ಎರಡು ವರ್ಷಗಳ ಬಳಿಕ ಡಿಕೆ ಶಿವಕುಮಾರ್ ಮುಂದಿನ 8 ವರ್ಷ ರಾಜ್ಯದ ಸಿಎಂ: ಜ್ಯೋತಿಷಿ ಭವಿಷ್ಯ

ಎರಡು ವರ್ಷಗಳ ಬಳಿಕ ಎಂಟು ವರ್ಷಗಳ ಕಾಲ ಡಿ.ಕೆ ಶಿವಕುಮಾರ್ ಸಿಎಂ ಆಗಿರುತ್ತಾರೆ ಎಂದು ಜ್ಯೋತಿಷಿ ಬಿಬಿ ಆರಾಧ್ಯ ಭವಿಷ್ಯ ನುಡಿದಿದ್ದಾರೆ.
ಡಿ,ಕೆ ಶಿವಕುಮಾರ್
ಡಿ,ಕೆ ಶಿವಕುಮಾರ್

ಬೆಂಗಳೂರು: ಎರಡು ವರ್ಷಗಳ ಬಳಿಕ ಎಂಟು ವರ್ಷಗಳ ಕಾಲ ಡಿ.ಕೆ ಶಿವಕುಮಾರ್ ಸಿಎಂ ಆಗಿರುತ್ತಾರೆ ಎಂದು ಜ್ಯೋತಿಷಿ ಬಿಬಿ ಆರಾಧ್ಯ ಭವಿಷ್ಯ ನುಡಿದಿದ್ದಾರೆ.

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅಧಿಕಾರ ವಹಿಸಿಕೊಂಡಿದ್ದರೂ, ಐದು ವರ್ಷಗಳ ಕಾಲ ಆಡಳಿತ ನಡೆಸುವುದಿಲ್ಲ. ಲೋಕಸಭಾ ಚುನಾವಣೆಯ ಬಳಿಕ ಉಪ ಮುಖ್ಯಮಂತ್ರಿಯಾಗಿರುವ ಡಿ.ಕೆ.ಶಿವಕುಮಾರ್ ಸಿಎಂ ಆಗಿ ಅಧಿಕಾರ ವಹಿಸಿಕೊಳ್ಳುತ್ತಾರೆ. ಈ ಬಗ್ಗೆ ಹೈಕಮಾಂಡ್ ವಲಯದಲ್ಲಿ ಈಗಾಗಲೇ ಮಾತುಕತೆ ನಡೆದಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಹೆಚ್ಚು ಚರ್ಚೆಯಲ್ಲಿವೆ.

ಇದೀಗ ಜ್ಯೋತಿಷಿಯೊಬ್ಬರು ಭವಿಷ್ಯ ನುಡಿದಿದ್ದು, ಡಿ.ಕೆ.ಶಿವಕುಮಾರ್ ಸಿಎಂ ಆಗಲಿದ್ದಾರೆ ಎಂದು ಹೇಳಿದ್ದಾರೆ. ಡಿಸಿಎಂ ಆಗಿ ಸದ್ಯ ಅಧಿಕಾರ ವಹಿಸಿಕೊಂಡಿರುವ ಡಿಕೆಶಿ ಅವರಿಗೆ ನಿಯೋಜನೆಯಾಗಿರುವ ವಿಧಾನಸೌಧದ ಕೊಠಡಿ ಸಂಖ್ಯೆ 336ರಲ್ಲಿ ಮುಂದಿನ ಗುರುವಾರ ಪೂಜೆ ನೆರವೇರಲಿದೆ. ಜಾತಕ ಫಲದ ಪ್ರಕಾರ ಮುಹೂರ್ತ ನೀಡಿರುವ ಜ್ಯೋತಿಷಿ ಬಿಬಿ ಆರಾಧ್ಯ, ಅಭಿಜಿನ್ ಲಗ್ನದಲ್ಲಿ ಪೂಜೆ ನೆರವೇರಿಸಲು ಸೂಚನೆ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಸದ್ಯ ವಾಸ್ತವ್ಯ ಹೂಡಿರುವ ಸರ್ಕಾರಿ ನಿವಾಸವನ್ನು ವಾಸ್ತವ್ಯಕ್ಕೆ ಆಯ್ಕೆ ಮಾಡಿಕೊಳ್ಳುವಂತೆ ಡಿಕೆಶಿಗೆ ಜ್ಯೋತಿಷಿ ಬಿಬಿ ಆರಾಧ್ಯ ಸಲಹೆ ನೀಡಿದ್ದಾರೆ. ಅಲ್ಲದೆ ಎರಡು ವರ್ಷಗಳ ಬಳಿಕ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಎಂಟು ವರ್ಷಗಳ ಕಾಲ ಆಡಳಿತ ನಡೆಸುತ್ತೀರಿ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com