ಹಾಸನದ 2 ಕ್ಷೇತ್ರಗಳಲ್ಲಿ ಅರಳಿದ ಕಮಲ: ಅತಿ ಕಡಿಮೆ ಅಂತರದಿಂದ ರೇವಣ್ಣ ಗೆಲುವು; ಅರಸೀಕೆರೆ 'ಕೈ' ವಶ!

ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ನಾಲ್ಕು ಜೆಡಿಎಸ್, ಎರಡು ಬಿಜೆಪಿ ಹಾಗೂ ಒಬ್ಬರು ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಜಿಲ್ಲೆಯಲ್ಲಿ ಎರಡು ಸ್ಥಾನ ಗೆದ್ದಿರುವುದು ಬಿಜೆಪಿ ಪಾಲಿಗೆ ಲಾಭದಾಯಕವಾಗಿದೆ.
ಎಚ್.ಡಿ ರೇವಣ್ಣ
ಎಚ್.ಡಿ ರೇವಣ್ಣ

ಹಾಸನ: ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ನಾಲ್ಕು ಜೆಡಿಎಸ್, ಎರಡು ಬಿಜೆಪಿ ಹಾಗೂ ಒಬ್ಬರು ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಜಿಲ್ಲೆಯಲ್ಲಿ ಎರಡು ಸ್ಥಾನ ಗೆದ್ದಿರುವುದು ಬಿಜೆಪಿ ಪಾಲಿಗೆ ಲಾಭದಾಯಕವಾಗಿದೆ.

2018 ರಲ್ಲಿ  ಹಾಸನದಲ್ಲಿ ಒಂದು ಸ್ಥಾನವನ್ನು ಬಿಜೆಪಿ ಪಡೆದಿತ್ತು, ಏಳರಲ್ಲಿ ಆರು ಸ್ಥಾನಗಳನ್ನು ಜೆಡಿಎಸ್ ಪಕ್ಷ ಗೆದ್ದಿತ್ತು.  ಆದರೆ ಈ ಬಾರಿ ಹೊಳೆನರಸೀಪುರ, ಶ್ರವಣಬೆಳಗೊಳ, ಹಾಸನ ಮತ್ತು ಅರಕಲಗೂಡಿನಲ್ಲಿ ಜೆಡಿಎಸ್ ಗೆದ್ದಿದೆ. ಬೇಲೂರು ಮತ್ತು ಸಕಲೇಶಪುರಗಳಲ್ಲಿ ಬಿಜೆಪಿ ಗೆಲುವು ಕಂಡಿದೆ. ಇದೇ ವೇಳೆ ಅರಸೀಕೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಎಂ ಶಿವಲಿಂಗೇಗೌಡ ಗೆಲುವು ಸಾಧಿಸಿದ್ದಾರೆ.

ವಿಶೇಷವೆಂದರೆ ಹೊಳೆನರಸೀಪುರ ಜೆಡಿಎಸ್ ಅಭ್ಯರ್ಥಿ ಹಾಗೂ ಮಾಜಿ ಸಚಿವ ಹೆಚ್ ಡಿ ರೇವಣ್ಣ  ಕೇವಲ 2,654 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಶ್ರವಣಬೆಳಗೊಳದಲ್ಲಿ ಸಿ ಎನ್ ಬಾಲಕೃಷ್ಣ ಅವರ ಗೆಲುವಿನ ಅಂತರವೂ ಭಾರಿ ಕುಸಿತ ಕಂಡಿದೆ.

ಬೇಲೂರು ಹಾಲಿ ಜೆಡಿಎಸ್ ಶಾಸಕ ಕೆ.ಎಸ್.ಲಿಂಗೇಶ್ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ. ಅರಸೀಕೆರೆಯಿಂದ ಗೆದ್ದಿರುವ ಕಾಂಗ್ರೆಸ್‌ನ ಏಕೈಕ ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರಿಗೆ ಹಾಸನ ಜಿಲ್ಲೆಯಿಂದ ಸಚಿವರಾಗುವ ಅವಕಾಶ ಉಜ್ವಲವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com