social_icon

ಕಪೋಕಲ್ಪಿತ ವರದಿ ಮಾಡುತ್ತಿರುವವರಿಗೆ ಇದು ನನ್ನ ಪ್ರತ್ಯುತ್ತರ: ಮಂಡ್ಯದಲ್ಲಿ ಬಿಜೆಪಿ ಹೀನಾಯ ಸೋಲಿನ ಹೊಣೆ ಹೊತ್ತ ಸುಮಲತಾ!

ಮಂಡ್ಯದ ಸಂಸದೆ ಸುಮಲತಾ ಬಿಜೆಪಿ ಬೆಂಬಿಸಿದ್ದರು. ಚುನಾವಣೆಯಲ್ಲಿ ಅವರು ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಿದ್ದರು. ಆದರೆ ಪಕ್ಷ ಜಿಲ್ಲೆಯಲ್ಲಿ ಒಂದೂ ಸ್ಥಾನ ಗೆದ್ದಿಲ್ಲ. ಈ ಕುರಿತು ಕೆಲವು ವರದಿಗಳು ಬರುತ್ತಿವೆ.

Published: 23rd May 2023 09:37 AM  |   Last Updated: 23rd May 2023 02:20 PM   |  A+A-


Sumalatha Ambhareesh

ಸುಮಲತಾ ಅಂಬರೀಷ್

Posted By : Shilpa D
Source : The New Indian Express

ಮಂಡ್ಯ: ಕಳೆದ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ಏಳು ವಿಧಾನಸಭಾ ಕ್ಷೇತ್ರಗಳು ಮತ್ತು ಪ್ರಮುಖ ಸ್ಥಳೀಯ ಸಂಸ್ಥೆಗಳನ್ನು ತನ್ನ ಹಿಡಿತದಲ್ಲಿಟ್ಟುಕೊಂಡಿದ್ದ ಪ್ರಬಲ ಜೆಡಿಎಸ್ ಸೋಲಿಸಿ ಸುಮಲತಾ ಅಂಬರೀಶ್ ಏಕಾಂಗಿಯಾಗಿ ಹೋರಾಡಿ ಮಂಡ್ಯ ಸಂಸದರಾಗಿ ಗೆಲ್ಲುವಲ್ಲಿ ಯಶಸ್ವಿಯಾದರು, ಆದರೆ ಅವರ ತಂತ್ರ ವಿಧಾನಸಭೆ ಚುನಾವಣೆಯಲ್ಲಿ ನಡೆಯಲಿಲ್ಲ ಎಂದು ಅವರ ಬಗ್ಗೆ ಟೀಕೆಗಳು ಕೇಳಿ ಬಂದಿವೆ.

ಮಂಡ್ಯದ ಸಂಸದೆ ಸುಮಲತಾ ಬಿಜೆಪಿ ಬೆಂಬಿಸಿದ್ದರು. ಚುನಾವಣೆಯಲ್ಲಿ ಅವರು ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಿದ್ದರು. ಆದರೆ ಪಕ್ಷ ಜಿಲ್ಲೆಯಲ್ಲಿ ಒಂದೂ ಸ್ಥಾನ ಗೆದ್ದಿಲ್ಲ. ಈ ಕುರಿತು ಕೆಲವು ವರದಿಗಳು ಬರುತ್ತಿವೆ.

ಈ ಕುರಿತು ಸೋಮವಾರ ಅವರು ಸುದೀರ್ಘ ಪೋಸ್ಟ್‌ ಒಂದನ್ನು ಹಾಕಿದ್ದಾರೆ. 'ಕಪೋಕಲ್ಪಿತ ವರದಿ ಮಾಡುತ್ತಿರುವ ಕೆಲ ದೃಶ್ಯ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳ ವರದಿಗೆ ಇದು ನನ್ನ ಪ್ರತ್ಯುತ್ತರ' ಎಂದು ಹೇಳಿದ್ದಾರೆ.

ತಮ್ಮೆಲ್ಲರಿಗೂ ಗೊತ್ತಿರುವಂತೆ ನಾನು 10 ಮಾರ್ಚ್ 2023 ರಂದು ಪತ್ರಿಕಾಗೋಷ್ಠಿ ಕರೆದು ಬಿಜೆಪಿಗೆ ನನ್ನ ಬೆಂಬಲವನ್ನು ಘೋಚಿಸಿದ್ದೆ. ಚುನಾವಣೆ ದಿನಾಂಕ ಘೋಷಣೆಯಾದ ನಂತರ ಪಕ್ಷವು ಏಪ್ರಿಲ್ 18 ರಂದು ಅಭ್ಯರ್ಥಿಗಳನ್ನು ಘೋಷಣೆ ಮಾಡಿತು.

ಇದನ್ನೂ ಓದಿ: ಒಂದು ಕುಟುಂಬ ಚುನಾವಣೆಯಲ್ಲಿ ಅತಂತ್ರ ಸ್ಥಿತಿ ಬರಲಿ ಎಂದು ಕಾಯುತ್ತಾ ಕುಳಿತಿದೆ: ಹೆಚ್ ಡಿಕೆಗೆ ಸುಮಲತಾ ಟಾಂಗ್

ಪಕ್ಷವು ಘೋಷಣೆ ಮಾಡಿದ ನನ್ನ ಕ್ಷೇತ್ರದ ಎಲ್ಲ ಅಭ್ಯರ್ಥಿಗಳು ಫಸ್ಟ್ ಟೈಮ್ ಚುನಾವಣೆ ಎದುರಿಸಿದವರು. ಆದರೂ ಎದುರಾಳಿಗಳ ವಿರುದ್ಧ ಸಮರ್ಥವಾಗಿ ಹೋರಾಟ ಮಾಡಿದ್ದಾರೆ. ಅಲ್ಲದೇ ಪ್ರಚಾರಕ್ಕೆ ನಮಗಿದ್ದದ್ದು ಎರಡ್ಮೂರು ವಾರಗಳಷ್ಟೇ ಸಮಯ. ಆದರೂ ಹೊಸ ಪಡೆಯನ್ನು ಕಟ್ಟಿಕೊಂಡು ಹೋರಾಟ ಮಾಡಿದ್ದೇವೆ. ಪರಿಣಾಮ ಮೊದಲ ಬಾರಿಗೆ ಮಂಡ್ಯ, ಶ್ರೀರಂಗಪಟ್ಟಣ, ಮದ್ದೂರು ಮತ್ತು ಮಳವಳ್ಳಿಯಲ್ಲಿ ಬಿಜೆಪಿಗೆ ಮತಗಳ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದೆ.  

ಆದರೆ, ಮಂಡ್ಯದಲ್ಲಿ ಮಾತ್ರವಲ್ಲ ಕರ್ನಾಟಕದಲ್ಲೇ ಆಡಳಿತ ವಿರೋಧಿ ಅಲೆ ಮತ್ತು ಕಾಂಗ್ರೆಸ್ ಅಲೆ ಹೆಚ್ಚಾಗಿದ್ದರಿಂದ ನಿರೀಕ್ಷಿತ ಫಲಿತಾಂಶ ದೊರೆತಿಲ್ಲ. ಹಾಗಾಗಿ ಪಕ್ಷಕ್ಕೆ ಆಗಿರುವ ಸೋಲನ್ನು ಒಪ್ಪಿಕೊಂಡು, ಆತ್ಮಾವಲೋಕನದ ಜೊತೆಗೆ ಅಗತ್ಯ ಮಾರ್ಪಾಡುಗಳನ್ನು ಮಾಡಿಕೊಳ್ಳುತ್ತೇವೆ.

ಮಾರ್ಚ್ 10 ರಂದು ನಾನು ನಡೆಸಿದ್ದ ಪತ್ರಿಕಾಗೋಷ್ಠಿಯಲ್ಲಿ ‘ನಾನು ರಿಸ್ಕ್ ತಗೆದುಕೊಳ್ಳುತ್ತಿದ್ದೇನೆ. ಇದು ರಿಸ್ಕ್ ಎಂದು ನನಗೆ ಗೊತ್ತಿದೆ’ ಎಂದು ಮಾಧ್ಯಮಗಳ ಮುಂದೆಯೇ ಅವತ್ತೆ ಸ್ಪಷ್ಟ ಪಡಿಸಿದ್ದೆ. ಪಕ್ಷದ ಸೋಲಿಗೆ ಇಷ್ಟೆಲ್ಲ ಕಾರಣಗಳು ಇದ್ದರೂ, ನೀವು ನಿಮ್ಮದೇ ಆದ ರೀತಿಯಲ್ಲಿ ಲೆಕ್ಕಾಚಾರ ಹಾಕುತ್ತೀದ್ದೀರಿ. ಸುಳ್ಳು ಸಂದೇಶಗಳನ್ನು ಹರಡುತ್ತಿದ್ದೀರಿ. ನೀವೇ ಸುದ್ದಿಯನ್ನು ಸೃಷ್ಟಿಸಿ ಜನರಿಗೆ ತಪ್ಪು ಮಾಹಿತಿಯನ್ನು ನೀಡುವುದು ಎಷ್ಟು ಸರಿ?

ಇದನ್ನೂ ಓದಿ: ಸಕ್ಕರೆ ನಾಡು ಮಂಡ್ಯಕ್ಕೆ ಪ್ರಧಾನಿ ಮೋದಿ ಭೇಟಿಗೆ ಕ್ಷಣಗಣನೆ: ಬದಲಾವಣೆ ಗಾಳಿ ಮೇಲ್ನೋಟಕ್ಕೆ ಕಾಣುತ್ತಿಲ್ಲ ಜನರ ಮನಸ್ಸಿನಲ್ಲಿ ಇದೆ ಎಂದ ಸುಮಲತಾ ಅಂಬರೀಷ್

ನಾನು ಒಂದು ವಿಷಯವನ್ನು ಸ್ಪಷ್ಟವಾಗಿ ಹೇಳಲು ಇಷ್ಟಪಡುತ್ತೇನೆ. ಮುಂದಿನ ಚುನಾವಣೆಯಲ್ಲಿ ನನ್ನ ಭವಿಷ್ಯ ಅಥವಾ 24X7 ರಾಜಕಾರಣದ ಲೆಕ್ಕಾಚಾರ ಹಾಕುತ್ತಾ ಕೂರುವವಳು ನಾನಲ್ಲ. ನನ್ನ ಸ್ವಾರ್ಥದ ಬಗ್ಗೆ ಮಾತ್ರ ಯೋಚಿಸಿದ್ದರೆ ಬಹುಶಃ ನನ್ನ ನಿಲುವೇ ಬೇರೆಯದ್ದಾಗಿಯೇ ಇರುತ್ತಿತ್ತು. ಆ ರೀತಿ ಮಾಡುವುದಕ್ಕೆ ನಾನು ಇಷ್ಟ ಪಡುವುದಿಲ್ಲ. ನನ್ನ ಆತ್ಮಸಾಕ್ಷಿ ಆಧಾರದ ಮೇಲೆ ನಾನು ನನ್ನ ನಿರ್ಧಾರಗಳನ್ನು ತಗೆದುಕೊಳ್ಳುತ್ತೇನೆ ಮತ್ತು ನನ್ನ ಕ್ಷೇತ್ರಕ್ಕೆ ಒಳ್ಳೆದಾಗುವಂತಹ ಯೋಚನೆಯನ್ನು ಮಾತ್ರ ಮಾಡುತ್ತೇನೆ. ನಾನು ಎಂದಿಗೂ ನನ್ನ ನಿರ್ಧಾರಕ್ಕೆ ಬದ್ಧಳಾಗಿರುತ್ತೇನೆ.

ನಮ್ಮ ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರ ನಾಯಕತ್ವದ ಮೇಲೆ ಯಾವತ್ತಿಗೂ ನಂಬಿಕೆ ಇರಲಿದೆ ಎಂದು ಮತ್ತೆ ಪುನರುಚ್ಚಿಸುತ್ತೇನೆ. ನಿಮ್ಮ ಗ್ರಹಿಕೆಗಳನ್ನು ದಯವಿಟ್ಟು ಸರಿಪಡಿಸಿಕೊಳ್ಳಿ. ಇಲ್ಲಿ ಪ್ರಮುಖವಾಗಿ ಒಂದು ಅಂಶವನ್ನು ಮರೆಯಬಾರದು. ನನ್ನ ಸ್ವಾಭಿಮಾನಿ ಕ್ಷೇತ್ರದಲ್ಲಿ ನಾನು ಈವರೆಗೂ ಏಕಾಂಗಿಯಾಗಿ ಹೋರಾಟ ಮಾಡುತ್ತಿರುವುದು ಕ್ಷೇತ್ರದ ಭ್ರಷ್ಟ ಹಾಗೂ ದುರಹಂಕಾರಿ ವರ್ತನೆಯ ಶಾಸಕರು ವಿರುದ್ಧ. ನನ್ನ ಈ ಸತತ ಹೋರಾಟವನ್ನು ಗಮನಿಸಿರುವ ನನ್ನ ಸ್ವಾಭಿಮಾನಿ ಜನರು ಅವರಿಗೆ ತಕ್ಕ ಪಾಠ ಕಲಿಸಿದ್ದಾರೆ. ಆ ಪಾರ್ಟಿಯಲ್ಲಿ ಗೆದ್ದಿರುವುದು ಒಬ್ಬರೇ ಒಬ್ಬರು. ಅವರೂ ಹೊಸಬರು.

ಹೌದು, ನನ್ನ ನ್ಯಾಯಯುತ ಹೋರಾಟದ ಲಾಭವನ್ನು ನನ್ನ ಜಿಲ್ಲೆಯ ಕಾಂಗ್ರೆಸ್ ಪಡೆದುಕೊಂಡಿದೆ. ಅದು ನನ್ನ ಸ್ವಾಭಿಮಾನಿ ಮಂಡ್ಯದ ಜನರೇ ನೀಡಿದ ಜನಾದೇಶವಾಗಿದ್ದರಿಂದ ಅದನ್ನು ಗೌರವಿಸುತ್ತೇನೆ. ರಾಜಕೀಯ, ರಾಜಕಾರಣ ಮತ್ತು ತಂತ್ರಗಳು ಒಂದು ನಿರ್ದಿಷ್ಟ ಮಟ್ಟಿಗೆ ಕೆಲಸ ಮಾಡುತ್ತೇವೆ ಎಂದು ನಾನು ದೃಢವಾಗಿ ನಂಬುತ್ತೇನೆ. ಆದರೆ, ಅಂತಿಮವಾಗಿ ಯಾವುದೇ ಪ್ರಜಾಪ್ರಭುತ್ವದಲ್ಲಿ ಸಾಮಾನ್ಯ ವ್ಯಕ್ತಿ ಗೆಲ್ಲಬೇಕು ವಿನಃ ಪಕ್ಷಗಳು ಅಥವಾ ನಾಯಕರಲ್ಲ.

ಇದನ್ನೂ ಓದಿ:ಬಿಜೆಪಿ ಪಕ್ಷಕ್ಕೆ ಇನ್ಮುಂದೆ ನನ್ನ ಸಂಪೂರ್ಣ ಬೆಂಬಲ; ಪ್ರಾಣ ಬಿಡುತ್ತೇನೆ ಹೊರತು ಮಂಡ್ಯ ಬಿಡಲ್ಲ: ಸಂಸದೆ ಸುಮಲತಾ ಅಂಬರೀಷ್

ಸದ್ಯ ನನ್ನ ಮುಂದೆ ಎರಡು ಗುರಿಗಳಿವೆ. ಮುಂದೆ ಮತ್ತೊಂದು ಮಹಾ ಚುನಾವಣೆಯಿದೆ. ನನ್ನ ಕ್ಷೇತ್ರದಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸಿ, ಚುನಾವಣೆಯಲ್ಲಿ ಗೆಲ್ಲಲು ಶ್ರಮಿಸುತ್ತೇವೆ. ಬಿಜೆಪಿ ಪಕ್ಷವು ಹಿಂದೆಂದಿಗಿಂತಲೂ ಬಲವಾಗಿ ಮತ್ತು ಅಚ್ಚರಿಯ ರೀತಿಯಲ್ಲಿ ಪುಟಿದೇಳಲಿದೆ ಮತ್ತು ವಿಜಯಶಾಲಿಯಾಗಿ ಹೊರಹೊಮ್ಮಲಿದೆ ಎನ್ನುವುದು ನನ್ನ ಅಚಲ ನಂಬಿಕೆಯಾಗಿದೆ.

ಮತ್ತೊಂದು ಸಲ ಹೇಳುತ್ತೇನೆ, ನನ್ನ ನಿರ್ಧಾರ ಮತ್ತು ಪರಿಣಾಮಗಳ ಬಗ್ಗೆ ನನಗೆ ಸಂಪೂರ್ಣ ಅರಿವಿದೆ. ಹಾಗಾಗಿ ಈ ವಿಷಯದಲ್ಲಿ ನನಗೆ ವಿಷಾದವಿಲ್ಲ. ಕೆಟ್ಟ ಹಾಗೂ ನೆಗೆಟಿವ್ ಸುದ್ದಿ ಪ್ರಸಾರ ಮಾಡುವವರ ಜೊತೆಗೆ ಟ್ರೋಲ್ ಮಾಡುವವರು ದಯವಿಟ್ಟು ಆರೋಗ್ಯವಂಥ ಮನಸ್ಸು ಬೆಳೆಸಿಕೊಳ್ಳಿ. ವಿಶ್ರಾಂತಿ ತಗೆದುಕೊಂಡು ಆರೋಗ್ಯ ವೃದ್ಧಿಸಿಕೊಳ್ಳಿ. ನಿಮ್ಮ ಟ್ರೋಲ್ ಗಳು ನಿಮ್ಮ ವ್ಯಕ್ತಿತ್ವವನ್ನು ತೋರಿಸುತ್ತವೆಯೇ ಹೊರತು, ಅದರಿಂದ ನನ್ನ ಕೆಲಸಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ.

ನಿಮ್ಮ ಅಗ್ಗದ ಮಾತುಗಳು, ನಿಂದನೆಯ ನುಡಿಗಳು, ನೀವು ಬಳಸುವ ಪದಗಳು ನಿಮ್ಮ ವ್ಯಕ್ತಿತ್ವವನ್ನು ತೋರಿಸುತ್ತಿವೆ. ದಯವಿಟ್ಟು ನಿಮ್ಮ ಈ ನಡವಳಿಕೆಯ ಮೂಲಕ ನಿಮ್ಮ ತಂದೆ ತಾಯಿಯನ್ನು ಅವಮಾನಿಸಬೇಡಿ. ಆರೋಗ್ಯವಂತ ಮತ್ತು ಸಕಾರಾತ್ಮಕ ಟೀಕೆ, ಟಿಪ್ಪಣಿ, ಚರ್ಚೆಗಳಿಗೆ ಯಾವತ್ತಿಗೂ ಈ ನೆಲದಲ್ಲಿ ಸ್ವಾಗತವಿದೆ.

ಇದನ್ನೂ ಓದಿ: ನಾನು ಮನಸ್ಸು ಮಾಡದಿರುತ್ತಿದ್ದರೆ ಮಂಡ್ಯದ ಅಕ್ರಮ ಗಣಿಗಾರಿಕೆ ನಿಲ್ಲುತ್ತಿರಲಿಲ್ಲ, ಮೈ ಶುಗರ್ ಫ್ಯಾಕ್ಟರಿ ಮತ್ತೆ ಆರಂಭವಾಗುತ್ತಿರಲಿಲ್ಲ: ಸುಮಲತಾ ಅಂಬರೀಷ್

ನೀವು ಅಂದುಕೊಂಡಿರುವ ವಿಜಯವನ್ನು ಆನಂದಿಸಿ ಮತ್ತು ಆಚರಿಸಿ. ಮುಂದಿನ ಬಾರಿ ಪ್ರಬಲ ಹೋರಾಟಕ್ಕೆ ಸಿದ್ಧರಾಗಿರಿ. ಜೈ ಹಿಂದ್, ಜೈ ಕರ್ನಾಟಕ, ಜೈ ಮಂಡ್ಯ ಎಂದು ಬರೆದುಕೊಂಡಿದ್ದಾರೆ.


Stay up to date on all the latest ರಾಜಕೀಯ news
Poll
Khalistani militant Hardeep Singh Nijjar

ಸಿಖ್ ಪ್ರತ್ಯೇಕತಾವಾದಿ ನಿಜ್ಜರ್ ಹತ್ಯೆಯಲ್ಲಿ ಭಾರತದ ಪಾತ್ರವಿದೆ ಎಂಬ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಆರೋಪವನ್ನು ನೀವು ನಂಬುತ್ತೀರಾ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp