ವೈಫಲ್ಯಗಳ ಮರೆಮಾಚಲು ಕಾಂಗ್ರೆಸ್ ಸರ್ಕಾರ ದ್ವೇಷ ರಾಜಕಾರಣದಲ್ಲಿ ತೊಡಗಿದೆ: ಮಾಜಿ ಸಿಎಂ ಬೊಮ್ಮಾಯಿ
ಚುನಾವಣೆ ವೇಳೆ ನೀಡಲಾಗಿದ್ದ 5 ಗ್ಯಾರಂಟಿಗಳ ಜಾರಿಗೊಳಿಸುವಲ್ಲಿ ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ವಾಗ್ದಾಳಿ ನಡೆಸಿದ್ದಾರೆ.
Published: 27th May 2023 08:41 AM | Last Updated: 27th May 2023 02:56 PM | A+A A-

ಮಾಜಿ ಸಿಎಂ ಬೊಮ್ಮಾಯಿ
ಬೆಂಗಳೂರು: ಚುನಾವಣೆ ವೇಳೆ ನೀಡಲಾಗಿದ್ದ 5 ಗ್ಯಾರಂಟಿಗಳ ಜಾರಿಗೊಳಿಸುವಲ್ಲಿ ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 5 ಗ್ಯಾರಂಟಿಗಳನ್ನು ಜಾರಿಗೊಳಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದ್ದು, ಜನರ ಗಮನವನ್ನು ಬೇರೆಡೆಗೆ ಸೆಳೆಯಲು ದ್ವೇಷ ರಾಜಕಾರಣದಲ್ಲಿ ತೊಡಗಿದೆ ಎಂದು ಆರೋಪಿಸಿದ್ದಾರೆ.
ಸಮ್ಮಿಶ್ರ ಸರ್ಕಾರದಂತೆ ಕಾಣುತ್ತಿರುವ ಸರ್ಕಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಬ್ಬರು ನಾಯಕರ ನಡುವೆ ಭಿನ್ನಾಭಿಪ್ರಾಯಗಳು ಎದ್ದು ಕಾಣುತ್ತಿವೆ. ಅಭಿವೃದ್ಧಿಯತ್ತ ಗಮನಹರಿಸಿ ಜನರ ಸಮಸ್ಯೆಗಳನ್ನು ಪರಿಹರಿಸುವ ಬದಲು ಸಚಿವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ: ರಾಜ್ಯದಲ್ಲಿ ರಿವರ್ಸ್ ಗೇರ್ ಕಾಂಗ್ರೆಸ್ ಸರ್ಕಾರವಿದ್ದು ಸೇಡಿನ ರಾಜಕೀಯ ಮಾಡುತ್ತಿದೆ: ಮಾಜಿ ಸಿಎಂ ಬೊಮ್ಮಾಯಿ
ಟೀಕಿಸುವವರ ವಿರುದ್ಧ ಸರಕಾರ ಪ್ರಕರಣ ದಾಖಲಿಸುತ್ತಿದೆ. ಕೆಲವೇ ದಿನಗಳಲ್ಲಿ ಜನಾದೇಶ ಪಡೆದಿರುವ ಕಾಂಗ್ರೆಸ್ ಜನರ ಆಕ್ರೋಶಕ್ಕೆ ಗುರಿಯಾಗಲಿದೆ. “ರಾಜ್ಯ ಸರ್ಕಾರಕ್ಕೆ ಯಾವುದೇ ಸಂಘಟನೆಯನ್ನು ನಿಷೇಧಿಸುವ ಹಕ್ಕು ಇಲ್ಲ ಎಂಬುದನ್ನು ಸಂಪೂರ್ಣವಾಗಿ ತಿಳಿದಿದ್ದರೂ ಸಚಿವರು ಆರ್‌ಎಸ್‌ಎಸ್ ಅನ್ನು ನಿಷೇಧಿಸುವ ಬಗ್ಗೆ ಮಾತನಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಚಿವರ ಮಾತಿನ ಕುರಿತು ಮೌನ ತಾಳಿದ್ದು, ಈ ಬಗ್ಗೆ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.
ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಘೋಷಿಸಿದ ಐದು ಭರವಸೆಗಳನ್ನು ತಕ್ಷಣವೇ ಜಾರಿಗೆ ತರಲು ಜನರು ಒತ್ತಾಯಿಸುತ್ತಿದ್ದಾರೆ. ಒಂದು ವೇಳೆ ಕಾಂಗ್ರೆಸ್ ಜನರಿಗೆ ನಂಬಿಕೆ ದ್ರೋಹ ಮಾಡಿದ್ದೇ ಆದರೆ, ಜನರ ಪರವಾಗಿ ಬಿಜೆಪಿ ನಿಲ್ಲಲಿದೆ ಎಂದರು. ಎಲ್ಲರಿಗೂ ಅನುಕೂಲ ಮಾಡಿಕೊಡುವುದಾಗಿ ಭರವಸೆ ನೀಡಿದ್ದ ಕಾಂಗ್ರೆಸ್ ಈಗ ಷರತ್ತುಗಳ ಬಗ್ಗೆ ಮಾತನಾಡುತ್ತಿದೆ ಎಂದು ಇದೇ ವೇಳೆ ಕಿಡಿಕಾರಿದರು.