ನನ್ನ ಬಳಿ 135 ಶಾಸಕರು ಇದ್ದಾರೆ, ಸಿಎಂ ಆಯ್ಕೆ ಹೈಕಮಾಂಡ್ ಗೆ ಬಿಟ್ಟದ್ದು: ಡಿಕೆ ಶಿವಕುಮಾರ್

ನನ್ನ ಅಧ್ಯಕ್ಷತೆಯಲ್ಲಿ 135 ಸ್ಥಾನ ಗೆದ್ದಿದ್ದೇವೆ. ಕಾಂಗ್ರೆಸ್​ನಲ್ಲಿ ನಾನು ಸೇರಿದಂತೆ 135 ಶಾಸಕರು ಇದ್ದೇವೆ. 135 ಶಾಸಕರನ್ನು ಸೋನಿಯಾ ಗಾಂಧಿಗೆ ಅರ್ಪಿಸಿದ್ದೇವೆ. ನೋಡೋಣ ಅವರು ಏನು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಕೆಪಿಸಿಸಿ
ಡಿ ಕೆ ಶಿವಕುಮಾರ್
ಡಿ ಕೆ ಶಿವಕುಮಾರ್

ಬೆಂಗಳೂರು: ನನ್ನ ಅಧ್ಯಕ್ಷತೆಯಲ್ಲಿ 135 ಸ್ಥಾನ ಗೆದ್ದಿದ್ದೇವೆ. ಕಾಂಗ್ರೆಸ್​ನಲ್ಲಿ ನಾನು ಸೇರಿದಂತೆ 135 ಶಾಸಕರು ಇದ್ದೇವೆ. 135 ಶಾಸಕರನ್ನು ಸೋನಿಯಾ ಗಾಂಧಿಗೆ ಅರ್ಪಿಸಿದ್ದೇವೆ. ನೋಡೋಣ ಅವರು ಏನು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸೋಮವಾರ ಹೇಳಿದ್ದಾರೆ.

ಇಂದು ಸದಾಶಿವನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಕೆಶಿ, ಸಿಎಲ್​ಪಿ ಸಭೆಯಲ್ಲಿ ನಾವು ಒಂದು ಸಾಲಿನ ನಿರ್ಣಯ ಅಂಗೀಕರಿಸಿದ್ದೇವೆ. ನಾನು ಯಾರ ನಂಬರ್ ಬಗ್ಗೆಯೂ ಮಾತನಾಡುವುದಿಲ್ಲ. ಸಿಎಂ ಆಯ್ಕೆ ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದರು.

ಇಂದು ನನ್ನ ಹುಟ್ಟು ಹಬ್ಬ. ಗುರುಗಳನ್ನು ಭೇಟಿ ಮಾಡಬೇಕು. ನನ್ನ ಖಾಸಗಿ ಕಾರ್ಯಕ್ರಮ ಮುಗಿದ ಬಳಿಕ ದೆಹಲಿಗೆ ಹೋಗುತ್ತೇನೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿ ಬಳಿಕ ಡಿಕೆ ಶಿವಕುಮಾರ್ ಅವರು ತುಮಕೂರಿನ ನೊಣವಿನಕೆರೆ ಅಜ್ಜಯ್ಯನ ಮಠಕ್ಕೆ ತೆರಳಿದ್ದಾರೆ. ಅಲ್ಲಿಂದ ಬಂದ ನಂತರ ವಿಶೇಷ ವಿಮಾನದಲ್ಲಿ ಡಿಕೆಶಿ ದೆಹಲಿಗೆ ತೆರಳಲಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಅವರು ಈಗಾಗಲೇ ದೆಹಲಿಗೆ ತೆರಳಿದ್ದು, ಇಂದು ಸಂಜೆ ಕಾಂಗ್ರೆಸ್ ಅಧ್ಯಕ್ಷ ಮಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com