ಸಿದ್ದರಾಮಯ್ಯ ಪರಿಪೂರ್ಣ ಸಂಪುಟ ರಚನೆ: 24 ನೂತನ ಸಚಿವರ ಪ್ರಮಾಣ ವಚನ

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟಕ್ಕೆ ಇಂದು ಶನಿವಾರ 24 ಮಂದಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. 
ಸಿಎಂ ಸಿದ್ದರಾಮಯ್ಯ ಸಂಪುಟಕ್ಕೆ ಸೇರ್ಪಡೆಗೊಂಡ ಪ್ರಮುಖರು
ಸಿಎಂ ಸಿದ್ದರಾಮಯ್ಯ ಸಂಪುಟಕ್ಕೆ ಸೇರ್ಪಡೆಗೊಂಡ ಪ್ರಮುಖರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟಕ್ಕೆ ಇಂದು ಶನಿವಾರ 24 ಮಂದಿ ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. 

ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ನೂತನ ಸಚಿವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞಾ ವಿಧಿ ಬೋಧಿಸಿದರು. ಶಾಸಕರಾದ ಎಚ್‌.ಕೆ.ಪಾಟೀಲ್‌, ಕೃಷ್ಣ ಬೈರೇಗೌಡ, ಚೆಲುವರಾಯಸ್ವಾಮಿ, ಎಚ್‌.ಸಿ.ಮಹದೇವಪ್ಪ ಮತ್ತು ಇತರರು ಪ್ರಮಾಣ ವಚನ ಸ್ವೀಕರಿಸಿದರು.

ಇಂದು ಪ್ರಮಾಣ ವಚನ ಸ್ವೀಕರಿಸಿದವರು: ಹೆಚ್.ಕೆ.ಪಾಟೀಲ್, ಕೃಷ್ಣ ಭೈರೇಗೌಡ, ಎನ್​. ಚಲುವರಾಯಸ್ವಾಮಿ, ಕೆ.ವೆಂಕಟೇಶ್​, ಡಾ.ಹೆಚ್.ಸಿ.ಮಹದೇವಪ್ಪ, ಈಶ್ವರ ಖಂಡ್ರೆ, ಕೆ.ಎನ್.ರಾಜಣ್ಣ, ದಿನೇಶ್ ಗುಂಡೂರಾವ್, ಶರಣಬಸಪ್ಪ ದರ್ಶನಾಪುರ್, ಶಿವಾನಂದ ಪಾಟೀಲ್, ಆರ್.ಬಿ.ತಿಮ್ಮಾಪುರ, ಎಸ್.ಎಸ್.ಮಲ್ಲಿಕಾರ್ಜುನ, ಶಿವರಾಜ ತಂಗಡಗಿ, ಡಾ.ಶರಣ ಪ್ರಕಾಶ್ ರುದ್ರಪ್ಪ ಪಾಟೀಲ್, ಮಂಕಾಳು ವೈದ್ಯ, ಸಂತೋಷ್ ಲಾಡ್, ಎನ್​ ಎಸ್​ ಬೋಸೆರಾಜು, ಬೈರತಿ ಸುರೇಶ್, ಮಧು ಬಂಗಾರಪ್ಪ, ಎಂ.ಸಿ.ಸುಧಾಕರ್, ಬಿ.ನಾಗೇಂದ್ರ, ಲಕ್ಷ್ಮೀ ಹೆಬ್ಬಾಳ್ಕರ್, ರಹೀಂ ಖಾನ್, ಡಾ. ಸುಧಾಕರ್​.

ಇಂಗ್ಲೀಷಿನಲ್ಲಿ ಪ್ರಮಾಣವಚನ: ರಹೀಂ ಖಾನ್​ ಅವರು ಇಂಗ್ಲಿಷ್​​ನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು. ಉಳಿದವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. 

ಏಕೈಕ ಸಚಿವೆ: ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಎರಡನೇ ಬಾರಿ ಶಾಸಕಿಯಾಗಿ ಆಯ್ಕೆಯಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಿದ್ದರಾಮಯ್ಯ ಸಂಪುಟದಲ್ಲಿ ಮೊದಲ ಬಾರಿ ಸಚಿವೆ ಭಾಗ್ಯ ಸಿಕ್ಕಿದೆ.ಅವರು ಜಗಜ್ಯೋತಿ ಬಸವೇಶ್ವರ, ಛತ್ರಪತಿ ಶಿವಾಜಿ ಮಹರಾಜ, ಡಾ. ಬಿ ಆರ್​ ಅಂಬೇಡ್ಕರ್​​ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್​ಚಂದ್​​ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಎರಡನೇ ಬಾರಿಗೆ ಗೌಪ್ಯತೆಯಲ್ಲಿ ಕ್ಷೇತ್ರದ ಮತದಾರ ಹಾಗೂ ತನ್ನ ತಾಯಿಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದರು.

ಈ ಮಧ್ಯೆ, ಕರ್ನಾಟಕ ಕಾಂಗ್ರೆಸ್ ಮುಖಂಡ ರುದ್ರಪ್ಪ ಲಮಾಣಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಕಚೇರಿ ಎದುರು ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಎ. ಕೃಷ್ಣಪ್ಪ ಮತ್ತು ಪ್ರಿಯಾಕೃಷ್ಣ ಅವರಿಗೆ ಸಚಿವ ಸ್ಥಾನ ನಿರಾಕರಿಸಿದ್ದಕ್ಕೆ ರಾಜಭವನ ಎದುರು ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದರು. 

ಮೇ 2 ರಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ, ಡಿಕೆ ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಗೆ ಮೇ 10 ರಂದು ನಡೆದ ಚುನಾವಣೆಯಲ್ಲಿ ದಕ್ಷಿಣ ರಾಜ್ಯದಲ್ಲಿ 66 ಸ್ಥಾನಗಳನ್ನು ಪಡೆದ ಆಡಳಿತಾರೂಢ ಬಿಜೆಪಿಯನ್ನು ಹೊರಹಾಕಿದ ಕಾಂಗ್ರೆಸ್ 135 ಸ್ಥಾನಗಳನ್ನು ಗಳಿಸಿ ಅಧಿಕಾರದ ಗದ್ದುಗೆ ಏರಿತು. 

ಸಿದ್ದರಾಮಯ್ಯ ಸಂಪುಟದ ಒಟ್ಟು 34 ಸಚಿವರು ಪಟ್ಟಿ, ಅವರ ಜಾತಿ ಹೀಗಿದೆ:

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com