ಬಿಜೆಪಿ ಸೇರಲು ಸಿದ್ದರಾಮಯ್ಯ ಪ್ರೇರಣೆ: ಸುಧಾಕರ್ ಹೇಳಿಕೆ ಸತ್ಯಕ್ಕೆ ದೂರ ಎಂದ ಎಂಟಿಬಿ
ಸದ್ಯ ಮುಖ್ಯಮಂತ್ರಿ ರೇಸ್ ನಲ್ಲಿ ಮುಂಚೂಣಿಯಲ್ಲಿರುವ ಸಿದ್ದರಾಮಯ್ಯ ಅವರ ಬಗ್ಗೆ ಮಾಜಿ ಸಚಿವ ಡಾ.ಕೆ.ಸುಧಾಕರ್ ಅವರ ಹೇಳಿಕೆ ಸತ್ಯಕ್ಕೆ ದೂರವಾದದ್ದು ಎಂದು ಮಾಜಿ ಸಚಿವ ಎಂ.ಟಿಬಿ ನಾಗರಾಜ್ ಅವರು ಬುಧವಾರ ಹೇಳಿದ್ದಾರೆ.
Published: 17th May 2023 08:51 PM | Last Updated: 17th May 2023 08:51 PM | A+A A-

ಎಂಟಿಬಿ ನಾಗರಾಜ್
ಬೆಂಗಳೂರು: ಸದ್ಯ ಮುಖ್ಯಮಂತ್ರಿ ರೇಸ್ ನಲ್ಲಿ ಮುಂಚೂಣಿಯಲ್ಲಿರುವ ಸಿದ್ದರಾಮಯ್ಯ ಅವರ ಬಗ್ಗೆ ಮಾಜಿ ಸಚಿವ ಡಾ.ಕೆ.ಸುಧಾಕರ್ ಅವರ ಹೇಳಿಕೆ ಸತ್ಯಕ್ಕೆ ದೂರವಾದದ್ದು ಎಂದು ಮಾಜಿ ಸಚಿವ ಎಂ.ಟಿಬಿ ನಾಗರಾಜ್ ಅವರು ಬುಧವಾರ ಹೇಳಿದ್ದಾರೆ.
ತಾವು ಬಿಜೆಪಿ ಸೇರಲು ಸಿದ್ದರಾಮಯ್ಯ ಅವರೇ ಪ್ರೇರಣೆ ಎಂದು ಮಾಜಿ ಸಚಿವ ಸುಧಾಕರ್ ಅವರು ಹೇಳಿದ್ದು, ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಎಂಟಿಬಿ ನಾಗರಾಜ್ ಅವರು, ಬಿಜೆಪಿ ಸೇರಲು ಸಿದ್ದರಾಮಯ್ಯರವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇತ್ತೆಂದು ಸುಧಾಕರ್ ರವರು ತಮ್ಮ ಮನೆ ದೇವರ ಮೇಲೆ ಪ್ರಮಾಣ ಮಾಡಿ ಹೇಳುವರೆ? ಇಷ್ಟು ದಿನ ಮೌನವಾಗಿದ್ದು? ಈಗ ಇದರ ಪ್ರಸ್ತಾಪದ ಮರ್ಮವಾದರೂ ಏನು? ಎಂದು ಪ್ರಶ್ನಿಸಿದ್ದಾರೆ.
ಇದನ್ನು ಓದಿ: 2019ರಲ್ಲಿ ನಾವು ರಾಜೀನಾಮೆ ನೀಡಿ ಕಾಂಗ್ರೆಸ್ ನಿಂದ ಹೊರಬರಲು ಸಿದ್ದರಾಮಯ್ಯ ಪ್ರಮುಖ ಕಾರಣ: ಡಾ ಸುಧಾಕರ್
ಮಾಜಿ ಸಚಿವರಾದ ಸುಧಾಕರ್ ರವರು ಇಂದು ಮಾನ್ಯ ಸಿದ್ದರಾಮಯ್ಯ ಅವರ ಬಗ್ಗೆ ಟ್ವೀಟ್ ಮಾಡಿರುವ ಮಾತುಗಳು ಸತ್ಯಕ್ಕೆ ದೂರವಾಗಿದ್ದು, ಸುಧಾಕರ್ ರವರು ಚುನಾವಣೆಯಲ್ಲಿ ಸೋತ ನಂತರ ಭ್ರಮನಿರಸನರಾಗಿ ಈ ಮಾತುಗಳನ್ನು ಹೇಳಿದ್ದಾರೆ. ಹಾಗಾದರೆ, ಇಷ್ಟು ದಿನ ಏಕೆ ಸುಮ್ಮನಿದ್ದರು? ಎಂದು ಪ್ರಶ್ನಿಸಿದ್ದಾರೆ.
ಇದನ್ನು ಓದಿ: ನಾವು ಪಕ್ಷ ಬಿಡಲು ಪ್ರೇರಣೆ ನೀಡಿದ್ದೇ ಸಿದ್ದರಾಮಯ್ಯ-ಡಾ ಸುಧಾಕರ್ ಬಳಿಕ ಮಾಜಿ ಸಚಿವ ಎಸ್ ಟಿ ಸೋಮಶೇಖರ್ ಸ್ಫೋಟಕ ಹೇಳಿಕೆ
ಮಾನ್ಯ ಸಿದ್ದರಾಮಯ್ಯ ಅವರನ್ನು ನಾನು ಕೂಡ ಹಲವಾರು ಬಾರಿ ಭೇಟಿ ಮಾಡಿ, ಸಮ್ಮಿಶ್ರ ಸರ್ಕಾರದಲ್ಲಿ ನಮ್ಮ ಕ್ಷೇತ್ರದಲ್ಲಿ ಹಾಗೂ ನಮ್ಮ ಉಸ್ತುವಾರಿ ಜಿಲ್ಲೆಗಳಲ್ಲಿ ಏನು ಕೆಲಸ ಕಾರ್ಯಗಳು ಆಗುತ್ತಿಲ್ಲವೆಂದು ಹೇಳಿಕೊಂಡಾಗ ಲೋಕಸಭೆ ಚುನಾವಣೆವರೆಗೆ ಸುಮ್ಮನಿರಿ ಎಂದು ಹೇಳಿದ್ದರು. ಇದು ಸತ್ಯ ಎಂದು ಎಂಟಿಬಿ ನಾಗರಾಜ್ ಮತ್ತೊಂದು ಟ್ವೀಟ್ ಮಾಡಿದ್ದಾರೆ.
ಮಾಜಿ ಸಚಿವರಾದ ಸುಧಾಕರ್ ರವರು ಇಂದು ಮಾನ್ಯ ಸಿದ್ದರಾಮಯ್ಯ ರವರ ಬಗ್ಗೆ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮಾತುಗಳು ಸತ್ಯಕ್ಕೆ ದೂರವಾಗಿದ್ದು, ಸುಧಾಕರ್ ರವರು ಚುನಾವಣೆಯಲ್ಲಿ ಸೋತ ನಂತರ ಭ್ರಮನಿರಸನರಾಗಿ ಈ ಮಾತುಗಳನ್ನು ಹೇಳಿದ್ದಾರೆ. ಹಾಗಾದರೆ, ಇಷ್ಟು ದಿನ ಏಕೆ ಸುಮ್ಮನಿದ್ದರು?
— MTB Nagaraj (@MTB_Nagaraj) May 17, 2023