ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕಸರತ್ತು: ದೆಹಲಿಗಿಂದು ಸಿದ್ದು-ಡಿಕೆಶಿ, 20 ಸಚಿವರ ಆಯ್ಕೆ ಕುರಿತು ಹೈಕಮಾಂಡ್ ಜೊತೆ ಚರ್ಚೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬುಧವಾರ ಸಂಜೆ ರಾಷ್ಟ್ರ ರಾಜಧಾನಿ ನವದೆಹಲಿಗೆ ಭೇಟಿ ನೀಡುತ್ತಿದ್ದು, ಭೇಟಿ ವೇಳೆ ಸಚಿವ ಸಂಪುಟ ವಿಸ್ತರಣೆ ಕುರಿತು ಪಕ್ಷದ ಕೇಂದ್ರ ನಾಯಕತ್ವ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಚರ್ಚಿ ನಡೆಸಲಿದ್ದಾರೆಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬುಧವಾರ ಸಂಜೆ ರಾಷ್ಟ್ರ ರಾಜಧಾನಿ ನವದೆಹಲಿಗೆ ಭೇಟಿ ನೀಡುತ್ತಿದ್ದು, ಭೇಟಿ ವೇಳೆ ಸಚಿವ ಸಂಪುಟ ವಿಸ್ತರಣೆ ಕುರಿತು ಪಕ್ಷದ ಕೇಂದ್ರ ನಾಯಕತ್ವ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಚರ್ಚಿ ನಡೆಸಲಿದ್ದಾರೆಂದು ತಿಳಿದುಬಂದಿದೆ.

ಶುಕ್ರವಾರ ಅಥವಾ ಶನಿವಾರ ಸಿಎಂ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.ಆದರೆ, ಸಿಎಂ ಹಾಗೂ ಡಿಸಿಎಂ ಕೇಂದ್ರ ನಾಯಕರ ಜತೆ ಚರ್ಚಿಸಿದ ಬಳಿಕವೇ ಈ ಕುರಿತು ಅಂತಿಮ ನಿರ್ಧಾರಗಳಾಗಲಿವೆ ಎಂದು ಹೇಳಲಾಗುತ್ತಿದೆ.

ಮೂರು ದಿನಗಳ ವಿಧಾನಸಭೆಯ ಅಧಿವೇಶನ ಬುಧವಾರ ಮುಕ್ತಾಯಗೊಂಡ ನಂತರ, ಇಬ್ಬರು ಉನ್ನತ ನಾಯಕರು ವಿಶೇಷ ವಿಮಾನದ ಮೂಲಕ ನವದೆಹಲಿಗೆ ಪ್ರಯಾಣಿಸಲಿದ್ದಾರೆ.

ಸಿದ್ದರಾಮಯ್ಯ ಅವರು 20 ಹೊಸ ಸಚಿವರನ್ನು ಸೇರ್ಪಡೆ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com