೆ ನಮ್ಮ ಸರ್ಕಾರವು ಅದನ್ನು ಹೆಚ್ಚು ಸಮರ್ಥವಾಗಿ ನಿಭಾಯಿಸಿದೆ. ಆಸ್ತಿ ಮತ್ತು ಬೆಳೆ ನಷ್ಟಕ್ಕೆ ಪರಿಹಾರವನ್ನು ವಿತರಿಸಿದೆ. ಇದು ರಾಜ್ಯದ ಇತಿಹಾಸದಲ್ಲಿಯೇ ಅತ್ಯಧಿಕವಾಗಿದೆ ಎಂದರು.

ಉತ್ತರ ಕರ್ನಾಟಕದ ಪ್ರಮುಖ ಭಾಗಗಳು ಇನ್ನೂ ಏಕೆ ಅಭಿವೃದ್ಧಿಯಾಗುತ್ತಿಲ್ಲ?
ಹಿಂದಿನ ಸರ್ಕಾರಗಳ ದುರಾಡಳಿತವೇ ಇದಕ್ಕೆ ಕಾರಣ ಎಂದು ನಾನು ಖಡಾಖಂಡಿತವಾಗಿ ಹೇಳುತ್ತೇನೆ. ಅಲ್ಲೊಂದು ಇಲ್ಲೊಂದು ಪ್ರಯತ್ನಗಳು ನಡೆದಿವೆಯೇ ಹೊರತು ಸಮಗ್ರವಾಗಿ ನಡೆದಿಲ್ಲ. ಈ ಪ್ರದೇಶದ ಪ್ರಮುಖ ಕಾಂಗ್ರೆಸ್ ನಾಯಕರು ದಶಕಗಳ ಕಾಲ ಅಧಿಕಾರದಲ್ಲಿದ್ದರೂ, ಪ್ರಾದೇಶಿಕ ಅಸಮತೋಲನವನ್ನು ಪರಿಹರಿಸಲು ಯಾವುದೇ ಕಾಂಕ್ರೀಟ್ ನೀತಿಗಳು ಮತ್ತು ಕಾರ್ಯಕ್ರಮಗಳನ್ನು ರೂಪಿಸಿಲ್ಲ. ಆದರೆ ಈ ಹಿಂದೆಯೂ ಬಿಜೆಪಿ ಸರ್ಕಾರ ಈ ಸಮಸ್ಯೆಯನ್ನು ಪರಿಹರಿಸಲು ಇನ್ನೂ ಹೆಚ್ಚಿನ ಪ್ರಯತ್ನಗಳನ್ನು ಮಾಡಿದೆ. ಕಳೆದ ಮೂರು-ನಾಲ್ಕು ವರ್ಷಗಳಲ್ಲಿ, ಗಮನಾರ್ಹ ಬದಲಾವಣೆಗಳನ್ನು ತರಲಾಗಿದೆ ಮತ್ತು ಈ ಪ್ರದೇಶವು ಈಗ ನಿಧಾನವಾಗಿ ರಾಜ್ಯದ ಇತರ ಭಾಗಗಳೊಂದಿಗೆ ಅಭಿವೃದ್ಧಿ ಕಾಣುತ್ತಿದೆ ಎಂದರು.

ನಿಮ್ಮ ಕ್ಷೇತ್ರದ ಜನ ನಿಮ್ಮ ಪರವಾಗಿ ಇದ್ದಾರೆ, ಆದರೆ ಇಡೀ ಕರ್ನಾಟಕದ ನೈಜ ಚಿತ್ರಣ ಏನು?
ನನ್ನ ಕ್ಷೇತ್ರದಂತೆ ರಾಜ್ಯಾದ್ಯಂತ ಒಂದೇ ರೀತಿಯ ದೃಶ್ಯ ಕಂಡು ಬಂದಿದ್ದು, ಜನ ಮೂಡ್ ಬಿಜೆಪಿ ಪರವಾಗಿದೆ. ಇದಲ್ಲದೆ, ನಾವು ಕ್ಷೇತ್ರ ಮತ್ತು ಪ್ರದೇಶವನ್ನು ವಿಭಾಗಿಸಿ ನೋಡುವುದಿಲ್ಲ. ಎಲ್ಲೆಡೆ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲಾಗುತ್ತಿದೆ. ಸಾಕಷ್ಟು ಬಹುಮತದೊಂದಿಗೆ ಅಧಿಕಾರ ಉಳಿಸಿಕೊಳ್ಳುವುದರಲ್ಲಿ ನಮಗೆ ಯಾವುದೇ ಅನುಮಾನವಿಲ್ಲ ಎಂದರು.

ಭ್ರಷ್ಟಾಚಾರ ವಿಚಾರದಲ್ಲಿ ಬಿಜೆಪಿ ಸರ್ಕಾರವನ್ನು ಕಾಂಗ್ರೆಸ್ ನಿರಂತರವಾಗಿ ಟಾರ್ಗೆಟ್ ಮಾಡುತ್ತಿದೆ. ಇದನ್ನು ನೀವು ಹೇಗೆ ಎದುರಿಸುತ್ತೀರಿ?
ಇದು ಕಾಂಗ್ರೆಸ್ ಆರಂಭಿಸಿರುವ ಕೆಟ್ಟ ಪ್ರಚಾರ. 40 ಪರ್ಸೆಂಟ್ ಕಮಿಷನ್ ಸೇರಿದಂತೆ - ಅವರು ನಮ್ಮ ಮೇಲೆ ಹೊರಿಸುತ್ತಿರುವ ಎಲ್ಲಾ ಆರೋಪಗಳು ಆಧಾರರಹಿತವಾಗಿವೆ. ನಾನೇ ಗುತ್ತಿಗೆದಾರರ ಸಂಘದ ಅಧ್ಯಕ್ಷರಿಗೆ ಲಂಚ ಕೇಳಿರುವ ನಿರ್ದಿಷ್ಟ ಪ್ರಕರಣಗಳ ದಾಖಲೆಗಳನ್ನು ನೀಡುವಂತೆ ಕೇಳಿಕೊಂಡೆ. ಆದರೆ ಅವರ ಆರೋಪಕ್ಕೆ ಯಾವುದೇ ಪುರಾವೆಗಳಿಲ್ಲ. ಸುಳ್ಳು ಆರೋಪ ಮಾಡಿದ್ದಕ್ಕಾಗಿ ಗುತ್ತಿಗೆದಾರರ ಸಂಘದ ಅಧ್ಯಕ್ಷರ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ ಮಾಡಲಾಗಿತ್ತು ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com