ರಾಜ್ಯದಲ್ಲಿ ರಿವರ್ಸ್ ಗೇರ್ ಕಾಂಗ್ರೆಸ್ ಸರ್ಕಾರವಿದ್ದು ಸೇಡಿನ ರಾಜಕೀಯ ಮಾಡುತ್ತಿದೆ: ಮಾಜಿ ಸಿಎಂ ಬೊಮ್ಮಾಯಿ
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ರಿವರ್ಸ್ ಗೇರ್ ಕ್ರಮವನ್ನು ಅನುಸರಿಸುತ್ತಿದ್ದು ಸೇಡಿನ ರಾಜಕೀಯ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
Published: 25th May 2023 01:01 PM | Last Updated: 25th May 2023 06:10 PM | A+A A-

ಮಾಜಿ ಸಿಎಂ ಬೊಮ್ಮಾಯಿ
ಹುಬ್ಬಳ್ಳಿ: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ರಿವರ್ಸ್ ಗೇರ್ ಕ್ರಮವನ್ನು ಅನುಸರಿಸುತ್ತಿದ್ದು ಸೇಡಿನ ರಾಜಕೀಯ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಆರಂಭದಲ್ಲಿ ಗ್ಯಾರಂಟಿಗಳನ್ನು ಘೋಷಿಸಿ ಜನರನ್ನು ಮರುಳು ಮಾಡಿದ್ದ ಕಾಂಗ್ರೆಸ್ ಇಂದು ಅದನ್ನು ಜಾರಿಗೆ ತರಲು ಮೀನಾಮೇಷ ನೋಡುತ್ತಿದೆ. ಜನರಿಗೂ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ ಗೊತ್ತಾಗುತ್ತಿದೆ ಎಂದರು.
ಅಧಿಕಾರಕ್ಕೆ ಬಂದಾಗ ಹಿಂದಿನ ನಮ್ಮ ಬಿಜೆಪಿ ಸರ್ಕಾರದ ಎಲ್ಲಾ ನಿಯಮಗಳನ್ನು ಸ್ವೇಚ್ಛಾಚಾರವಾಗಿ ಬದಲಾವಣೆ ಮಾಡುತ್ತೇವೆ ಎನ್ನುವುದು ದುರಹಂಕಾರದ ಮಾತು, ಕಾಂಗ್ರೆಸ್ ತುಷ್ಠೀಕರಣ ರಾಜಕಾರಣ ಮಾಡುತ್ತಿದೆ. ಅವರ ಕೈಯಲ್ಲಿ ಅಧಿಕಾರವಿದೆ, ಏನೇನು ಮಾಡುತ್ತಾರೋ ನೋಡೋಣ ಎಂದರು.
The #Congress government in -Karnataka is not only a Reverse Gear government its also indulging in vindictive politics, said former CM @BSBommai in #Hubballi @NewIndianXpress @XpressBengaluru @KannadaPrabha @pramodvaidya06 pic.twitter.com/z8aKQNHnfC
— Amit Upadhye (@Amitsen_TNIE) May 25, 2023
ಸಾರ್ವತ್ರಿಕವಾಗಿ ಜನ ಸಮುದಾಯಕ್ಕೆ ತೊಂದರೆಯಾದರೆ ನಾವು ಕಾನೂನಾತ್ಮಕವಾಗಿ ಮತ್ತು ರಾಜಕೀಯವಾಗಿ ಹೋರಾಟ ಮಾಡುವುದು ನಿಶ್ಚಿತ ಎಂದರು.
ಹಿಜಾಬ್ ನಿಷೇಧವನ್ನು ಹಿಂತೆಗೆದುಕೊಳ್ಳುವ ಕಾಂಗ್ರೆಸ್ ಸರ್ಕಾರದ ನಿರ್ಧಾರದ ಬಗ್ಗೆ ಮಾತನಾಡಿದ ಅವರು, ಪ್ರಕರಣ ಸುಪ್ರೀಂ ಕೋರ್ಟ್ ಮುಂದೆ ವಿಚಾರಣೆಯಲ್ಲಿದೆ. ಹೀಗಿರುವಾಗ ವಿವೇಕಯುತ ಸರ್ಕಾರ ಅದನ್ನು ಹಿಂತೆಗೆದುಕೊಳ್ಳಲು ಸಾಧ್ಯವಾಗುತ್ತದೆ ಎಂದು ನಾನು ಭಾವಿಸುವುದಿಲ್ಲ ಎಂದರು.