ಕಾಂಗ್ರೆಸ್ ಮುಸ್ಲಿಮರನ್ನು ವೋಟ್ ಬ್ಯಾಂಕ್ ಆಗಿ ಬಳಸಿಕೊಂಡಿದೆ: ಎಚ್‌ಡಿ ಕುಮಾರಸ್ವಾಮಿ

ಕಾಂಗ್ರೆಸ್ ಪಕ್ಷವು ಮುಸ್ಲಿಂ ಸಮುದಾಯವನ್ನು ಕೇವಲ ಮತಬ್ಯಾಂಕ್ ಆಗಿ ಬಳಸಿಕೊಂಡಿದೆ. ಆದರೆ, ಅವರ ಕಲ್ಯಾಣಕ್ಕಾಗಿ ಏನನ್ನೂ ಮಾಡಿಲ್ಲ ಎಂದು ಜೆಡಿಎಸ್ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ

ಮಂಗಳೂರು: ಕಾಂಗ್ರೆಸ್ ಪಕ್ಷವು ಮುಸ್ಲಿಂ ಸಮುದಾಯವನ್ನು ಕೇವಲ ಮತಬ್ಯಾಂಕ್ ಆಗಿ ಬಳಸಿಕೊಂಡಿದೆ. ಆದರೆ, ಅವರ ಕಲ್ಯಾಣಕ್ಕಾಗಿ ಏನನ್ನೂ ಮಾಡಿಲ್ಲ ಎಂದು ಜೆಡಿಎಸ್ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಇಲ್ಲಿಗೆ ಸಮೀಪದ ಕೃಷ್ಣಾಪುರದಲ್ಲಿ ಭಾನುವಾರ ಸಂಜೆ ತಮ್ಮ ಪಕ್ಷದ ಮಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಮೊಹಿಯುದ್ದೀನ್‌ ಬಾವ ಪರ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಹಾರ್ಡ್‌ಕೋರ್ ಹಿಂದೂ ನಾಯಕರನ್ನು ಪಕ್ಷಕ್ಕೆ ಸ್ವಾಗತಿಸುತ್ತಿದೆ. ಆದರೆ, ಬಿಜೆಪಿಯೊಂದಿಗೆ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದೆ ಎಂದು ಆರೋಪಿಸುತ್ತದೆ ಎಂದು ದೂರಿದರು.

ಎರಡು ರಾಷ್ಟ್ರೀಯ ಪಕ್ಷಗಳು ತಮ್ಮ ರಾಜಕೀಯ ಲಾಭಕ್ಕಾಗಿ ಯುವಕರನ್ನು ಅನಗತ್ಯವಾಗಿ ಬಳಸಿಕೊಳ್ಳುತ್ತಿವೆ. ಬಿಜೆಪಿ ಸರ್ಕಾರ ಚುನಾವಣೆ ಹೊಸ್ತಿಲಲ್ಲಿ ಸಮುದಾಯದ ಮತಗಳನ್ನು ಗಮನದಲ್ಲಿಟ್ಟುಕೊಂಡು ಬಿಲ್ಲವ ಅಭಿವೃದ್ಧಿ ನಿಗಮ ಘೋಷಣೆ ಮಾಡಿದೆ. ಜನ ಜೆಡಿಎಸ್ ಮೇಲೆ ವಿಶ್ವಾಸವಿಡುತ್ತಾರೆ ಎಂದು ಭರವಸೆ ವ್ಯಕ್ತಪಡಿಸಿದರು.

ಪಕ್ಷದ ಕಾರ್ಯಾಧ್ಯಕ್ಷ ಬಿ.ಎಂ. ಫಾರೂಕ್, ಬಿ.ಎ. ಮೊಹಿಯುದ್ದೀನ್ ಬಾವ, ಪಕ್ಷದ ಮುಖಂಡರಾದ ಅಕ್ಷಿತ್ ಸುವರ್ಣ, ಎಂ.ಬಿ. ಸದಾಶಿವ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com