ಸೋತ ಶೆಟ್ಟರ್ ಗೆ ಸೂಕ್ತ ಸ್ಥಾನಮಾನ: ಲೋಕಸಭೆ ಚುನಾವಣೆಯಲ್ಲಿ ಪ್ರಹ್ಲಾದ್ ಜೋಶಿ ಸೋಲಿಸಲು ಕಾಂಗ್ರೆಸ್ ಪಣ!

ವಿಧಾನಸಭೆ ಫಲಿತಾಂಶದ ನಂತರ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಮುಂದಿನ ನಡೆ ಏನೆಂಬುದರ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಈ ನಡುವೆ ಜಗದೀಶ್ ಶೆಟ್ಟರ್‌ಗೆ ಕಾಂಗ್ರೆಸ್ ಕಲಿಗಳು ಮಹತ್ವದ ಸೂಚನೆ‌ ನೀಡಿದ್ದಾರೆ.
ಜಗದೀಶ್ ಶೆಟ್ಟರ್
ಜಗದೀಶ್ ಶೆಟ್ಟರ್
Updated on

ಹುಬ್ಬಳ್ಳಿ: ವಿಧಾನಸಭೆ ಫಲಿತಾಂಶದ ನಂತರ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಮುಂದಿನ ನಡೆ ಏನೆಂಬುದರ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಈ ನಡುವೆ ಜಗದೀಶ್ ಶೆಟ್ಟರ್‌ಗೆ ಕಾಂಗ್ರೆಸ್ ಕಲಿಗಳು ಮಹತ್ವದ ಸೂಚನೆ‌ ನೀಡಿದ್ದಾರೆ.

ಕಾಂಗ್ರೆಸ್‌ ಹೈ ಕಮಾಂಡ್‌ ನಿರ್ಧಾರದಂತೆ ಜಗದೀಶ್ ಶೆಟ್ಟರ್ ಲೋಕಸಭೆ ಚುನಾವಣೆಗೆ ತಯಾರಿ ನಡೆಸಿದ್ದಾರೆಂಬ ಮಾತುಗಳು ಸದ್ಯ ಕ್ಷೇತ್ರದಲ್ಲಿ ಭಾರೀ ಕೇಳಿ ಬರುತ್ತಿದೆ. ಈ ನಡುವೆ ಜಗದೀಶ್ ಶೆಟ್ಟರ್‌ಗೆ ಸಚಿವ ಸಂಪುಟದಲ್ಲಿ ಸ್ಥಾನಮಾನ ಸಿಗುತ್ತದೆಯೋ ಇಲ್ಲವೋ ಎನ್ನುವುದು ಕೂಡ ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕಿದೆ.

ಧಾರವಾಡ ಜಿಲ್ಲೆಯ ಹಿರಿಯ ಕಾಂಗ್ರೆಸ್ ಶಾಸಕರು ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ತೀವ್ರ ಲಾಬಿ ನಡೆಸುತ್ತಿದ್ದರೆ, ವಿಧಾನಸಭಾ ಚುನಾವಣೆಯಲ್ಲಿ ಸೋತಿರುವ ಜಗದೀಶ ಶೆಟ್ಟರ್ ಅವರಿಗೆ ಲೋಕಸಭೆ ಚುನಾವಣೆ ಟಿಕೆಟ್ ನೀಡಲು ಕಾಂಗ್ರೆಸ್ ಬಯಸಿದೆ ಎನ್ನಲಾಗಿದೆ. ಇದರಿಂದ ಈ ಭಾಗದ ಲೋಕಸಭೆ ಚುನಾವಣೆ ಟಿಕೆಟ್ ಆಕಾಂಕ್ಷಿಗಳ ಕಣ್ಣುರಿಗೂ ಕಾರಣವಾಗಿದೆ.

ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ವಿಶೇಷವಾಗಿ ಉತ್ತರ ಕರ್ನಾಟಕ ಭಾಗದಲ್ಲಿನಾಗಿರುವ ಶೆಟ್ಟರ್ ಅವರಿಗೆ ಸೂಕ್ತ ಸ್ಥಾನ ಮಾನ ನೀಡುವುದು ಕಾಂಗ್ರೆಸ್ ಹೈಕಮಾಂಡ್ ರಾಜಕೀಯ ಲೆಕ್ಕಾಚಾರವಾಗಿದೆ.

ಶೆಟ್ಟರ್ ಮತ್ತು ಬಿಜೆಪಿಯ ಮತ್ತೊಬ್ಬ ಲಿಂಗಾಯತ ನಾಯಕ ಲಕ್ಷ್ಮಣ ಸವದಿ ಅವರ ಪ್ರವೇಶದಿಂದ ಕಾಂಗ್ರೆಸ್‌ಗೆ ಈ ಪ್ರದೇಶದಲ್ಲಿ ಸಾಕಷ್ಟು ಲಾಭವಾಗಿದೆ ಮತ್ತು ಅವರಿಗೆ ಸರ್ಕಾರ ಅಥವಾ ಪಕ್ಷದಲ್ಲಿ ಉತ್ತಮ ಸ್ಥಾನ ನೀಡುವುದು ಬಹುತೇಕ ಖಚಿತ ಎಂದು ಮೂಲಗಳು ತಿಳಿಸಿವೆ.

ಶೆಟ್ಟರ್ ಅವರು ಸುಮಾರು ಮೂರು ದಶಕಗಳ ಕಾಲ ಹೊಂದಿದ್ದ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಸ್ಥಾನವನ್ನು ಕಳೆದುಕೊಂಡಿರಬಹುದು, ಆದರೆ ಲೋಕಸಭೆ ಚುನಾವಣೆಯಲ್ಲಿ ಅವರ ಅನುಭವ ಮತ್ತು ಆಡಳಿತದ ಚಾಣಾಕ್ಷತೆಯನ್ನು ಬಳಸಿಕೊಳ್ಳಲು ಪಕ್ಷ ಬಯಸಿದೆ.  ಶೆಟ್ಟರ್ ಅವರನ್ನು ಎಂಎಲ್ಸಿ ಮಾಡಿ ಸಂಪುಟಕ್ಕೆ ಸೇರಿಸಿಕೊಳ್ಳಬಹುದು ಎಂದು ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ.

ಆದರೆ ಈ ಸಂಬಂಧ ಇಲ್ಲಿಯವರೆಗೂ ಯಾವುದೇ ಪಕ್ಷದ ನಾಯಕರು ನನ್ನೊಂದಿಗೆ ಮಾತನಾಡಿಲ್ಲ ಎಂದು ಶೆಟ್ಟರ್ ಹೇಳಿದ್ದಾರೆ. ಪಕ್ಷದ ಕೆಲವು ಮೂಲಗಳು ಮತ್ತು ಮಾಧ್ಯಮ ವರದಿಗಳಿಂದ ಮಾತ್ರ ನನಗೆ ಸುಳಿವು ಸಿಕ್ಕಿತು. ನಾನು ಪಕ್ಷದ ನಾಯಕತ್ವದ ಜೊತೆ ನೇರವಾಗಿ ಮಾತನಾಡದ ಹೊರತು ಏನನ್ನೂ ಹೇಳಲಾರೆ ಎಂದಿದ್ದಾರೆ.

ಧಾರವಾಡ ಲೋಕಸಭೆ ಕ್ಷೇತ್ರದಲ್ಲಿ ನಾಲ್ಕು ಬಾರಿ ಸಂಸದ ಹಾಗೂ ಕೇಂದ್ರ ಸಚಿವರಾಗಿರುವ ಪ್ರಹ್ಲಾದ ಜೋಶಿ ಅವರ ವಿರುದ್ಧ ಕಾಂಗ್ರೆಸ್ ಜಗದೀಶ್ ಶೆಟ್ಟರ್ ಅವರನ್ನು ಕಣಕ್ಕಿಳಿಸಲಿದೆ ಎಂದು ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ. ಪಕ್ಷವು ಬಹುಸಂಖ್ಯಾತ ಲಿಂಗಾಯತ ಮತಗಳನ್ನು ತನ್ನತ್ತೆ ಸೆಳೆಯಲು ಯತ್ನಿಸುತ್ತಿದೆ. 1996 ರಿಂದ ಈ ಸ್ಥಾನವನ್ನು ಹಿಡಿದಿರುವ ಬಿಜೆಪಿಯನ್ನು ಕೆಳಗಿಳಿಸಲು ಪ್ರಯತ್ನಿಸುತ್ತದೆ.

ಮೂರು ಬಾರಿ ಶಾಸಕರಾಗಿರುವ ಸಂತೋಷ್ ಲಾಡ್, ವಿನಯ್ ಕುಲಕರ್ಣಿ ಮತ್ತು ಪ್ರಸಾದ್ ಅಬ್ಬಯ್ಯ ಅವರು ಸ್ಥಾನಕ್ಕಾಗಿ ತೀವ್ರ ಲಾಬಿ ನಡೆಸುತ್ತಿದ್ದಾರೆ. ಬಳ್ಳಾರಿಯ ಗಣಿ ಉದ್ಯಮಿ ಲಾಡ್, ಹಿಂದಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರಾಗಿದ್ದರು.

ಬಿಜೆಪಿ ಸದಸ್ಯ ಯೋಗೀಶ್  ಗೌಡರ್ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ಕುಲಕರ್ಣಿ ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಪಕ್ಷವು ಎರಡನೇ ಸಾಲಿನ ನಾಯಕರ ಬೆಳವಣಿಗೆಗೆ ಅವಕಾಶ ನೀಡಬೇಕು ಎಂದು ಅವರು ಹೇಳಿದ್ದಾರೆ.

ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಬುಧವಾರ ಹುಬ್ಬಳ್ಳಿಯ ಪ್ರಮುಖ ಬೀದಿಗಳಲ್ಲಿ ಅಬ್ಬಯ್ಯ ಬೆಂಬಲಿಗರು ಮೆರವಣಿಗೆ ನಡೆಸಿದರು. ಸತತ ಮೂರು ಬಾರಿ ವಿಧಾನಸಭೆ ಚುನಾವಣೆಯಲ್ಲಿ ಗೆದ್ದರೂ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ಸಿಕ್ಕಿಲ್ಲ ಎಂದು ವಾಗ್ದಾಳಿ ನಡೆಸಿದರು. ಅಬ್ಬಯ್ಯ ಅವರು ಎಸ್‌ಸಿ ಕೋಟಾದ ಮೂಲಕ ಸಂಪುಟದಲ್ಲಿ ಪ್ರವೇಶ ಪಡೆಯುವ ನಿರೀಕ್ಷೆಯಲ್ಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com