ನೂತನ ಮುಖ್ಯಮಂತ್ರಿ ಆಯ್ಕೆ ವಿಳಂಬ; ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿಯಿಲ್ಲ ಎಂಬುದನ್ನು ತೋರಿಸುತ್ತದೆ: ಬಸವರಾಜ ಬೊಮ್ಮಾಯಿ

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಹುಮತ ಪಡೆದರೂ ಕಾಂಗ್ರೆಸ್ ಇನ್ನೂ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಅಂತಿಮಗೊಳಿಸಿಲ್ಲ. ಇದು ಪಕ್ಷದ ಆಂತರಿಕ ಪರಿಸ್ಥಿತಿಯನ್ನು ತೋರಿಸುತ್ತದೆ ಎಂದು ಟೀಕಿಸಿದ್ದಾರೆ.
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
Updated on: 

ಬೆಂಗಳೂರು: ಇತ್ತೀಚೆಗಷ್ಟೇ ನಡೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸರಳ ಬಹುಮತದೊಂದಿಗೆ ಭರ್ಜರಿ ಗೆಲುವು ಸಾಧಿಸಿದ್ದು, ಇದೀಗ ಮುಖ್ಯಮಂತ್ರಿ ಆಯ್ಕೆಯ ಕಸರತ್ತಿನಲ್ಲಿ ಬ್ಯುಸಿಯಾಗಿದೆ. ಮೇ 13ರಂದು ಫಲಿತಾಂಶ ಪ್ರಕಟವಾಗಿದ್ದು, ಈವರೆಗೂ ಮುಖ್ಯಮಂತ್ರಿ ಆಯ್ಕೆಯಾಗದ ಹಿನ್ನೆಲೆಯಲ್ಲಿ ಬಿಜೆಪಿ ಕಾಂಗ್ರೆಸ್‌ ಅನ್ನು ಟೀಕಿಸಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಹುಮತ ಪಡೆದರೂ ಕಾಂಗ್ರೆಸ್ ಇನ್ನೂ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಅಂತಿಮಗೊಳಿಸಿಲ್ಲ. ಇದು ಪಕ್ಷದ ಆಂತರಿಕ ಪರಿಸ್ಥಿತಿಯನ್ನು ತೋರಿಸುತ್ತದೆ ಎಂದು ಟೀಕಿಸಿದ್ದಾರೆ.

ರಾಜಕೀಯಕ್ಕಿಂತ ಜನರ ಆಶೋತ್ತರಗಳು ಮುಖ್ಯ. ಕಾಂಗ್ರೆಸ್ ಆದಷ್ಟು ಬೇಗ ಸಿಎಂ ಆಯ್ಕೆ ಮಾಡಬೇಕು ಎಂದು ಅವರು ಹೇಳಿದರು.

ಮುಖ್ಯಮಂತ್ರಿ ಹುದ್ದೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಉಭಯ ನಾಯಕರು ಇದೀಗ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. ಮುಖ್ಯಮಂತ್ರಿ ಆಯ್ಕೆಯ ವಿಚಾರ ಇದೀಗ ಹೈಕಮಾಂಡ್ ಅಂಗಳದಲ್ಲಿದ್ದು, ಸಂಜೆ ವೇಳೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಘೋಷಿಸಲಿದ್ದಾರೆ ಎನ್ನಲಾಗಿದೆ.

ಇನ್ನೊಂದೆಡೆ ಸಿಎಂ ಸ್ಥಾನದ ಆಕಾಂಕ್ಷಿಯಾಗಿರುವ ಮಾಜಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯಿಸಿ, 'ಕರ್ನಾಟಕ ಸಿಎಂ ಆಯ್ಕೆಯಲ್ಲಿ ಯಾವುದೇ ವಿವಾದವಿಲ್ಲ ಎಂದು ಸ್ಪಷ್ಟಪಡಿಸುತ್ತೇನೆ. ಸಿಎಂ ಆಯ್ಕೆಯಲ್ಲಿ ಒಂದು ವಿಧಾನವನ್ನು ಅನುಸರಿಸಲಾಗುತ್ತಿದೆ. ಪಕ್ಷದ ಹೈಕಮಾಂಡ್ ಸಿಎಂ ಅಭ್ಯರ್ಥಿಗಳನ್ನು ಭೇಟಿ ಮಾಡುತ್ತಿದ್ದು, ಇಂದು ಅಥವಾ ನಾಳೆ ಅಂತಿಮಗೊಳಿಸಲಾಗುವುದು' ಎಎನ್‌ಐಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com