'ವಿಪಕ್ಷ ನಾಯಕ' ಸ್ಥಾನಕ್ಕೆ ಸೂಕ್ತ ವ್ಯಕ್ತಿಯನ್ನು ಹುಡುಕಿಕೊಳ್ಳಲಿ: ಬಿಜೆಪಿಗೆ ಕಾಂಗ್ರೆಸ್ ಟಾಂಗ್
ನೂತನ ಸರ್ಕಾರ ರಚನೆಯಾಗಿ ಐದು ದಿನ ಕಳೆದರೂ ''ಐದು ಗ್ಯಾರಂಟಿ' ಅನುಷ್ಠಾನದ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ನಿರಂತರವಾಗಿ ವಾಗ್ದಾಳಿ ನಡೆಸುತ್ತಿರುವ ಪ್ರತಿಪಕ್ಷ ಬಿಜೆಪಿ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ.
Published: 25th May 2023 04:41 PM | Last Updated: 25th May 2023 06:13 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ನೂತನ ಸರ್ಕಾರ ರಚನೆಯಾಗಿ ಐದು ದಿನ ಕಳೆದರೂ ''ಐದು ಗ್ಯಾರಂಟಿ' ಅನುಷ್ಠಾನದ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ನಿರಂತರವಾಗಿ ವಾಗ್ದಾಳಿ ನಡೆಸುತ್ತಿರುವ ಪ್ರತಿಪಕ್ಷ ಬಿಜೆಪಿ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ.
ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್ ನಾವು ಘೋಷಿಸಿದ 5 ಗ್ಯಾರಂಟಿಗಳನ್ನು ಜಾರಿಗೊಳಿಸುವುದು ಗ್ಯಾರಂಟಿ. ನಾವು ನಮ್ಮ ಜನರ ಹಿತ ಕಾಪಾಡುವ ಬದ್ಧತೆ ಹೊಂದಿದ್ದೇವೆ ಎಂದು ಹೇಳಿದೆ. ಇನ್ನೂ ರಾಜ್ಯ ಬಿಜೆಪಿ ನಾಯಕರು ಕನ್ನಡಿಗರು ನೀಡಿದ ತಪರಾಕಿಗೆ ಚಿಕಿತ್ಸೆ ಪಡೆದು ರೆಸ್ಟ್ ಮಾಡಲಿ, ಹಾಗೆಯೇ 'ವಿರೋಧಪಕ್ಷದ ನಾಯಕ' ಸ್ಥಾನಕ್ಕೆ ಸೂಕ್ತ ವ್ಯಕ್ತಿಯನ್ನು ಹುಡುಕಿಕೊಳ್ಳಲಿ ಎಂದು ಟಾಂಗ್ ನೀಡಿದೆ.
ಇದನ್ನೂ ಓದಿ: ಗ್ಯಾರಂಟಿಗಳಿಗೆ ಷರತ್ತು ಹಾಕಿದರೆ, ಜೂನ್ 1ರಿಂದ ಹೋರಾಟ ಮಾಡುತ್ತೇವೆ: ಪ್ರತಾಪ್ ಸಿಂಹ
ನಾವು ಘೋಷಿಸಿದ 5 ಗ್ಯಾರಂಟಿಗಳನ್ನು ಜಾರಿಗೊಳಿಸುವುದು ಗ್ಯಾರಂಟಿ.
— Karnataka Congress (@INCKarnataka) May 25, 2023
ನಾವು ನಮ್ಮ ಜನರ ಹಿತ ಕಾಪಾಡುವ ಬದ್ಧತೆ ಹೊಂದಿದ್ದೇವೆ.@BJPKarnataka ನಾಯಕರು ಕನ್ನಡಿಗರು ನೀಡಿದ ತಪರಾಕಿಗೆ ಚಿಕಿತ್ಸೆ ಪಡೆದು ರೆಸ್ಟ್ ಮಾಡಲಿ, ಹಾಗೆಯೇ 'ವಿರೋಧಪಕ್ಷದ ನಾಯಕ' ಸ್ಥಾನಕ್ಕೆ ಸೂಕ್ತ ವ್ಯಕ್ತಿಯನ್ನು ಹುಡುಕಿಕೊಳ್ಳಲಿ.
ಬಿಜೆಪಿಯಲ್ಲಿ ಚುನಾವಣೆಯಲ್ಲಿ ಹೀನಾಯ ಸೋಲಿನ ಹೊಣೆ ಹೊರುವವರು, ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರೂ ಇಲ್ಲವೇ ಎಂದು ಕುಹಕವಾಡಿದ್ದು, ಸೋಲಿನ ಹೊಣೆ ಯಾರದ್ದು, ಅಮಿತ್ ಷಾ ಅವರದ್ದೋ? ಬೊಮ್ಮಾಯಿಯವರದ್ದೋ? ಮೋದಿಯವರದ್ದೋ? ನಳಿನ್ ಕಟೀಲರದ್ದೋ? ಸೋಲಿನ ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರು? ಎಂದು ಎಂದು ರಾಜ್ಯ ಬಿಜೆಪಿಯನ್ನು ಪ್ರಶ್ನಿಸಿದೆ.
ಚುನಾವಣೆಯಲ್ಲಿ ಹೀನಾಯ ಸೋಲಿನ ಹೊಣೆ ಹೊರುವವರು, ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರೂ ಇಲ್ಲವೇ ಬಿಜೆಪಿಯಲ್ಲಿ!?
— Karnataka Congress (@INCKarnataka) May 25, 2023
ಸೋಲಿನ ಹೊಣೆ ಯಾರದ್ದು @BJPKarnataka ?
ಅಮಿತ್ ಷಾಅವರದ್ದೋ?
ಬೊಮ್ಮಾಯಿಯವರದ್ದೋ?
ಮೋದಿಯವರದ್ದೋ ?
ನಳಿನ್ ಕಟೀಲರದ್ದೋ?
ಸೋಲಿನ ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರು?!