ಬಸವರಾಜ ಬೊಮ್ಮಾಯಿ.
ಬಸವರಾಜ ಬೊಮ್ಮಾಯಿ.

ಶೇ 40ರಷ್ಟು ಕಮಿಷನ್ ಆರೋಪಗಳನ್ನು ಪುರಾವೆ ಸಹಿತ ಸಾಬೀತು ಪಡಿಸಿ: ಕಾಂಗ್ರೆಸ್ ಸರ್ಕಾರಕ್ಕೆ ಬೊಮ್ಮಾಯಿ ಆಗ್ರಹ

ಹಿಂದಿನ ಬಿಜೆಪಿ ಆಡಳಿತದಲ್ಲಿ 40 ಪರ್ಸೆಂಟ್ ಕಮಿಷನ್ ಇತ್ತು ಎಂಬುದನ್ನು ಸಾಕ್ಷಿ ಸಮೇತ ಸಾಬೀತುಪಡಿಸಬೇಕು ಎಂದು ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಒತ್ತಾಯಿಸಿದ್ದಾರೆ.

ಬೆಂಗಳೂರು: ಹಿಂದಿನ ಬಿಜೆಪಿ ಆಡಳಿತದಲ್ಲಿ 40 ಪರ್ಸೆಂಟ್ ಕಮಿಷನ್ ಇತ್ತು ಎಂಬುದನ್ನು ಸಾಕ್ಷಿ ಸಮೇತ ಸಾಬೀತುಪಡಿಸಬೇಕು ಎಂದು ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಒತ್ತಾಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರಗಳ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಗರಣಗಳು ಅಥವಾ ಅಕ್ರಮಗಳ ಬಗ್ಗೆ ತನಿಖೆ ನಡೆಸಿ, ಸತ್ಯ ಹೊರಬರಲಿ ಎಂದು ಕೇಸರಿ ಪಕ್ಷದ ನಾಯಕ ಸರ್ಕಾರವನ್ನು ಒತ್ತಾಯಿಸಿದ್ದಾರೆ.

'ನಾನು ಸ್ಪಷ್ಟವಾಗಿ ಹೇಳಲು ಬಯಸುತ್ತೇನೆ. ಅವರು ತನಿಖೆ ಮಾಡಲಿ. 40 ಪರ್ಸೆಂಟ್ ಕಮಿಷನ್ ಆಪಾದನೆ ಮಾಡಿದ್ದು, ಅದನ್ನು ಈಗ ಸಾಕ್ಷ್ಯ ಸಮೇತ ಸಾಬೀತುಪಡಿಸಲಿ. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದು, ಎಲ್ಲ ಪುರಾವೆಗಳೊಂದಿಗೆ 40 ಪರ್ಸೆಂಟ್ ಕಮಿಷನ್ ಇದೆ ಎಂದು ತೋರಿಸಬೇಕೆಂದು ನಾನು ಒತ್ತಾಯಿಸುತ್ತೇನೆ' ಎಂದು ಬೊಮ್ಮಾಯಿ ಅವರು ಕಾಂಗ್ರೆಸ್ ಸರ್ಕಾರವು ಬಿಜೆಪಿ ಅವಧಿಯಲ್ಲಿ ನಡೆದ ಹಗರಣಗಳ ಬಗ್ಗೆ ತನಿಖೆ ನಡೆಸಲು ಯೋಜಿಸುತ್ತಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಹಿಂದಿನ ಬಿಜೆಪಿ ಆಡಳಿತದಲ್ಲಿ, ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೇಪಣ್ಣ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ಸಾರ್ವಜನಿಕ ಕೆಲಸಗಳಿಗಾಗಿ ಸಾರ್ವಜನಿಕ ಪ್ರತಿನಿಧಿಗಳು ಮತ್ತು ಅಧಿಕಾರಿಗಳ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪವನ್ನು ಆರೋಪಿಸಿದರು. ವಿಧಾನಸಭೆ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಆಗಿನ ಆಡಳಿತ ಪಕ್ಷದ ವಿರುದ್ಧ ಪ್ರಮುಖ ಅಸ್ತ್ರವಾಗಿ ಆಗ ವಿರೋಧ ಪಕ್ಷದಲ್ಲಿದ್ದ ಕಾಂಗ್ರೆಸ್ ಇದನ್ನು ಬಳಸಿಕೊಂಡಿತ್ತು.

ಗುತ್ತಿಗೆದಾರರ ಸಂಘದವರು ಈಗಲಾದರೂ ದಾಖಲೆಗಳನ್ನು ಬಿಡುಗಡೆ ಮಾಡುತ್ತಾರೆಯೇ ಎಂಬ ಪ್ರಶ್ನೆಗೆ ಬೊಮ್ಮಾಯಿ, 'ಅವರು ಮಾಡಲಿ, ಕೆಂಪಣ್ಣ ಇಲ್ಲಿಯವರೆಗೆ ಮಾಡಿಲ್ಲ. ನ್ಯಾಯಾಲಯಗಳಿಗೆ ನೀಡಿಲ್ಲ. ಆದರೆ, ಬಿಜೆಪಿ ವಿರುದ್ಧ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಇದರಿಂದ ಕಾಂಗ್ರೆಸ್‌ಗೆ ಲಾಭವಾಗಿದೆ. ಈಗಲಾದರೂ ದಾಖಲೆಗಳನ್ನು ಬಿಡುಗಡೆ ಮಾಡಲಿ' ಎಂದು ಹೇಳಿದರು.

ಪಿಎಸ್‌ಐ ನೇಮಕಾತಿ ಹಗರಣದ ಬಗ್ಗೆ ತನಿಖೆ ನಡೆಸಲಾಗುವುದು ಎಂಬ ಹೇಳಿಕೆಗೆ ಸಂಬಂಧಿಸಿದಂತೆ, 'ಅವರು ಎಲ್ಲವನ್ನೂ ತನಿಖೆ ಮಾಡಲಿ. ಅವರ (ಹಿಂದಿನ ಕಾಂಗ್ರೆಸ್‌) ಅಧಿಕಾರಾವಧಿಯಲ್ಲಿ ನಡೆದಿರುವ ಹಗರಣಗಳ ಕುರಿತು ಲೋಕಾಯುಕ್ತ ಮತ್ತು ಸಿಐಡಿಗೆ ಪ್ರಕರಣಗಳನ್ನು ನೀಡಿದ್ದೇವೆ. ಅವರ ಮತ್ತು ನಮ್ಮ (ಬಿಜೆಪಿ) ಅವಧಿಯಲ್ಲಿ ಏನಾಯಿತು ಎಂಬುದನ್ನು ತನಿಖೆ ಮಾಡಿ, ಸತ್ಯ ಹೊರತರಲಿ ಎಂದರು. 

ಭಾನುವಾರ ಮಳೆಯಿಂದಾಗಿ ಸಂಭವಿಸಿದ ಸಾವಿನ ಬಗ್ಗೆ ಮಾಜಿ ಮುಖ್ಯಮಂತ್ರಿ ನೋವು ವ್ಯಕ್ತಪಡಿಸಿದ್ದಾರೆ ಮತ್ತು ಮಳೆಯ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದರೂ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಯಾವುದೇ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ದೂರಿದರು.

'ಬೆಂಗಳೂರಿನಲ್ಲಿ ನಾವು ಎಸ್‌ಡಿಆರ್‌ಎಫ್ (ರಾಜ್ಯ ವಿಪತ್ತು ನಿರ್ವಹಣಾ ಪಡೆ) ಅನ್ನು ರಚಿಸಿದ್ದೇವೆ. ದುರ್ಬಲ ಸ್ಥಳಗಳಲ್ಲಿ ತಕ್ಷಣ ಅವರನ್ನು ಸೇವೆಗೆ ನಿಯೋಜಿಸಿ ಮತ್ತು ಅಡಚಣೆಯಿರುವ ಸ್ಥಳಗಳಲ್ಲಿ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಾನು ಮುಖ್ಯಮಂತ್ರಿಗಳನ್ನು ಒತ್ತಾಯಿಸುತ್ತೇನೆ. ಏಕೆಂದರೆ, ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆಗಳಿವೆ. ಅಲ್ಲದೆ, ಮರಗಳು ಬೀಳುವ ಬಗ್ಗೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಮತ್ತು ಜನರಿಗಾಗುವ ಅನಾಹುತ ಅಥವಾ ಅನಾನುಕೂಲತೆಯನ್ನು ತಪ್ಪಿಸಬೇಕು ಎಂದು ಅವರು ಹೇಳಿದರು. 

ನಗರದಲ್ಲಿ ಗುಡುಗು ಸಹಿತ ಭಾರಿ ಮಳೆಗೆ ಕೆಆರ್ ಸರ್ಕಲ್ ಅಂಡರ್‌ಪಾಸ್‌ನಲ್ಲಿ ವಾಹನ ಮುಳುಗಿ 23 ವರ್ಷದ ಮಹಿಳೆಯೊಬ್ಬರು ಭಾನುವಾರ ಮೃತಪಟ್ಟಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com