ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ವಿರುದ್ಧ ಡಿಜಿ, ಐಜಿಗೆ ಕಾಂಗ್ರೆಸ್ ದೂರು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದ  ಹತ್ಯೆ ಸಂಚಿಗೆ ಸಂಬಂಧಿಸಿದೆ ಎನ್ನಲಾದ ಆಡಿಯೋಗೆ ಸಂಬಂಧಿಸಿದಂತೆ ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ವಿರುದ್ಧ ಕಾಂಗ್ರೆಸ್ ರಾಜ್ಯದ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದೆ.
ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್
ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದ  ಹತ್ಯೆ ಸಂಚಿಗೆ ಸಂಬಂಧಿಸಿದೆ ಎನ್ನಲಾದ ಆಡಿಯೋಗೆ ಸಂಬಂಧಿಸಿದಂತೆ ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ವಿರುದ್ಧ ಕಾಂಗ್ರೆಸ್ ರಾಜ್ಯದ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪರವಾಗಿ ಪಕ್ಷದ ಮುಖಂಡ ರಮೇಶ್ ಬಾಬು ಸೋಮವಾರ ದೂರು ದಾಖಲಿಸಿದ್ದಾರೆ..

ದೂರು ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಬಾಬು, ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬವನ್ನು ಹತ್ಯೆ ಮಾಡುವುದಾಗಿ ಮಣಿಕಂಠ ರಾಥೋಡ್ ಹೇಳಿದ್ದಾನೆ ಎನ್ನಲಾದ ಆಡಿಯೋ ಎರಡು ದಿನಗಳ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಒಂದು ವರ್ಷದ ಹಿಂದೆ ಕೂಡಾ ರಾಥೋಡ್ ಇದೇ ರೀತಿಯ ಹೇಳಿಕೆ ನೀಡಿದ್ದರು. ಆ ಸಂದರ್ಭದಲ್ಲೂ ಪೊಲೀಸರಿಗೂ ದೂರು ನೀಡಿದ್ದೇವೆ ಎಂದು ತಿಳಿಸಿದರು.

ಆದಾಗ್ಯೂ, ದುಷ್ಕರ್ಮಿ ವಿರುದ್ಧ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಮತ್ತೆ ದೂರು ಸಲ್ಲಿಸಿದ್ದೇವೆ. ದೂರು ಸಂಬಂಧ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಮತ್ತು ಮಣಿಕಂಠ ರಾಥೋಡ್ ನನ್ನು ಬಂಧಿಸಬೇಕು ಎಂದು ಡಿಜಿ ಮತ್ತು ಐಜಿ ಅವರನ್ನು ಮನವಿ ಮಾಡಿರುವುದಾಗಿ ವಿವರಿಸಿದರು.

ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಕುಟುಂಬಕ್ಕೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಪೊಲೀಸರಿಗೆ ಮನವಿ ಮಾಡಿದ್ದೇವೆ ಎಂದು ರಮೇಶ್ ಬಾಬು  ತಿಳಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com