ಮುಖ್ಯಮಂತ್ರಿ ಆಯ್ಕೆಯಲ್ಲಿ ಯಾವುದೇ ವಿವಾದವಿಲ್ಲ: ಸಿಎಂ ಸ್ಥಾನದ ಆಕಾಂಕ್ಷಿ ಡಾ. ಜಿ. ಪರಮೇಶ್ವರ್

ರಾಜ್ಯದಲ್ಲಿ ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ನಂತರ ರಾಷ್ಟ್ರ ರಾಜಧಾನಿಯಲ್ಲಿ ಮುಖ್ಯಮಂತ್ರಿ ಆಯ್ಕೆಯ ಕುರಿತು ಕಸರತ್ತುಗಳು ನಡೆಯುತ್ತಿರುವ ವೇಳೆ, ಕರ್ನಾಟಕದ ಮುಖ್ಯಮಂತ್ರಿ ಆಯ್ಕೆಯಲ್ಲಿ ಯಾವುದೇ ವಿವಾದವಿಲ್ಲ ಎಂದು ಕಾಂಗ್ರೆಸ್ ನಾಯಕ ಜಿ. ಪರಮೇಶ್ವರ ಬುಧವಾರ ಹೇಳಿದ್ದಾರೆ.
ಪರಮೇಶ್ವರ್
ಪರಮೇಶ್ವರ್

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ನಂತರ ರಾಷ್ಟ್ರ ರಾಜಧಾನಿಯಲ್ಲಿ ಮುಖ್ಯಮಂತ್ರಿ ಆಯ್ಕೆಯ ಕುರಿತು ಕಸರತ್ತುಗಳು ನಡೆಯುತ್ತಿರುವ ವೇಳೆ, ಕರ್ನಾಟಕದ ಮುಖ್ಯಮಂತ್ರಿ ಆಯ್ಕೆಯಲ್ಲಿ ಯಾವುದೇ ವಿವಾದವಿಲ್ಲ ಎಂದು ಕಾಂಗ್ರೆಸ್ ನಾಯಕ ಜಿ. ಪರಮೇಶ್ವರ ಬುಧವಾರ ಹೇಳಿದ್ದಾರೆ.

'ಕರ್ನಾಟಕ ಸಿಎಂ ಆಯ್ಕೆಯಲ್ಲಿ ಯಾವುದೇ ವಿವಾದವಿಲ್ಲ ಎಂದು ಸ್ಪಷ್ಟಪಡಿಸುತ್ತೇನೆ. ಸಿಎಂ ಆಯ್ಕೆಯಲ್ಲಿ ಒಂದು ವಿಧಾನವನ್ನು ಅನುಸರಿಸಲಾಗುತ್ತಿದೆ. ಪಕ್ಷದ ಹೈಕಮಾಂಡ್ ಸಿಎಂ ಅಭ್ಯರ್ಥಿಗಳನ್ನು ಭೇಟಿ ಮಾಡುತ್ತಿದ್ದು, ಇಂದು ಅಥವಾ ನಾಳೆ ಅಂತಿಮಗೊಳಿಸಲಾಗುವುದು' ಎಂದು ಜಿ ಪರಮೇಶ್ವರ ಎಎನ್‌ಐಗೆ ತಿಳಿಸಿದ್ದಾರೆ.

ಮಂಗಳವಾರ ಪಕ್ಷದ ಹೈಕಮಾಂಡ್ ಹೇಳಿದರೆ ಮುಖ್ಯಮಂತ್ರಿಯ ಜವಾಬ್ದಾರಿಯನ್ನು ಹೊರಲು ಸಿದ್ಧ ಎಂದು ಹೇಳುವ ಮೂಲಕ ಪರಮೇಶ್ವರ್ ಅಚ್ಚರಿ ಮೂಡಿಸಿದ್ದರು. ಅಲ್ಲದೆ, ದಲಿತ ನಾಯಕ ಮುಖ್ಯಮಂತ್ರಿಯಾಗಬೇಕು ಎಂದು ಹೇಳಿದ್ದರು.

ಕರ್ನಾಟಕದಲ್ಲಿ ದಲಿತರಿಗೆ ಪ್ರಾತಿನಿಧ್ಯ ಕೇಳುವುದು ಸಹಜ. ಕಾಂಗ್ರೆಸ್‌ಗೆ ಮತ ಹಾಕುವ ದಲಿತರು ಪ್ರಾತಿನಿಧ್ಯ ಕೇಳುವುದು ಸಹಜ. ಪಕ್ಷದ ಹೈಕಮಾಂಡ್‌ನಲ್ಲಿರುವ ಎಲ್ಲರಿಗೂ ನಾನು ಗೊತ್ತು. ಪರಮೇಶ್ವರ್ ಅವರನ್ನು ಸಿಎಂ ಮಾಡಬೇಕಾದ ಪರಿಸ್ಥಿತಿ ಬಂದರೆ ಅವರೇ ಮಾಡ್ತಾರೆ. ನಾನು ಲಾಬಿ ಮಾಡುವುದಿಲ್ಲ ಎಂದು ಅವರು ಹೇಳಿದರು.

ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಜನಾದೇಶ ಪಡೆದರೂ ಮುಖ್ಯಮಂತ್ರಿ ಯಾರೆಂಬ ಸಸ್ಪೆನ್ಸ್ ಇದೀಗ ಮುಂದುವರಿದಿದೆ. 

ಕರ್ನಾಟಕದಲ್ಲಿ ಸರ್ಕಾರ ರಚನೆ ಮತ್ತು ಮುಂದಿನ ಮುಖ್ಯಮಂತ್ರಿ ಕುರಿತು ಪಕ್ಷದ ಕೇಂದ್ರ ನಾಯಕತ್ವದೊಂದಿಗೆ ಚರ್ಚಿಸಲು ಸಿಎಂ ಸ್ಥಾನದ ಆಕಾಂಕ್ಷಿಗಳಾದ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಈಗಾಗಲೇ ರಾಷ್ಟ್ರ ರಾಜಧಾನಿಯಲ್ಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com