ಸಿದ್ದರಾಮಯ್ಯ ಮತ್ತೆ ಸಿಎಂ ಆಗಲಿ ಎನ್ನುವವರಲ್ಲಿ ನಾನೂ ಒಬ್ಬ: ಬಸವರಾಜ ರಾಯರೆಡ್ಡಿ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೆ ಸಿಎಂ ಆಗಲಿ ಎನ್ನುವವರಲ್ಲಿ ನಾನೂ ಒಬ್ಬ ಎಂದು ಯಲಬುರ್ಗಾ ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ ಅವರು ಭಾನುವಾರ ಹೇಳಿದ್ದಾರೆ.
Published: 14th May 2023 04:57 PM | Last Updated: 14th May 2023 04:57 PM | A+A A-

ಬಸವರಾಜ ರಾಯರೆಡ್ಡಿ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೆ ಸಿಎಂ ಆಗಲಿ ಎನ್ನುವವರಲ್ಲಿ ನಾನೂ ಒಬ್ಬ ಎಂದು ಯಲಬುರ್ಗಾ ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ ಅವರು ಭಾನುವಾರ ಹೇಳಿದ್ದಾರೆ.
ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಸವರಾಜ ರಾಯರೆಡ್ಡಿ, ಹಿಂದೆ ಮುಂದೆ ಮಾತನಾಡಲ್ಲ. ಪಕ್ಷ ಯಾವ ನಿರ್ಧಾರ ತೆಗೆದುಕೊಳ್ಳುತ್ತೋ ಅದಕ್ಕೆ ನಾನು ಬದ್ಧ. ಡಿಕೆ ಶಿವಕುಮಾರ್ ಪಕ್ಷ ಸಂಘಟನೆಗೆ ಹ್ಯಾಟ್ಸಾಫ್. ಸಿದ್ದರಾಮಯ್ಯಗೆ ಇಮೇಜ್ ಇದೆ, ಜನರ ಆಕರ್ಷಣೆ ಇದೆ. ಪಕ್ಷ ಯಾರನ್ನೇ ಸಿಎಂ ಮಾಡಿದರೂ ನಾವು ಒಪ್ಪಿಕೊಳ್ಳುತ್ತೇವೆ ಎಂದರು.
ಇದನ್ನು ಓದಿ: ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು?: ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ಮೂವರು ವೀಕ್ಷಕರನ್ನು ನೇಮಿಸಿದ ಕಾಂಗ್ರೆಸ್
ಲಿಂಗಾಯತ ನಾಯಕರಲ್ಲಿ ನಾನು ಅತಿ ಹೆಚ್ಚು ಬಾರಿ ಗೆದ್ದವನು. ಲಿಂಗಾಯತ ನಾಯಕರು ಸಿಎಂ ಆಗಲಿ ಅಂತಾ ಕೇಳೋದು ತಪ್ಪಿಲ್ಲ. ಆದರೆ ಸಿದ್ದರಾಮಯ್ಯ ಮತ್ತೆ ಸಿಎಂ ಆಗಲಿ ಎನ್ನುವವರಲ್ಲಿ ನಾನೂ ಒಬ್ಬ ಎಂದು ಹೇಳಿದರು.
ಇನ್ನು 50:50 ಅಧಿಕಾರ ಹಂಚಿಕೆ ಬಗ್ಗೆ ನನಗೆ ಗೊತ್ತಿಲ್ಲ ಎಂದ ರಾಯರೆಡ್ಡಿ, ಒಬ್ಬರೇ 5 ವರ್ಷ ಸಿಎಂ ಆದರೆ ಉತ್ತಮ ಆಡಳಿತ ನೀಡಲು ಸಾಧ್ಯ. ಒಬ್ಬರೇ 5 ವರ್ಷ ಆಗಲಿ ಅನ್ನೋದು ನನ್ನ ಅಭಿಪ್ರಾಯ. ಡಿಕೆ ಶಿವಕುಮಾರ್ ಅವರಿಗೆ ಅವಕಾಶ ಕೊಟ್ಟರೆ ಅವರೂ ಚೆನ್ನಾಗಿ ಆಡಳಿತ ಮಾಡಬಹುದು ಎಂದರು.