ಹುಬ್ಬಳ್ಳಿಯಲ್ಲಿ ನಮ್ಮ ಬೀಗರು ಶೆಟ್ಟರ್ ಗೆಲ್ಲುತ್ತಾರೆ, ಆದರೆ...: ಬಿಜೆಪಿ ಸಂಸದೆ ಮಂಗಳಾ ಅಂಗಡಿ ಹೇಳಿದ್ದೇನು?
ಕರ್ನಾಟಕ ವಿಧಾನಸಭೆ ಚುನಾವಣೆಗೆ ರಾಜ್ಯಾದ್ಯಂತ ಮತದಾನ ಪ್ರಕ್ರಿಯೆ ಆರಂಭವಾಗಿದೆ, ಹಲವೆಡೆ ರಾಜಕೀಯ ನಾಯಕರು, ಸಿನಿಮಾ ಕಲಾವಿದರು ಸೇರಿದಂತೆ ಗಣ್ಯರು ಮತದಾನ ಮಾಡಿದ್ದಾರೆ.
Published: 10th May 2023 09:35 AM | Last Updated: 10th May 2023 02:30 PM | A+A A-

ಮಂಗಳಾ ಅಂಗಡಿ
ಬೆಳಗಾವಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ರಾಜ್ಯಾದ್ಯಂತ ಮತದಾನ ಪ್ರಕ್ರಿಯೆ ಆರಂಭವಾಗಿದೆ, ಹಲವೆಡೆ ರಾಜಕೀಯ ನಾಯಕರು, ಸಿನಿಮಾ ಕಲಾವಿದರು ಸೇರಿದಂತೆ ಗಣ್ಯರು ಮತದಾನ ಮಾಡಿದ್ದಾರೆ.
ದಿವಂಗತ ಸಂಸದ ಸುರೇಶ್ ಅಂಗಡಿ ಪತ್ನಿ ಮಂಗಳಾ ಅಂಗಡಿ ಬೆಳಗಾವಿಯ ವಿಶ್ವೇಶ್ವರಯ್ಯ ನಗರದ ಮತಗಟ್ಟೆಯಲ್ಲಿ ಮತದಾನ ಮಾಡಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅವರು ಹುಬ್ಬಳ್ಳಿಯಲ್ಲಿ ತಮ್ಮ ಬೀಗರಾದ ಜಗದೀಶ ಶೆಟ್ಟರ್ ಗೆಲ್ಲುತ್ತಾರೆ. ಆದರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಿಮ್ಮ ಬೀಗರಾದ ಜಗದೀಶ ಶೆಟ್ಟರ್ ಬಗ್ಗೆ ಹೇಳಿ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅದು ಹುಬ್ಬಳ್ಳಿ ರಾಜಕಾರಣ, ಅಲ್ಲಿ ಶೆಟ್ಟರ್ ಅವರು ಗೆಲ್ಲುತ್ತಾರೆ ಎಂದರು. ಬೆಳಗಾವಿ ಜಿಲ್ಲೆಯಲ್ಲಿ ಕನಿಷ್ಠ 13 ಸ್ಥಾನ ಗೆಲ್ಲುತ್ತೇವೆ. ರಾಜ್ಯದಲ್ಲಿ ಬಿಜೆಪಿ ಪರ ಅಲೆ ಇದ್ದು, ಸರ್ಕಾರ ಬರಲಿದೆ ಎಂದರು.