ಮುಖ್ಯಮಂತ್ರಿ, ಸಚಿವ ಸಂಪುಟ ಆಯ್ತು; ಈಗ ಖಾತೆ ಹಂಚಿಕೆ ಕುರಿತು ಪೈಪೋಟಿ; ಡಿಕೆಶಿ-ಸಿದ್ದು ಭೇಟಿಯಲ್ಲಿ ನಾಯಕರು ಬ್ಯುಸಿ

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಿದ ಒಂದು ದಿನದ ನಂತರ, ಎಂಟು ಕ್ಯಾಬಿನೆಟ್ ಮಂತ್ರಿಗಳು ಸೇರಿ ಅನೇಕ ನಾಯಕರು ತಮ್ಮ ತಮ್ಮ ಸ್ಥಾನಗಳನ್ನು ಕಾಯ್ದಿರಿಸಲು ಭಾನುವಾರ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಿದ ಒಂದು ದಿನದ ನಂತರ, ಎಂಟು ಕ್ಯಾಬಿನೆಟ್ ಮಂತ್ರಿಗಳು ಸೇರಿ ಅನೇಕ ನಾಯಕರು ತಮ್ಮ ತಮ್ಮ ಸ್ಥಾನಗಳನ್ನು ಕಾಯ್ದಿರಿಸಲು ಭಾನುವಾರ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು.

ಸಿದ್ದರಾಮಯ್ಯ ಪಾಳಯದಿಂದ ಸತೀಶ್ ಜಾರಕಿಹೊಳಿ, ಬಿ.ಜೆ.ಜಮೀರ್ ಅಹಮದ್ ಖಾನ್, ಎಂ.ಬಿ.ಪಾಟೀಲ್ ಸಚಿವರಾಗಿದ್ದಾರೆ.

ಕೆಲವು ನಾಯಕರು ಭಾನುವಾರ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದು, ಮಾತುಕತೆ ನಡೆಸಿದ್ದಾರೆ. ಈ ನಡುವೆ ಒಂದು ವಾರದಲ್ಲಿ ಸಚಿವ ಸಂಪುಟ ವಿಸ್ತರಣೆಗೆ ಪಕ್ಷದ ಹೈಕಮಾಂಡ್ ಒಪ್ಪಿಗೆ ನೀಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಮೂಲಗಳ ಪ್ರಕಾರ ಸಚಿವರ ಆಯ್ಕೆಯಲ್ಲಿ ಪಕ್ಷದ ಹೈಕಮಾಂಡ್, ಸಿದ್ದರಾಮಯ್ಯ ಮತ್ತು ಶಿವಕುಮಾರ್ ಸಮಾನ ಅಧಿಕಾರ ಹೊಂದಿರುತ್ತಾರೆಂದು ತಿಳಿದುಬಂದಿದೆ.

ಡಾ.ಜಿ.ಪರಮೇಶ್ವರ, ಪ್ರಿಯಾಂಕ್ ಖರ್ಗೆ, ಕೆ.ಎಚ್.ಮುನಿಯಪ್ಪ, ಕೆ.ಜೆ.ಜಾರ್ಜ್ ಮತ್ತು ರಾಮಲಿಂಗಾರೆಡ್ಡಿ ಅವರನ್ನು ಹೈಕಮಾಂಡ್ ಆಯ್ಕೆ ಮಾಡಿದ್ದು, ಜಮೀರ್ ಅಹಮದ್ ಅವರ ಸೇರ್ಪಡೆಯನ್ನು ತಡೆಯಲು ಡಿಕೆ. ಶಿವಕುಮಾರ್ ಅವರು ಮುಜುಗರಕ್ಕೊಳಗಾಗಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯತಿಥಿ ಕಾರ್ಯಕ್ರಮದ ವೇಳೆ ಸಚಿವ ಎಂ.ಬಿ.ಪಾಟೀಲ್ ಅವರು ವೇದಿಕೆಯಲ್ಲಿ ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸುತ್ತಿದ್ದರು.

ಈ ವೇಳೆ ಬೇಸರಗೊಂಡ ಡಿಕೆ.ಶಿವಕುಮಾರ್ ಅವರು ನಾನು ಮಾತನಾಡುತ್ತಿದ್ದು, ಅಡ್ಡಿಪಡಿದಂತೆ ತಿಳಿಸಿದರು. ಈ ಮೂಲಕ ಸ್ಥಾನವನ್ನು ಲೆಕ್ಕಿಸುವುದಿಲ್ಲ, ಅಶಿಸ್ತು ಸಹಿಸುವುದಿಲ್ಲ ಎಂಬ ಸಂದೇಶವನ್ನು ಸಾರಿದರು.

ಈ ನಡುವೆ ಸಚಿವ ಸ್ಥಾನದ ಪ್ರಬ ಆಕಾಂಕ್ಷಿಯಾಗಿರುವ ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಅವರು ನಿನ್ನೆ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com