'ಇದು ನನ್ನ ಪ್ರತಿಷ್ಠೆಯ ಪ್ರಶ್ನೆ, ಅಲ್ಲಮಪ್ರಭು ಸೋಲು ನನ್ನ ಸೋಲಂತೆ, ನಾನು ಎರಡು ಬಾರಿ ಸೋತಂತಾಗಬಾರದು'

ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಕಲಬುರಗಿ ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಅಲ್ಲಮಪ್ರಭು ಪಾಟೀಲ ಅವರನ್ನು ಗೆಲ್ಲಿಸಬೇಕು. ಅವರನ್ನು ಸೋಲಿಸಿದರೆ ನಾನೂ ಸೋತಂತೆ’
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಕಲಬುರಗಿ ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಅಲ್ಲಮಪ್ರಭು ಪಾಟೀಲ ಅವರನ್ನು ಗೆಲ್ಲಿಸಬೇಕು. ಅವರನ್ನು ಸೋಲಿಸಿದರೆ ನಾನೂ ಸೋತಂತೆ’ ಎಂದು ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಸೋಮವಾರ ಅಲ್ಲಮಪ್ರಭು ಪಾಟೀಲ ಆಯೋಜಿಸಿದ್ದ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ‘2019ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಒಂದು ಬಾರಿ ಸೋಲಿಸಿದ್ದೀರಿ. ಈ ಬಾರಿ ಅಲ್ಲಮಪ್ರಭು ಸೋತರೆ ನಾನು ಸೋತಂತೆ. ಇದು ನನ್ನ ಪ್ರತಿಷ್ಠೆಯ ಪ್ರಶ್ನೆ, ನೀವು ನನ್ನನ್ನು ಎರಡು ಬಾರಿ (2019 ರ ಲೋಕಸಭೆ ಚುನಾವಣೆಯಲ್ಲಿ ಮೊದಲ ಬಾರಿಗೆ) ಸೋಲಿಸಿದ್ದೀರಿ ಎಂದರ್ಥ ಎಂದು ಭಾವುಕರಾಗಿ ನುಡಿದರು.

ನಾನು ಬಿಜೆಪಿ, ಜೆಡಿಎಸ್‌ನೊಂದಿಗೆ ಹೋರಾಡಿ ಜಿಲ್ಲೆಗೆ ಅಭಿವೃದ್ಧಿ ಕೆಲಸಗಳನ್ನು ಮಾಡಿಸಿದ್ದೇನೆ. ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೂ ಹೋರಾಡಿದ್ದೇನೆ. ನಾನು ಚುನಾವಣೆಯಲ್ಲಿ ಸೋತ ಬಳಿಕ ಸೋನಿಯಾ ಗಾಂಧಿ ಅವರು ರಾಜ್ಯಸಭೆಗೆ ಆಯ್ಕೆ ಮಾಡಿ ವಿರೋಧ ಪಕ್ಷದ ನಾಯಕನನ್ನಾಗಿ ಮಾಡಿದರು. ಇದೀಗ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷನಾಗಿದ್ದೇನೆ. ನೀವು ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಯ ಎಲ್ಲ 13 ಸ್ಥಾನಗಳಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿದರೆ ಮಾತ್ರ ನನ್ನ ಮರ್ಯಾದೆ ಉಳಿಯುತ್ತದೆ’ ಎಂದರು.

ಈಗ, ಗರಿಷ್ಠ ಸಂಖ್ಯೆಯ ಕಾಂಗ್ರೆಸ್ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮೂಲಕ ನಿಮ್ಮ ಸರದಿಯಾಗಿದೆ. ಕಲಬುರಗಿ ಮತ್ತು ಯಾದಗಿರಿಯ ಜನರು ಎಲ್ಲಾ ಕಾಂಗ್ರೆಸ್ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು ಏಕೆಂದರೆ ಎರಡೂ ಜಿಲ್ಲೆಗಳು ನನ್ನ ಕರ್ಮ ಭೂಮಿಗಳು," ಎಂದು ಅವರು ಹೇಳಿದರು.

371ರ ಜೆ ಕಲಂ ತಿದ್ದುಪಡಿ ಮಾಡಬೇಕೆಂಬ ಬೇಡಿಕೆಯನ್ನು ಕೇಂದ್ರದ ಬಿಜೆಪಿ ಸರಕಾರ ತಿರಸ್ಕರಿಸಿತ್ತು. ಆದರೆ ಮನಮೋಹನ್ ಸಿಂಗ್ ಸರಕಾರದಲ್ಲಿ ತಿದ್ದುಪಡಿ ತರಲು ಶ್ರಮಿಸಿದ್ದರು ಎಂದರು. ಇದರಿಂದ ಅನೇಕರು ಡಾಕ್ಟರ್, ಇಂಜಿನಿಯರ್ ಆಗಿದ್ದಾರೆ. ಆದರೆ ಇಂದಿನ ಬಿಜೆಪಿ ಸರಕಾರ ಯುವಕರಿಗೆ ಉದ್ಯೋಗ ಕಲ್ಪಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com