ಈ ಚುನಾವಣೆ ಬಿಜೆಪಿಯ ಅಭಿವೃದ್ಧಿ ಅಜೆಂಡಾ- ಕಾಂಗ್ರೆಸ್‌ನ ಒಡೆದಾಳುವ ನೀತಿ ನಡುವಣ ಹೋರಾಟ: ಸಿಎಂ ಬೊಮ್ಮಾಯಿ

ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯು ಬಿಜೆಪಿಯ ಅಭಿವೃದ್ಧಿ ಅಜೆಂಡಾ ಮತ್ತು ಕಾಂಗ್ರೆಸ್‌ನ ಒಡೆದು ಆಳುವ ನೀತಿಯ ನಡುವಿನ ಹೋರಾಟವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯು ಬಿಜೆಪಿಯ ಅಭಿವೃದ್ಧಿ ಅಜೆಂಡಾ ಮತ್ತು ಕಾಂಗ್ರೆಸ್‌ನ ಒಡೆದು ಆಳುವ ನೀತಿಯ ನಡುವಿನ ಹೋರಾಟವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಶಿಗ್ಗಾಂವಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಬೊಮ್ಮಾಯಿ, ಕೋವಿಡ್-19 ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಿದ್ದೇವೆ, ಮನೆ ಕಳೆದುಕೊಂಡ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಹಾಗೂ ವಿವಿಧ ಮನೆಗಳ ನಿರ್ಮಾಣಕ್ಕೆ 5 ಲಕ್ಷ ರೂ. ಅನುದಾನ ವಿತರಿಸಿದ್ದೇವೆ. ಶಿಗ್ಗಾಂವಿಯಲ್ಲಿ 300 ಹೊಸ ತರಗತಿ ಕೊಠಡಿಗಳ ನಿರ್ಮಾಣ ಪ್ರಗತಿಯಲ್ಲಿದೆ ಎಂದರು.

ಲಿಂಗಾಯತ ಫೋರಂ ಒಂದು ಕಾಲ್ಪನಿಕ ಸಂಸ್ಥೆ

ಇದಕ್ಕೂ ಮುನ್ನ ಹುಬ್ಬಳ್ಳಿಯಲ್ಲಿ ಮಾತನಾಡಿದ ಬೊಮ್ಮಾಯಿ, ಲಿಂಗಾಯತ ವೇದಿಕೆ ಕಾಲ್ಪನಿಕ ಸಂಸ್ಥೆಯಾಗಿದ್ದು, ಅದು ಅಸ್ತಿತ್ವದಲ್ಲಿಯೇ ಇಲ್ಲ. ವೀರಶೈವ ಬಹಳ ದೊಡ್ಡ ಸಮುದಾಯವಾಗಿದ್ದು, ಯಾವುದೇ ಸಂಘಟನೆಗೆ ಒಳಪಟ್ಟಿಲ್ಲ. ವೀರಶೈವ ಮಹಾಸಭಾಕ್ಕೆ ಹೆಚ್ಚಿನ ಗೌರವ ನೀಡಲಾಗುತ್ತಿದ್ದು, ಯಾವುದೇ ಸಂಘಟನೆಯನ್ನು ಚುನಾವಣೆ ಉದ್ದೇಶಕ್ಕೆ ಬಳಸಿಕೊಳ್ಳುವುದು ಸರಿಯಲ್ಲ ಎಂದರು.

'ನಾಲ್ಕೈದು ಜನ ಏನಾದರೂ ಹೇಳಿದರೆ ಅದು ಲಿಂಗಾಯತರ ಧ್ವನಿಯಾಗುತ್ತಾ?. ಲಿಂಗಾಯತ ಸಮುದಾಯ ಸಾಗರ ಇದ್ದಂತೆ. ಲಿಂಗಾಯತ ಫೋರಂ ಚುನಾವಣೆ ಸಂದರ್ಭದಲ್ಲಿ ಹುಟ್ಟಿಕೊಂಡ ಸಂಘಟನೆಯಾಗಿದೆ' ಎಂದರು.

ಭ್ರಷ್ಟಾಚಾರದ ಕುರಿತು ಬಿಜೆಪಿ ವಿರುದ್ಧ ಕಾಂಗ್ರೆಸ್‌ನ ಜಾಹೀರಾತು ಪ್ರಚಾರದ ಕುರಿತು ಪ್ರತಿಕ್ರಿಯಿಸಿದ ಬೊಮ್ಮಾಯಿ, ಚುನಾವಣಾ ಆಯೋಗವು ಕೇಳಿದಾಗ ಕಾಂಗ್ರೆಸ್ ಬಳಿ ಯಾವುದೇ ದಾಖಲೆ ಇರಲಿಲ್ಲ. ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಕಾಂಗ್ರೆಸ್ ನಾಯಕರು ಭ್ರಷ್ಟಾಚಾರದ ಆರೋಪ ಎದುರಿಸುತ್ತಿದ್ದಾರೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com