ನೂತನ ಕಾಂಗ್ರೆಸ್ ಸರ್ಕಾರ ಲಿಂಗಾಯತ, ದಲಿತ ಸಮುದಾಯಗಳಿಗೆ 'ತಕ್ಕ ಪಾಲು' ನೀಡಲಿ: ಎಂ.ಬಿ.ಪಾಟೀಲ್
ಹೊಸ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಸ್ಥಾನ ನಿರಾಕರಿಸಿರುವ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಶಾಸಕ ಎಂ.ಬಿ.ಪಾಟೀಲ್ ಅವರು ಶುಕ್ರವಾರ ಲಿಂಗಾಯತ ಮತ್ತು ದಲಿತ ಸೇರಿದಂತೆ ಎಲ್ಲಾ ಸಮುದಾಯಗಳಿಗೆ 'ತಕ್ಕ ಪಾಲು' ನೀಡಬೇಕು ಎಂದು ಹೇಳಿದ್ದಾರೆ.
Published: 19th May 2023 11:48 AM | Last Updated: 19th May 2023 07:57 PM | A+A A-

ಎಂ.ಬಿ ಪಾಟೀಲ್
ಬೆಂಗಳೂರು : ಹೊಸ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಸ್ಥಾನ ನಿರಾಕರಿಸಿರುವ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಶಾಸಕ ಎಂ.ಬಿ.ಪಾಟೀಲ್ ಅವರು ಶುಕ್ರವಾರ ಲಿಂಗಾಯತ ಮತ್ತು ದಲಿತ ಸೇರಿದಂತೆ ಎಲ್ಲಾ ಸಮುದಾಯಗಳಿಗೆ 'ತಕ್ಕ ಪಾಲು' ನೀಡಬೇಕು ಎಂದು ಹೇಳಿದ್ದಾರೆ.
ಕಾಂಗ್ರೆಸ್ ಗುರುವಾರ ಅಧಿಕೃತವಾಗಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಮುಖದ ಹೆಸರನ್ನು ಘೋಷಿಸಿತು, ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಕ್ರಮವಾಗಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.
ಉಭಯ ನಾಯಕರು ಇಂದು ರಾಷ್ಟ್ರ ರಾಜಧಾನಿಗೆ ಭೇಟಿ ನೀಡಲಿದ್ದು, ಸಂಪುಟಕ್ಕೆ ಸೇರ್ಪಡೆಗೊಳ್ಳಲಿರುವ ಶಾಸಕರ ಹೆಸರನ್ನು ಚರ್ಚಿಸಲು ನಿರ್ಧರಿಸಲಾಗಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಲು ಮತ್ತು ರಾಜ್ಯಪಾಲರ ಮುಂದೆ ಸರ್ಕಾರ ರಚಿಸಲು ಹಕ್ಕು ಮಂಡಿಸಲು ಅವರು ನಿನ್ನೆ ಬೆಂಗಳೂರಿಗೆ ಆಗಮಿಸಿದ್ದರು. ಮೇ 20ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.
ಇದನ್ನೂ ಓದಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆಗೆ ಡಿಸಿಎಂ ಹುದ್ದೆ ನೀಡಿ: ಮಠಾಧೀಶರ ಒತ್ತಾಯ
ಕ್ಷಿಪ್ರ ರಾಜಕೀಯ ಬೆಳವಣಿಗೆಗಳ ನಡುವೆ ಲಿಂಗಾಯತ ಮುಖಂಡ ಎಂ.ಬಿ.ಪಾಟೀಲ್ ಮತ್ತು ದಲಿತ ಮುಖಂಡ ಜಿ.ಪರಮೇಶ್ವರ ಅವರು ಉಪಮುಖ್ಯಮಂತ್ರಿ ಹುದ್ದೆ ನಿರಾಕರಣೆಗೆ ಅಸಮಾಧಾನಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಜಿ ಪರಮೇಶ್ವರ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂಬ ದಲಿತ ಸಮುದಾಯದ ಬೇಡಿಕೆ ಕುರಿತು ಎಎನ್‌ಐ ಜತೆ ಮಾತನಾಡಿದ ಪಾಟೀಲ್, ಲಿಂಗಾಯತರು, ದಲಿತರು, ಒಕ್ಕಲಿಗರು, ಎಸ್‌ಟಿಗಳು, ಮುಸ್ಲಿಮರು - ಈ ಎಲ್ಲರಿಗೂ ಅವರವರ ಪಾಲು ನೀಡಬೇಕು. ನಮ್ಮ ಪಕ್ಷವು ಅದೇ ರೀತಿ ಮಾಡುತ್ತದೆ ಎಂಬ ವಿಶ್ವಾಸ ನನಗಿದೆ. ಅವರು ಈ ಎಲ್ಲಾ ಸಮುದಾಯಗಳಿಗೆ ಸರಿಯಾದ ಗೌರವವನ್ನು ನೀಡುತ್ತಾರೆ ಮತ್ತು ಅಧಿಕಾರವನ್ನು ಎಲ್ಲಾ ಸಮುದಾಯಗಳೊಂದಿಗೆ ಹಂಚಿಕೊಳ್ಳುತ್ತಾರೆ ಎಂದು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
ಲಿಂಗಾಯತ ಸಮುದಾಯದವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂಬ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಪಾಟೀಲ್, ಆ ಸಮುದಾಯಕ್ಕೆ ಕಾಂಗ್ರೆಸ್ ಸರಿಯಾದ ಪಾಲು ನೀಡುತ್ತದೆ ಎಂಬ ವಿಶ್ವಾಸವಿದೆ ಎಂದರು.
ಸ್ಪರ್ಧಿಸಿದ್ದ ಲಿಂಗಾಯತರನ್ನು ಬಿಜೆಪಿ ತಿರಸ್ಕರಿಸಿದೆ. ಹೀಗಾಗಿ ಸಹಜವಾಗಿಯೇ ನಾವು ಕಾಂಗ್ರೆಸ್‌ನತ್ತ ಬಂದಾಗ ನಿರೀಕ್ಷೆ ಹೆಚ್ಚಿದೆ. ಅವರು ಬಾಕಿ ಪಾಲು ಬಯಸುತ್ತಾರೆ. ನಮ್ಮ ಪಕ್ಷ ಅದನ್ನು ನೋಡಿಕೊಳ್ಳುತ್ತದೆ ಎಂಬ ವಿಶ್ವಾಸವಿದೆ" ಎಂದು ಅವರು ಹೇಳಿದರು.
ಇದನ್ನೂ ಓದಿ: ಲಿಂಗಾಯತ ಸಮುದಾಯದ ಎಫೆಕ್ಟ್: ಉತ್ತರ ಕರ್ನಾಟಕದಲ್ಲಿ ಬಿಜೆಪಿಗೆ ಹಿನ್ನಡೆ
ಎಂ.ಬಿ.ಪಾಟೀಲ್ ಮತ್ತು ಜಿ.ಪರಮೇಶ್ವರ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನಿರಾಕರಿಸಿದ್ದಕ್ಕೆ ಅಸಮಾಧಾನಗೊಂಡಿರುವ ವರದಿಗಳ ಕುರಿತು ಪ್ರತಿಕ್ರಿಯಿಸಿದ ಶಾಸಕ ಟಿ.ಬಿ.ಜಯಚಂದ್ರ, ಡಿ.ಕೆ.ಶಿವಕುಮಾರ್ ಅವರನ್ನು ಉಪಮುಖ್ಯಮಂತ್ರಿ ಮಾಡುವುದು ಹೈಕಮಾಂಡ್ ನಿರ್ಧಾರ. ಹಾಗಾಗಿ, ಇತರ ವಿಷಯಗಳು ಮುಖ್ಯವಾಗುವುದಿಲ್ಲ ಎಂದು ನಾನು ಭಾವಿಸುತ್ತೇನೆ ಎಂದರು.