ಕಾಂಗ್ರೆಸ್‌ಗೆ ಬೆಂಬಲ ನೀಡಿದ ಪಕ್ಷೇತರ ಶಾಸಕಿ ಲತಾ ಮಲ್ಲಿಕಾರ್ಜುನ್
ಹರಪನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿರುವ ಲತಾ ಮಲ್ಲಿಕಾರ್ಜುನ್ ಅವರು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೇಷರತ್ ಬೆಂಬಲ ನೀಡಿದ್ದಾರೆ ಎಂದು ಎಐಸಿಸಿ ಕರ್ನಾಟಕ ಉಸ್ತುವಾರಿ ರಂದೀಪ್ ಸಿಂಗ್...
Published: 14th May 2023 05:42 PM | Last Updated: 14th May 2023 05:42 PM | A+A A-

ಸಿದ್ದರಾಮಯ್ಯ ಹಾಗೂ ಲತಾ ಮಲ್ಲಿಕಾರ್ಜುನ್
ಬೆಂಗಳೂರು: ಹರಪನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿರುವ ಲತಾ ಮಲ್ಲಿಕಾರ್ಜುನ್ ಅವರು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೇಷರತ್ ಬೆಂಬಲ ನೀಡಿದ್ದಾರೆ ಎಂದು ಎಐಸಿಸಿ ಕರ್ನಾಟಕ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲಾ ಅವರು ಭಾನುವಾರ ಹೇಳಿದ್ದಾರೆ.
ಲತಾ ಮಲ್ಲಿಕಾರ್ಜುನ್ ಅವರು ಹಿರಿಯ ನಾಯಕ ಮತ್ತು ಮಾಜಿ ಉಪ ಮುಖ್ಯಮಂತ್ರಿ ದಿವಂಗತ ಎಂಪಿ ಪ್ರಕಾಶ್ ಅವರ ಪುತ್ರಿ.
ಇದನ್ನು ಓದಿ: ಸಿದ್ದರಾಮಯ್ಯ ಮತ್ತೆ ಸಿಎಂ ಆಗಲಿ ಎನ್ನುವವರಲ್ಲಿ ನಾನೂ ಒಬ್ಬ: ಬಸವರಾಜ ರಾಯರೆಡ್ಡಿ
"ಲತಾ ಮಲ್ಲಿಕಾರ್ಜುನ್ ಅವರು ತಮ್ಮ ಸೈದ್ಧಾಂತಿಕ ಬೇರುಗಳು ಮತ್ತು ಕಾಂಗ್ರೆಸ್ ಆದರ್ಶಗಳನ್ನು ಪರಿಗಣಿಸಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೇಷರತ್ ಬೆಂಬಲ ನೀಡಿದ್ದಾರೆ. ನಾನು ಅವರಿಗೆ, ಅವರ ಪತಿ ಮಲ್ಲಿಕಾರ್ಜುನ್ ಮತ್ತು ಎಲ್ಲಾ ಬೆಂಬಲಿಗರು ಮತ್ತು ಹಿತೈಷಿಗಳಿಗೆ ಧನ್ಯವಾದ ಹೇಳುತ್ತೇನೆ. ನಾವು 6.5 ಕೋಟಿ ಕನ್ನಡಿಗರಿಗೆ ಒಟ್ಟಾಗಿ ಸೇವೆ ಸಲ್ಲಿಸುತ್ತೇವೆ" ಎಂದು ಸುರ್ಜೇವಾಲಾ ಟ್ವೀಟ್ ಮಾಡಿದ್ದಾರೆ.
ಲತಾ ಮಲ್ಲಿಕಾರ್ಜುನ್ ಅವರು ಹರಪನಹಳ್ಳಿ ಕ್ಷೇತ್ರದಲ್ಲಿ ಬಿಜೆಪಿಯ ಜಿ ಕರುಣಾಕರ ರೆಡ್ಡಿ ಅವರನ್ನು 13,845 ಮತಗಳ ಅಂತರದಿಂದ ಸೋಲಿಸಿದ್ದಾರೆ.