ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ್‌ನ ಕೈಗೊಂಬೆ, ರಬ್ಬರ್ ಸ್ಟಾಂಪ್ ಆಗಿದ್ದಾರೆ: ನಳಿನ್ ಕುಮಾರ್ ಕಟೀಲ್
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಶನಿವಾರ ಕರ್ನಾಟಕದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದು, ತಮ್ಮ ಸಂಪುಟದಲ್ಲಿ ತಮ್ಮ ಆಯ್ಕೆಯ ಸಚಿವರನ್ನು ಆಯ್ಕೆ ಮಾಡುವ ಸ್ವಾತಂತ್ರ್ಯ ಕೂಡ ಅವರಿಗಿಲ್ಲ ಎಂದು ಆರೋಪಿಸಿದ್ದಾರೆ.
Published: 20th May 2023 04:03 PM | Last Updated: 20th May 2023 04:12 PM | A+A A-

ನಳಿನ್ ಕುಮಾರ್ ಕಟೀಲ್
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಶನಿವಾರ ಕರ್ನಾಟಕದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದು, ತಮ್ಮ ಸಂಪುಟದಲ್ಲಿ ತಮ್ಮ ಆಯ್ಕೆಯ ಸಚಿವರನ್ನು ಆಯ್ಕೆ ಮಾಡುವ ಸ್ವಾತಂತ್ರ್ಯ ಕೂಡ ಅವರಿಗಿಲ್ಲ ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆಸಿ ವೇಣುಗೋಪಾಲ್ ಅವರು ತಮ್ಮ ಟ್ವಿಟರ್ ಹ್ಯಾಂಡಲ್‌ನಲ್ಲಿ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರವನ್ನು ಪೋಸ್ಟ್ ಮಾಡಿದ ಕಟೀಲ್, ಹೊಸ ಮುಖ್ಯಮಂತ್ರಿ ಮೊದಲ ದಿನವೇ ಕಾಂಗ್ರೆಸ್ ಹೈಕಮಾಂಡ್‌ನ ಕೈಗೊಂಬೆಯಾಗಿದ್ದಾರೆ ಎಂದು ದೂರಿದ್ದಾರೆ.
ಪತ್ರದಲ್ಲಿ ವೇಣುಗೋಪಾಲ್ ಎಂಟು ಶಾಸಕರ ಪಟ್ಟಿಯನ್ನು ಹಂಚಿಕೊಂಡಿದ್ದು, ಕಾಂಗ್ರೆಸ್ ಅಧ್ಯಕ್ಷ ಎಂ ಮಲ್ಲಿಕಾರ್ಜುನ ಖರ್ಗೆ ಅವರು ಈ ಹೆಸರುಗಳನ್ನು ಸಂಪುಟ ಸಚಿವರನ್ನಾಗಿ ಅನುಮೋದಿಸಿದ್ದಾರೆ. ಸೂಕ್ತ ಕಾನೂನಿನ ನಿಬಂಧನೆಗಳ ಪ್ರಕಾರ ಈ ನಿರ್ಧಾರವನ್ನು ಕಾರ್ಯಗತಗೊಳಿಸುವಂತೆ ನೋಡಿಕೊಳ್ಳಲು ಈ ಮೂಲಕ ನಿಮ್ಮನ್ನು ವಿನಂತಿಸಲಾಗಿದೆ ಎಂದು ವೇಣುಗೋಪಾಲ್ ಪತ್ರದಲ್ಲಿ ಬರೆದಿದ್ದಾರೆ.
'ಕರ್ನಾಟಕದ ಕಾಂಗ್ರೆಸ್ ಸರ್ಕಾರದಲ್ಲಿ ಯಾರನ್ನು ಮಂತ್ರಿ ಮಾಡಬೇಕು ಎಂಬುದನ್ನು ನಿರ್ಧರಿಸುವ ಸ್ವಾತಂತ್ರ್ಯ ಸಿದ್ದರಾಮಯ್ಯನವರಿಗೆ ಇಲ್ಲ ಎನ್ನುವುದಕ್ಕೆ ಈ ಪತ್ರವೇ ಸಾಕ್ಷಿ. ಸಮಾಜವಾದಿ ಸಿದ್ಧಾಂತದಲ್ಲಿ ನಂಬಿಕೆ ಇಟ್ಟಿರುವ ಸಿದ್ದರಾಮಯ್ಯ ಅವರು ಮೊದಲ ದಿನದಿಂದಲೇ ತಾವು ಕಾಂಗ್ರೆಸ್ ಹೈಕಮಾಂಡ್‌ನ ಕೈಗೊಂಬೆಯಾಗಿದ್ದು, ರಬ್ಬರ್ ಸ್ಟಾಂಪ್ ಮುಖ್ಯಮಂತ್ರಿಯಾಗಿದ್ದಾರೆ ಎಂದು ಕಟೀಲ್ ಟ್ವೀಟ್ ಮಾಡಿದ್ದಾರೆ.
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಜಯಭೇರಿ ಬಾರಿಸಿ ಸರಿಯಾಗಿ ಒಂದು ವಾರದ ನಂತರ, ಸಿದ್ದರಾಮಯ್ಯ ಅವರು ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಿ ಮತ್ತು ಎಂಟು ಶಾಸಕರು ಸಚಿವರಾಗಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು.