ಬಿಜೆಪಿ ಮಾಡಿದ ತಪ್ಪು ರಿಪೀಟ್ ಆಗದಂತೆ ನಿರ್ಧಾರ: 2024ರ ಚುನಾವಣೆ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ನ ಹೊಸ ಲೆಕ್ಕಾಚಾರ!

2024ರ ಲೋಕಸಭೆ ಚುನಾವಣೆ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್, ಕರ್ನಾಟಕದ ಜನತೆಗೆ ನೀಡಿರುವ ಐದು ಭರವಸೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು ಬಹಳ ಮುಖ್ಯವಾಗಿದೆ.
ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ
ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ

ಬೆಂಗಳೂರು: 2024ರ ಲೋಕಸಭೆ ಚುನಾವಣೆ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್, ಕರ್ನಾಟಕದ ಜನತೆಗೆ ನೀಡಿರುವ ಐದು ಭರವಸೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು ಬಹಳ ಮುಖ್ಯವಾಗಿದೆ. ಇದರ ಜೊತೆಗೆ ತನ್ನ ಹೊಸ ಸರ್ಕಾರದ ರಚನೆ ಮಾಡುವಾಗ ಹಲವು ಅಂಶಗಳನ್ನು ಕಾಂಗ್ರೆಸ್ ಕೇಂದ್ರ ನಾಯಕತ್ವವು ಪರಿಗಣಿಬೇಕಾಗಿದೆ.

ಸತತ ಸೋಲಿನಿಂದ ಕಂಗೆಟ್ಟಿದ್ದ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಅಪಾರ ಆಡಳಿತ ಅನುಭವ ಹೊಂದಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಹಳಷ್ಟು ಶ್ರಮ ಪಟ್ಟಿದ್ದಾರೆ.

2024 ರ ಲೋಕಸಭಾ ಚುನಾವಣೆಯ ಮೇಲೆ ದೃಷ್ಟಿ ನೆಟ್ಟಿರುವ ಕಾಂಗ್ರೆಸ್ ಎಲ್ಲಾ ರೀತಿಯಲ್ಲಿ ಅಳೆದು ತೂಗಿ ಎಚ್ಚರಿಕೆ ಹೆಜ್ಜೆ ಇಡಬೇಕಾಗಿದೆ.  ಹೊಸ ಸರ್ಕಾರದ ಸಾಧನೆಯು ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷದ ಭವಿಷ್ಯದ ಮೇಲೆ ನೇರ ಪರಿಣಾಮ ಬೀರುವುದರಿಂದ ಪಕ್ಷವು ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ಅದರ ಭರವಸೆಗಳನ್ನು ಪೂರೈಸುವದರ ಜೊತೆಗೆ ಸ್ವಚ್ಛ ಆಡಳಿತವನ್ನು ನೀಡಲು ಉತ್ಸುಕವಾಗಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ 28 ಸ್ಥಾನಗಳಲ್ಲಿ ಕೇವಲ ಒಂದನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಹೀನಾಯ ಸೋಲನ್ನು ಅನುಭವಿಸಿತ್ತು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಕೇಂದ್ರ ಸಚಿವರಾದ ಎಂ ವೀರಪ್ಪ ಮೊಯ್ಲಿ ಮತ್ತು ಕೆಎಚ್ ಮುನಿಯಪ್ಪ ಸೇರಿದಂತೆ ಘಟಾನುಘಟಿಗಳೆಲ್ಲರೂ ಲೋಕಸಭೆ ಚುನಾವಣೆಯಲ್ಲಿ ಸೋತಿದ್ದರು. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ರಾಮನಗರ ಕ್ಷೇತ್ರದಲ್ಲಿ ಮಾತ್ರ  ಶಿವಕುಮಾರ್  ಡಿಕೆ ಸುರೇಶ್ ಕರ್ನಾಟಕ ಕಾಂಗ್ರೆಸ್ ನಿಂದ ಗೆದ್ದ ಏಕೈಕ ಸಂಸದರಾಗಿದ್ದರು. ಆ ವೇಳೆ ರಾಜ್ಯದಲ್ಲಿ ಕಾಂಗ್ರೆಸ್-ಜನತಾ ದಳ (ಜಾತ್ಯತೀತ) ಮೈತ್ರಿ ಸರ್ಕಾರ ಅಧಿಕಾರದಲ್ಲಿತ್ತು.

ಸದ್ಯ ಬಿಜೆಪಿಯು ಪುಟಿದೇಳಲು ಎಲ್ಲಾ ಪ್ರಯತ್ನಗಳನ್ನು ಮಾಡುವುದರಿಂದ, ಕಾಂಗ್ರೆಸ್  ಜಾಗರೂಕತೆಯಿಂದ  ಮುಂದುವರಿಯುವ ಅವಶ್ಯಕತೆಯಿದೆ. ಲೋಕಸಭೆ ಚುನಾವಣೆಯನ್ನು ಎದುರಿಸುವ ಹೊತ್ತಿಗೆ ವಿಷಯಗಳನ್ನು ಗೊಂದಲಕ್ಕೊಳಗಾಗಬಾರದು.  ರಾಜಸ್ಥಾನದಂತಹ ಪರಿಸ್ಥಿತಿ ಎದುರಾಗುವುದನ್ನು  ತಪ್ಪಿಸಲು ಪಕ್ಷ ಬಯಸುತ್ತದೆ.

ಸಿದ್ದರಾಮಯ್ಯನವರ ಆಡಳಿತದ ಚಾಣಾಕ್ಷತೆಯು ಕಾಂಗ್ರೆಸ್ ತನ್ನ ಚುನಾವಣಾ ಭರವಸೆಗಳನ್ನು ವಿಳಂಬವಿಲ್ಲದೆ ಈಡೇರಿಸಲು ಮತ್ತು ಆಡಳಿತದಲ್ಲಿ  ಮಹತ್ವದ  ಬದಲಾವಣೆಯನ್ನು ತರಲು ಸಹಾಯ ಮಾಡುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸಿದ್ದರಾಮಯ್ಯ ಕ್ಲೀನ್ ಇಮೇಜ್ ಬಿಜೆಪಿಗೆ ಸರ್ಕಾರವನ್ನು ಟಾರ್ಗೆಟ್ ಮಾಡಲು ಕಷ್ಟವಾಗುತ್ತದೆ. 2018 ರ ಚುನಾವಣೆಯ ಪೂರ್ವದಲ್ಲಿ ಮತ್ತು ಅದಕ್ಕೂ ಮುಂಚೆಯೇ ಅವರ ವಿರುದ್ಧ ಬಿಜೆಪಿ ಹಲವಾರು ಆರೋಪಗಳನ್ನು ಮಾಡಿತ್ತು, ಆದರೆ  ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷದವರು ಈ ಆರೋಪಗಳನ್ನು ತಳ್ಳಿ ಹಾಕಿದ್ದರು.

ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳು ಮತ್ತು ದಲಿತರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಬಲವಾಗಿ ಬೆಂಬಲಿಸಿವೆ, ಇದೇ ವೇಳೆ , ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡಿದ ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯಗಳನ್ನು ನಿರ್ಲಕ್ಷಿಸಬಾರದು.

ಶಿವಕುಮಾರ್ ಸಿಎಂ ಆಗಬೇಕೆಂದು ಹಲವು ಪ್ರಮುಖ ಒಕ್ಕಲಿಗರು ಬೆಂಬಲಕ್ಕೆ ನಿಂತಿದ್ದಾರೆ. ಸತತ ಸೋಲಿನಿಂದ ಕಂಗೆಟ್ಟಿದ್ದ ಪಕ್ಷವನ್ನು ಸಂಘಟಿಸುವಲ್ಲಿ ಕೆಪಿಸಿಸಿ ಮುಖ್ಯಸ್ಥರಾಗಿ ಶಿವಕುಮಾರ್ ನಿರ್ಣಾಯಕ ಪಾತ್ರ ವಹಿಸಿದ್ದರು. ಅವರು ಅಧಿಕಾರ ವಹಿಸಿಕೊಂಡ ನಂತರ, ಪಕ್ಷವು ವಿಧಾನಸಭಾ ಉಪಚುನಾವಣೆಗಳು, ವಿಧಾನ ಪರಿಷತ್ ಚುನಾವಣೆಗಳು ಮತ್ತು ಈಗ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಪ್ರದರ್ಶನ ಸೇರಿದಂತೆ ಹಲವು ಚುನಾವಣೆಗಳನ್ನು ಗೆದ್ದಿದೆ ಎಂಬದು ಒಕ್ಕಲಿಗ ಮುಖಂಡರ ವಾದ.

ಇದರ ಜೊತೆಗೆ ಡಿ.ಕೆ ಶಿವಕುಮಾರ್ ಹಲವಾರು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಅವುಗಳಲ್ಲಿ ಹಲವು ಕೇಸ್ ಗಳನ್ನು ಕೇಂದ್ರೀಯ ಸಂಸ್ಥೆಗಳು ತನಿಖೆ ನಡೆಸುತ್ತಿದ್ದು, ಆ ಪ್ರಕರಣಗಳಲ್ಲಿನ ಬೆಳವಣಿಗೆಗಳ ಬಗ್ಗೆ ಕಾಂಗ್ರೆಸ್ ನಾಯಕತ್ವವು ಎಚ್ಚರದಿಂದಿರುತ್ತದೆ.  ಕಾಂಗ್ರೆಸ್  ನಾಯಕರನ್ನು ಗುರಿಯಾಗಿಸಲು ಕೇಂದ್ರೀಯ ಸಂಸ್ಥೆಗಳನ್ನು ಬಿಜೆಪಿ ಬಳಸಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಶಿವಕುಮಾರ್ ಮೇಲಿನ ಹಲವು ಪ್ರಕರಣಗಳ ವಿಚಾರಣೆ ಇನ್ನೂ ನಡೆಯುತ್ತಿರುವುದರಿಂದ ಪಕ್ಷ ಎಚ್ಚರಿಕೆಯಿಂದ ಇರಬೇಕಾಗುತ್ತದೆ.

ಸಿದ್ದರಾಮಯ್ಯ ಅವರನ್ನು ಸಿಎಂ ಮತ್ತು ಶಿವಕುಮಾರ್ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡುವುದರ ಜೊತೆಗೆ ಕೆಪಿಸಿಸಿ ಅಧ್ಯಕ್ಷರಾಗಿಯೂ ಅವರನ್ನು ಮುಂದುವರಿಸಲು ಪಕ್ಷ ಚಿಂತನೆ ನಡೆಸಬಹುದು ಎಂದು ಕಾಂಗ್ರೆಸ್ ಹಿರಿಯ ನಾಯಕರೊಬ್ಬರು ಅಭಿಪ್ರಾಯಪಟ್ಟಿದ್ದಾರೆ. ಆದರೆ, ಇನ್ನೂ ಯಾವುದನ್ನೂ ನಿರ್ಧಾರವಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ಡಿ.ಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಭಾಗವಾಗಿ ಕಾರ್ಯನಿರ್ವಹಿಸಬಹುದು, ಆದರೆ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಆಡಳಿತದಿಂದ ದೂರವಿಡುವುದರಿಂದ  ಪಕ್ಷದ  ಕಲ್ಯಾಣ ಕಾರ್ಯಕ್ರಮಗಳ ತ್ವರಿತ ಅನುಷ್ಠಾನ ಮಾಡಲು ಸರ್ಕಾರಕ್ಕೆ ಅಗತ್ಯವಾದ ಸ್ಥಿರತೆ ಕಾಯ್ದುಕೊಳ್ಳುವುದು ಕಷ್ಟವಾಗಬಹುದು ಎಂದು ಹೇಳಲಾಗುತ್ತಿದೆ.

ಲಿಂಗಾಯತ ಸಮುದಾಯದಿಂದ ಪಡೆದ ಬೆಂಬಲವನ್ನು ಪಕ್ಷವು ಪರಿಗಣನೆಗೆ ತೆಗೆದುಕೊಳ್ಳಬೇಕು ಏಕೆಂದರೆ, ಲೋಕಸಭಾ ಚುನಾವಣೆಯಲ್ಲಿ ಇದು ನಿರ್ಣಾಯಕವಾಗಿರುತ್ತದೆ. ಲಿಂಗಾಯತ ಬೆಂಬಲವಿಲ್ಲದ ಕಾರಣ ಬಿಜೆಪಿಗೆ ಭಾರಿ ನಷ್ಟ ಉಂಟಾಯಿತು, ಹೀಗಾಗಿ ಕಾಂಗ್ರೆಸ್ ಲಿಂಗಾಯತರ ಬೆಂಬಲವನ್ನು ಕಳೆದು ಕೊಳ್ಳಲು ಬಯಸುತ್ತಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com