ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ವಂಡರ್ ಲಾ ರೆಸಾರ್ಟ್ ಮೇಲೆ ಐಟಿ ಅಧಿಕಾರಿಗಳು ದಾಳಿ

ಮತದಾರರಿಗೆ ಹಂಚಲು ಹಣ ಸಂಗ್ರಹಿಸಿಟ್ಟಿರುವ ಅನುಮಾನದ ಮೇರೆಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಂಗಳವಾರ ರಾಮನಗರ ಜಿಲ್ಲೆ ಬಿಡದಿ ಬಳಿಯ  ವಂಡರ್ ಲಾ ರೆಸಾರ್ಟ್ ಮೇಲೆ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಅಂತಿಮ ಹಂತದಲ್ಲಿದ್ದು, ಎಲ್ಲೆಡೆ ಕುರುಡು ಕಾಂಚಾಣ ಸದ್ದು ಮಾಡುತ್ತಿದೆ. ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಣ, ಮದ್ಯ, ಉಡುಗೊರೆ ಮತ್ತಿತರ ವಸ್ತುಗಳನ್ನು ನೀಡುವ ಮೂಲಕ ಮತದಾರರನ್ನು ಓಲೈಸಿಕೊಳ್ಳಲು ಕಸರತ್ತು ನಡೆಸುತ್ತಿದ್ದಾರೆ. ಈ ಮಧ್ಯೆ ಬೆಂಗಳೂರಿಗೆ ಸನ್ನಿಹದಲ್ಲಿರುವ ಬಿಡದಿ ಬಳಿ ಐಟಿ ದಾಳಿ ನಡೆದಿದೆ. 

ಮತದಾರರಿಗೆ ಹಂಚಲು ಹಣ ಸಂಗ್ರಹಿಸಿಟ್ಟಿರುವ ಅನುಮಾನದ ಮೇರೆಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಂಗಳವಾರ ರಾಮನಗರ ಜಿಲ್ಲೆ ಬಿಡದಿ ಬಳಿಯ ವಂಡರ್ ಲಾ ರೆಸಾರ್ಟ್ ಮೇಲೆ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. ಕೋಟ್ಯಂತರ ಹಣ ಸಂಗ್ರಹಿಸಿಟ್ಟಿರುವ ಮಾಹಿತಿ ಮೇರೆಗೆ 3 ವಾಹನಗಳಲ್ಲಿ ಆಗಮಿಸಿದ ಅಧಿಕಾರಿಗಳು ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳನ್ನು ಪರಿಶೀಲಿಸಿದ್ದಾರೆ ಎನ್ನಲಾಗಿದೆ.

ಇತ್ತೀಚಿಗೆ ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ 4.04 ಕೋಟಿ ರೂ.ನಗದು ವಶಪಡಿಸಿಕೊಳ್ಳಲಾಗಿತ್ತು. ಬೀದರ್ ಜಿಲ್ಲೆಯಲ್ಲಿ 100 ಕೆಜಿ ಗಾಂಜಾ ವಶಪಡಿಸಿಕೊಳ್ಳುವುದು ಸೇರಿದಂತೆ ಗಮನಾರ್ಹವಾದ ಮದ್ಯ ವಶಪಡಿಸಿಕೊಳ್ಳಲಾಗಿದೆ .ಕಲ್ಬುರ್ಗಿ, ಚಿಕ್ಕಮಂಗಳೂರು ಮತ್ತು ಇತರ ಜಿಲ್ಲೆಗಳಿಂದ ಸೀರೆಗಳು ಮತ್ತು ಆಹಾರ ಕಿಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬೈಲಹೊಂಗಲ ಮತ್ತು ಕುಣಿಗಲ್ ಮತ್ತಿತರ ಕಡೆಗಳಿಂದ ಅಪಾರ ಸಂಖ್ಯೆಯ ಪ್ರೆಶರ್ ಕುಕ್ಕರ್ ಮತ್ತು ಅಡುಗೆ ಸಲಕರಣೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕೆಲ ದಿನಗಳ ಹಿಂದೆ ಬೆಂಗಳೂರಿನ ಬಸವನಗುಡಿ ವಿಧಾನಸಭೆ ಕ್ಷೇತ್ರದಲ್ಲಿ  ಚುನಾವಣಾಧಿಕಾರಿಗಳು 1.10 ಕೋಟಿ ನಗದು ಮತ್ತು 97 ಲಕ್ಷ ಮೌಲ್ಯದ ಚಿನ್ನ ವಶಕ್ಕೆ ಪಡೆದಿದ್ದರು. ಮೈಸೂರಿನಲ್ಲಿ ಗಿಡದಲ್ಲಿ ಮಾವಿನ ಹಣ್ಣಿನ ಬಾಕ್ಸ್ ನಲ್ಲಿ ಕೋಟ್ಯಂತರ ರೂಪಾಯಿ ಪತ್ತೆಯಾಗಿತ್ತು. 

Related Stories

No stories found.

Advertisement

X
Kannada Prabha
www.kannadaprabha.com