ಜನ ಸಾಮಾನ್ಯರ ಜತೆ ಬಿಎಂಟಿಸಿ ಬಸ್ನಲ್ಲಿ ರಾಹುಲ್ ಗಾಂಧಿ ಪ್ರಯಾಣ
ರಾಜ್ಯ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಭಾನುವಾರ ಬೆಂಗಳೂರಿನಲ್ಲಿಯೇ ವಾಸ್ತವ್ಯ ಹೂಡಿದ್ದರು. ಇಂದು ಬೆಳಗ್ಗೆ ಕನ್ನಿಂಗ್ಹ್ಯಾಮ್ ರಸ್ತೆಯ ಕೆಫೆಯಲ್ಲಿ ಗ್ರಾಹಕರ ಜೊತೆ ಕಾಫಿ ಕುಡಿದು...
Published: 08th May 2023 11:51 AM | Last Updated: 08th May 2023 06:30 PM | A+A A-

ರಾಹುಲ್ ಗಾಂಧಿ
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಭಾನುವಾರ ಬೆಂಗಳೂರಿನಲ್ಲಿಯೇ ವಾಸ್ತವ್ಯ ಹೂಡಿದ್ದರು. ಇಂದು ಬೆಳಗ್ಗೆ ಕನ್ನಿಂಗ್ಹ್ಯಾಮ್ ರಸ್ತೆಯ ಕೆಫೆಯಲ್ಲಿ ಗ್ರಾಹಕರ ಜೊತೆ ಕಾಫಿ ಕುಡಿದು, ಬಳಿಕ ಬಿಎಂಟಿಸಿ ಬಸ್ನಲ್ಲಿ ಪ್ರಯಾಣ ಮಾಡಿದರು.
ಬಿಎಂಟಿಸಿ ಬಸ್ ನಲ್ಲಿ ಜನ ಸಾಮಾನ್ಯರೊಂದಿಗೆ ಪ್ರಯಾಣಿಸುವ ಮೂಲಕ ಕರ್ನಾಟಕದ ಬಗ್ಗೆ ಅವರ ದೃಷ್ಟಿಕೋನವನ್ನು ಅರ್ಥಮಾಡಿಕೊಳ್ಳಲು ಯತ್ನಿಸಿದರು.
ಬಸ್ ನಲ್ಲಿಯೇ ಅಗತ್ಯ ವಸ್ತುಗಳ ಬೆಲೆ ಏರಿಕೆ, ಗೃಹಲಕ್ಷ್ಮಿ ಯೋಜನೆ, ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಕಾಂಗ್ರೆಸ್ ಖಾತರಿ ಸೇರಿದಂತೆ ವಿವಿಧ ವಿಷಯಗಳ ಕುರಿತು ರಾಹುಲ್ ಗಾಂಧಿ ಅವರೊಂದಿಗೆ ಮಹಿಳೆಯರು ಚರ್ಚಿಸಿದರು.
ಇದನ್ನು ಓದಿ: 40 ಪರ್ಸೆಂಟ್ ಕಮಿಷನ್‌ನಲ್ಲಿ ಯಾವ ಇಂಜಿನ್ ಎಷ್ಟು ಪಡೆದುಕೊಂಡಿದೆ; ಕರ್ನಾಟಕದ ಜನರಿಗೆ ತಿಳಿಸಿ: ಮೋದಿಗೆ ರಾಹುಲ್ ಆಗ್ರಹ
ಬೆಂಗಳೂರಿನ ಹೋಟೆಲ್‌ನಲ್ಲಿ ಡೆಲಿವರಿ ಕಾರ್ಮಿಕರೊಂದಿಗೆ ಸಂವಾದ ನಡೆಸಿದ ಮಾಜಿ ಸಂಸದ ರಾಹುಲ್ ಗಾಂಧಿ, ಡೆಲಿವರಿ ಕೆಲಸಗಾರರ ಜೀವನ, ಸ್ಥಿರ ಉದ್ಯೋಗದ ಕೊರತೆ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಗ್ಗೆ ಚರ್ಚಿಸಿದರು.