ಕಾಂಗ್ರೆಸ್ ನ 'ಟ್ರಬಲ್ ಶೂಟರ್' ಡಿ ಕೆ ಶಿವಕುಮಾರ್ ಮನವೊಲಿಸಿದ್ದು ಸೋನಿಯಾ ಗಾಂಧಿ, ಸಂಧಾನ ಸೂತ್ರವೇನು?

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 135 ಸೀಟುಗಳನ್ನು ಗೆದ್ದು ಭರ್ಜರಿ ಯಶಸ್ಸು ಸಾಧಿಸಿ ಮುಖ್ಯಮಂತ್ರಿ ಹುದ್ದೆಯ ಹಗ್ಗ ಜಗ್ಗಾಟದಲ್ಲಿ ಕೊನೆಗೂ ಸಿದ್ದರಾಮಯ್ಯ ಕೈ ಮೇಲಾಗಿದೆ.
ಡಿ ಕೆ ಶಿವಕುಮಾರ್
ಡಿ ಕೆ ಶಿವಕುಮಾರ್

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 135 ಸೀಟುಗಳನ್ನು ಗೆದ್ದು ಭರ್ಜರಿ ಯಶಸ್ಸು ಸಾಧಿಸಿ ಮುಖ್ಯಮಂತ್ರಿ ಹುದ್ದೆಯ ಹಗ್ಗ ಜಗ್ಗಾಟದಲ್ಲಿ ಕೊನೆಗೂ ಸಿದ್ದರಾಮಯ್ಯ ಕೈ ಮೇಲಾಗಿದೆ. ಫಲಿತಾಂಶ ಬಂದು 5 ದಿನಗಳ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಎಂದು ಹೈಕಮಾಂಡ್ ತೀರ್ಮಾನಕ್ಕೆ ಬಂದಿದ್ದು ಅಧಿಕೃತ ಘೋಷಣೆಯೊಂದೇ ಬಾಕಿಯಿದೆ.

ಸುದೀರ್ಘ ಸಮಾಲೋಚನೆಯ ನಂತರ ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಮಧ್ಯಸ್ಥಿಕೆಯಲ್ಲಿ ಕರ್ನಾಟಕ ಕಾಂಗ್ರೆಸ್ ಮುಖ್ಯಸ್ಥ ಡಿಕೆ ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಳ್ಳಲು ಇಷ್ಟವಿಲ್ಲದೆ ಒಪ್ಪಿಕೊಂಡಿದ್ದಾರೆ ಎಂದು ಮೂಲಗಳು ಹೇಳುತ್ತಿವೆ. 

ಪಕ್ಷದ ಮೂಲಗಳು ಹೇಳುವಂತೆ ಕಾಂಗ್ರೆಸ್ ವರಿಷ್ಠರು ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಿದ್ದಾರೆ, ಶಿವಕುಮಾರ್ ಅವರ ಉಪನಾಯಕರಾಗಿದ್ದಾರೆ. ಇಬ್ಬರೂ ನಾಯಕರು ಎರಡೂವರೆ-ಎರಡೂವರೆ ವರ್ಷಗಳ ಅವಧಿಗೆ ಸಿಎಂ ಹುದ್ದೆ ವಹಿಸಿಕೊಳ್ಳುವಂತೆ ಒಪ್ಪಿಸಿದ್ದಾರೆ. 

ಸೋನಿಯಾ ಗಾಂಧಿ ಅವರು ಮುಖ್ಯಮಂತ್ರಿ ಸ್ಥಾನದ ಬೇಡಿಕೆಯ ಬಗ್ಗೆ ದೃಢವಾಗಿ ನಿಂತಿದ್ದ ಶಿವಕುಮಾರ್ ಅವರನ್ನು ನಿನ್ನೆ ತಡರಾತ್ರಿ ತಮ್ಮ ನಿವಾಸಕ್ಕೆ ಕರೆದು ಮಾತುಕತೆ ನಡೆಸಿ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದ್ದು, ಇಂದು ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆ ಇದೆ.

ಸಿದ್ದರಾಮಯ್ಯ ಮತ್ತು ಶಿವಕುಮಾರ್ ಇಬ್ಬರೂ ನಿನ್ನೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರನ್ನು ಭೇಟಿ ಮಾಡಿದ್ದರು. ನಂತರ ನಿನ್ನೆ ಸಾಯಂಕಾಲ ತಮ್ಮ ನಿವಾಸದ ಹೊರಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೆವಾಲಾ, ಸಿಎಂ ಯಾರು ಎಂದು ಘೋಷಿಸಲು ಇನ್ನೂ 48ರಿಂದ 72 ಗಂಟೆಯವರೆಗೆ ತೆಗೆದುಕೊಳ್ಳಬಹುದು ಎಂದಿದ್ದರು. 

ಸಿದ್ದರಾಮಯ್ಯನವರು 2013ರಿಂದ 2018ರವರೆಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಪೂರ್ಣಾವಧಿಯನ್ನು ಪೂರ್ಣಗೊಳಿಸಿದ ಜನಮನದ ನಾಯಕರಾಗಿ ಕಂಡುಬಂದರೆ, ಶಿವಕುಮಾರ್ ಅವರು ತಮ್ಮ ಬಲವಾದ ಸಾಂಸ್ಥಿಕ ಸಾಮರ್ಥ್ಯಗಳಿಗೆ ಹೆಸರುವಾಸಿಯಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಕಠಿಣ ಸಮಯದಲ್ಲಿ ಸಂಪನ್ಮೂಲ ಕ್ರೋಢೀಕರಿಸಿದ ಕಾಂಗ್ರೆಸ್ ನ ಟ್ರಬಲ್ ಶೂಟರ್ ಎಂದೇ ಡಿಕೆಶಿ ಜನಪ್ರಿಯರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com