
ಬಸವರಾಜ ಬೊಮ್ಮಾಯಿ
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಜನರ ನಿರೀಕ್ಷೆ ಹುಸಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನೀಡಿರುವ ಐದು ಗ್ಯಾರಂಟಿಗಳ ಬಗ್ಗೆ ಜನರು ನಿರೀಕ್ಷೆ ಇಟ್ಟುಕೊಂಡಿದ್ದರು. ಇವುಗಳ ಬಗ್ಗೆ ಮುಖ್ಯಮಂತ್ರಿ ಸರಿಯಾಗಿ ಸ್ಪಷ್ಟನೆ ನೀಡಿಲ್ಲ, ಯಾವಾಗ ಜಾರಿಯಾಗುತ್ತದೆ ಎಂಬುದರ ಬಗ್ಗೆ ಹೇಳಿಲ್ಲ. ಮತದಾರರಿಗೆ ಎಷ್ಟು ಗೌರವಿಸುತ್ತಾರೆ ಎಂಬುದು ಇದರಿಂದಲೇ ಗೊತ್ತಾಗುತ್ತದೆ ಎಂದರು.
ನನ್ನ ಅವಧಿಯಲ್ಲಿ ರಾಜ್ಯ ಸರ್ಕಾರದ ಆದಾಯ ಹೆಚ್ಚಾಗಿತ್ತು. ಮನಸ್ಸು ಮಾಡಿದರೆ ನಾಳೆಯೇ ಮನೆಯ ಯಜಮಾನಿಯ ಖಾತೆಗೆ 2 ಸಾವಿರ ರೂ. ಹಾಕಬಹುದು. ಗ್ಯಾರಂಟಿಗಳನ್ನು ಜಾರಿ ಮಾಡೇ ಮಾಡ್ತೀವಿ ಅಂತಾ ಹೇಳುತ್ತಿದ್ದಾರೆ. ಸುಳ್ಳು ಹೇಳಿ ಜನರನ್ನು ಯಾಮಾರಿಸಲು ಆಗದು, ಇನ್ನೊಂದು ಸಂಪುಟ ಸಭೆಯವರೆಗೂ ಕಾಯೋಣ, ಕಾಂಗ್ರೆಸ್ ಜನರಿಗೆ ನೀಡಿರುವ ಎಲ್ಲಾ ಭರವಸೆ ಈಡೇರಿಸಲಿ ಎಂದ ಅವರು, ಗ್ಯಾರಂಟಿ ಘೋಷಣೆಯಾಗಿಯೇ ಉಳಿಯಲಿದೆ ಎಂದು ಹೇಳಿದರು.
#WATCH | There is a huge difference between the promises made by Congress and the announcements made by the CM after the first meeting. The people of Karnataka are disappointed by the announcements made by the CM. I don't think he has taken his decision sincerely: Former… pic.twitter.com/tV0VOPPl9x
— ANI (@ANI) May 20, 2023
ಇದನ್ನೂ ಓದಿ: ಐದು ಗ್ಯಾರಂಟಿಗಳಿಗೆ ತಾತ್ವಿಕ ಒಪ್ಪಿಗೆ, ಮುಂದಿನ ಸಂಪುಟ ಸಭೆ ಬಳಿಕ ಅಧಿಕೃತ ಘೋಷಣೆ: ಸಿಎಂ ಸಿದ್ದರಾಮಯ್ಯ
ಬಿಜೆಪಿ ಸರ್ಕಾರದ ಅವಧಿಯಲ್ಲಿ 3 ಲಕ್ಷ ಕೋಟಿ ರೂ. ಸಾಲ ಮಾಡಲಾಗಿದೆ ಎಂಬ ಸಿದ್ದರಾಮಯ್ಯ ಅವರ ಆರೋಪ ಕುರಿತು ಪ್ರತಿಕ್ರಿಯಿಸಿದ ಬೊಮ್ಮಾಯಿ, ಇದಕ್ಕೆ ಅಧಿವೇಶನದಲ್ಲಿ ಉತ್ತರ ನೀಡುತ್ತೇವೆ. ಕೋವಿಡ್ ನಿಂದಾಗಿ ರಾಜ್ಯದಲ್ಲಿ ಈ ವರ್ಷ ಸಾಲ ಹೆಚ್ಚಾಗಿದೆ ಎಂದು ತಿಳಿಸಿದರು.