ಸಿದ್ದರಾಮಯ್ಯ ಸೋಲಿಸಲು ಕಾಂಗ್ರೆಸ್ ಷಡ್ಯಂತ್ರ- ಬಿಜೆಪಿ

ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಸಿದ್ದರಾಮಯ್ಯ. ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯ. ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು:  ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರು, ಕಾಂಗ್ರೆಸ್‌ನೊಳಗಿನ ಗುಂಪು ತನ್ನ ಹಿರಿಯ ನಾಯಕನ ವಿರುದ್ಧ ಪಿತೂರಿ ನಡೆಸುತ್ತಿರುವುದರಿಂದ ವರುಣಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಲಿಸಲಿದ್ದಾರೆ ಎಂದು ಹೇಳಿದರು. 

ಮಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಟೀಲ್,  ವರುಣಾ ವಿಧಾನಸಭಾ ಕ್ಷೇತ್ರದಿಂದ ಸಿದ್ದರಾಮಯ್ಯ ಸೋಲಿಸಲು ಕಾಂಗ್ರೆಸ್‌ನ ಒಂದು ಗುಂಪು ಷಡ್ಯಂತ್ರ ನಡೆಸುತ್ತಿದೆ ಎಂದು ಆರೋಪಿಸಿದರು. ಇದೇ ಗುಂಪು  2019 ರ ಲೋಕಸಭೆ ಚುನಾವಣೆಯಲ್ಲಿ ಕಲಬುರಗಿಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ್ಧ  ಕೆಲಸ ಮಾಡಿತ್ತು ಎಂದರು. 

ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಗೆಲ್ಲಲಿದೆ ಎಂದು ಹೇಳಿದ ಅವರು, ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಪ್ರವಾಸದ ನಂತರ ಪಕ್ಷದ ನಿರೀಕ್ಷಿತ ಸಂಖ್ಯೆ ಹೆಚ್ಚಾಗಲಿದೆ ಎಂದ ಅವರು, ಕಳೆದ 18 ತಿಂಗಳ ಹಿಂದೆಯೇ ಬಿಜೆಪಿ ಚುನಾವಣಾ ತಯಾರಿ ಆರಂಭಿಸಿತ್ತು. ಚುನಾವಣೆ ಎದುರಿಸಲು ಪಕ್ಷ ತನ್ನ ಬೂತ್ ಮಟ್ಟದ ಘಟಕಗಳನ್ನು ಸಾಕಷ್ಟು ಮುಂಚೆಯೇ ಬಲಪಡಿಸಿದೆ ಮತ್ತು ಸರ್ಕಾರದ ಸಾಧನೆಗಳ ಆಧಾರದ ಮೇಲೆ ಜನರನ್ನು ತಲುಪಿದೆ ಎಂದು ತಿಳಿಸಿದರು. 

ರಾಜ್ಯದ ಎಲ್ಲಾ 224 ಕ್ಷೇತ್ರಗಳಿಗೂ ಭೇಟಿ ನೀಡಿದ್ದು, ಜೆಡಿಎಸ್‌ನ ಭದ್ರಕೋಟೆಯಾಗಿದ್ದ ಮೈಸೂರು ಕ್ಷೇತ್ರ ಕೂಡ ಈ ಬಾರಿ ಬಿಜೆಪಿಗೆ ಬೆಂಬಲ ನೀಡಲಿದೆ. ಪಕ್ಷವು ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ನೀಡಿದ್ದು, ಕರಾವಳಿ ಜಿಲ್ಲೆಗಳಲ್ಲಿ ಎಲ್ಲ ಸಮುದಾಯಗಳು ಬಿಜೆಪಿ ಪರವಾಗಿವೆ. ದಕ್ಷಿಣ ಕನ್ನಡ ಜಿಲ್ಲೆಯ ಎಂಟು ಕ್ಷೇತ್ರಗಳಲ್ಲಿಯೂ ಪಕ್ಷ ಜಯಭೇರಿ ಬಾರಿಸಲಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com