ಸಿದ್ದರಾಮಯ್ಯ ಸರ್ಕಾರಕ್ಕೆ 5 ಗ್ಯಾರಂಟಿ 'ಭಾಗ್ಯ'ಗಳದ್ದೇ ಚಿಂತೆ: ವಿರೋಧ ಪಕ್ಷಗಳಿಂದ, ಸಾರ್ವಜನಿಕರಿಂದ ಹಿಗ್ಗಾಮುಗ್ಗಾ ಟೀಕೆ

ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚು ಸದ್ದು ಮಾಡಿದ್ದು ಕಾಂಗ್ರೆಸ್ ನ ಗ್ಯಾರಂಟಿ ಭಾಗ್ಯಗಳು. ಬಿಜೆಪಿ ಚುನಾವಣೆಯಲ್ಲಿ ಸೋತು ಕಾಂಗ್ರೆಸ್ ಕೈಯನ್ನು ಜನರು ಈ ಬಾರಿ ಹಿಡಿಯಲು ನೆರವಾಗಿದ್ದೇ ಈ 5 ಗ್ಯಾರಂಟಿ ಭಾಗ್ಯಗಳು ಎಂದು ಹೇಳಲಾಗುತ್ತಿದೆ.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚು ಸದ್ದು ಮಾಡಿದ್ದು ಕಾಂಗ್ರೆಸ್ ನ ಗ್ಯಾರಂಟಿ ಭಾಗ್ಯಗಳು. ಬಿಜೆಪಿ ಚುನಾವಣೆಯಲ್ಲಿ ಸೋತು ಕಾಂಗ್ರೆಸ್ ಕೈಯನ್ನು ಜನರು ಈ ಬಾರಿ ಹಿಡಿಯಲು ನೆರವಾಗಿದ್ದೇ ಈ 5 ಗ್ಯಾರಂಟಿ ಭಾಗ್ಯಗಳು ಎಂದು ಹೇಳಲಾಗುತ್ತಿದೆ. ಚುನಾವಣೆ ಪೂರ್ವ ಜನರಿಗೆ ಭರಪೂರ ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿದ್ದೇನೋ ಆಯಿತು. ಐದು ಭರವಸೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಈಗ ಕಾಂಗ್ರೆಸ್ ಸರ್ಕಾರವು ಹೆಚ್ಚಿನ ಒತ್ತಡವನ್ನು ಎದುರಿಸುತ್ತಿದೆ.

ಈಗಾಗಲೇ, ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಪರ ವಿರೋಧ ಅಭಿಪ್ರಾಯಗಳು, ಟೀಕೆಗಳು ವ್ಯಕ್ತವಾಗುತ್ತಿವೆ. ಕೆಲವು ವೆಬ್ ಪೋರ್ಟಲ್‌ಗಳು ಆಯ್ಕೆ ಮಾಡಿದ ಫಲಾನುಭವಿಗಳಿಗೆ ಸರ್ಕಾರವು ಅನ್ವಯಿಸುವ ಮಾನದಂಡಗಳ ಬಗ್ಗೆ ಹಲವು ತರಹದಲ್ಲಿ ವಿಮರ್ಶೆ ಮಾಡುತ್ತಿವೆ. ಹಲವು ನಾಗರಿಕರು ತಮ್ಮ ಬಿಪಿಎಲ್ ಮತ್ತು ಆಧಾರ್‌ ಕಾರ್ಡನ್ನು ಪಡೆಯಲು ಸರ್ಕಾರಿ ಕಚೇರಿಗಳಿಗೆ ಮುತ್ತಿಗೆ ಹಾಕಲು ಪ್ರಾರಂಭಿಸಿದ್ದಾರೆ.

ಫಲಾನುಭವಿಗಳಿಗೆ ಪಟ್ಟಿಯೊಂದಿಗೆ ವಿಧಾನಗಳನ್ನು ರೂಪಿಸುವುದು ಮತ್ತು ಮಾನದಂಡಗಳನ್ನು ನಿಗದಿಪಡಿಸುವುದು ಸರ್ಕಾರಕ್ಕೆ ಸವಾಲಾಗಿದೆ. ರಾಜಕೀಯ ತಜ್ಞರ ಪ್ರಕಾರ 2024 ರ ಲೋಕಸಭೆ ಚುನಾವಣೆಯಲ್ಲಿ ಈ ಗ್ಯಾರಂಟಿ ಯೋಜನೆಗಳನ್ನು ಸರಿಯಾಗಿ ಜಾರಿಗೆ ತರದಿದ್ದರೆ ಕಾಂಗ್ರೆಸ್ ಗೆ ಹಿನ್ನಡೆಯಾಗುವ ಸಾಧ್ಯತೆಯಿದೆ.

ಖಾತ್ರಿ ಯೋಜನೆಗಳು ಜನರಿಗೆ ತಲುಪುವಂತೆ ನಾವು ಪ್ರಾಮಾಣಿಕವಾಗಿ ಶ್ರಮಿಸಬೇಕು. ಹಿಂದಿನ ತಪ್ಪುಗಳು ಈ ಬಾರಿ ಮರುಕಳಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರ ಪ್ರಕಾರ, 200 ಯೂನಿಟ್ ಉಚಿತ ವಿದ್ಯುತ್, ಪ್ರತಿ ಕುಟುಂಬದ ಯಜಮಾನಿಗೆ 2,000 ರೂಪಾಯಿ, ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ, ನಿರುದ್ಯೋಗಿ ಪದವೀಧರರಿಗೆ 3,000 ರೂಪಾಯಿ ಮತ್ತು ಡಿಪ್ಲೋಮಾ ಪದವೀಧರರಿಗೆ 1,500 ರೂಪಾಯಿ, 10 ಕೆಜಿ ಉಚಿತ ಅಕ್ಕಿ ಸೇರಿದಂತೆ ಎಲ್ಲಾ ಖಾತರಿಗಳನ್ನು ಜಾರಿಗೆ ತರಲು ವಾರ್ಷಿಕ 50,000 ಕೋಟಿ ರೂಪಾಯಿ ಬೇಕು. 

ಬಿಜೆಪಿ ಈಗಾಗಲೇ ಒತ್ತಡ ಹೇರಲು ಆರಂಭಿಸಿದ್ದು, ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ ಅವರು ವಿದ್ಯುತ್ ಬಿಲ್ ಪಾವತಿಸದಂತೆ ಜನರಿಗೆ ಕರೆ ನೀಡಿದ್ದಾರೆ. ರಾಜ್ಯದ ಎಲ್ಲ ಜನರಿಗೆ ಸಿಎಂ ಭರವಸೆ ನೀಡಬೇಕು ಎಂದು ಜೆಡಿಎಸ್ ಮುಖಂಡ ಎಚ್ ಡಿ ಕುಮಾರಸ್ವಾಮಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಈ ಭರವಸೆಗಳ ಮೇಲೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವುದರಿಂದ ನಾನು ಈ ಭರವಸೆಗಳು ಈಡೇರುವವರೆಗೆ ಹೋರಾಡುತ್ತೇನೆ ಎಂದಿದ್ದಾರೆ.

ಕೆಲವೆಡೆ ಜನರು ವಿದ್ಯುತ್ ಬಿಲ್ ಪಾವತಿಗೆ ವಿರೋಧ ವ್ಯಕ್ತಪಡಿಸಿದ್ದು, ಇದರಿಂದ ಎಸ್ಕಾಂ ಸಿಬ್ಬಂದಿ ಜತೆ ವಾಗ್ವಾದ ನಡೆದಿದೆ. 200 ಯೂನಿಟ್‌ಗಿಂತ ಹೆಚ್ಚು ವಿದ್ಯುತ್ ಬಳಸದ ಕುಟುಂಬಗಳು ಗ್ಯಾರಂಟಿಗೆ ಅರ್ಹರಾಗಿದ್ದು, ಜೂನ್ ತಿಂಗಳ ಬಿಲ್ ಪಾವತಿಸುವ ಅಗತ್ಯವಿಲ್ಲ ಎಂದು ಸಚಿವ ಈಶ್ವರ ಖಂಡ್ರೆ ಸುದ್ದಿಗಾರರಿಗೆ ತಿಳಿಸಿದ್ದಾರೆ. ಇದೇ ವೇಳೆ ಮಾತನಾಡಿದ ಡಾ.ಜಿ.ಪರಮೇಶ್ವರ ಅವರು, ಯೋಜನೆಗಳ ನಿರ್ವಹಣೆಗೆ ಸರ್ಕಾರ ಸಮಿತಿ ರಚಿಸುವ ಸಾಧ್ಯತೆ ಇದೆ ಎಂದಿದ್ದಾರೆ. 

ಯೋಜನೆಗಳ ಜಾರಿಗೆ ವಿಧಾನಗಳನ್ನು ರೂಪಿಸುತ್ತಿರುವ ಅಧಿಕಾರಿಗಳು ಜೂನ್ 1 ರಂದು ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಸರ್ಕಾರಕ್ಕೆ ಪ್ರಸ್ತುತಪಡಿಸುವ ಸಾಧ್ಯತೆಯಿದೆ. ಶೇಕಡಾ 60ರಷ್ಟು ಖಾತರಿಗಳನ್ನು ಜಾರಿಗೊಳಿಸಲು ಸಾಧ್ಯವಾದರೆ ಉತ್ತಮವಾಗಿರುತ್ತದೆ. ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರ ಮೇಲೆ ನಾವು ಭರವಸೆ ಇಟ್ಟುಕೊಂಡಿರುವುದರಿಂದ ನಮಗೆ ಯಾವುದೇ ಆತುರವಿಲ್ಲ ಎಂದು ಬೆಂಗಳೂರಿನಲ್ಲಿ ಕ್ಯಾಬ್ ಓಡಿಸುವ ಕೆಆರ್ ನಗರದ ತಿಮ್ಮೇಗೌಡ ಹೇಳುತ್ತಾರೆ. ಅವರಂತಹ ಅನೇಕರು ಸರ್ಕಾರವು ಖಾತರಿಗಳನ್ನು ಜಾರಿಗೆ ತರಲು ಮತ್ತು ಅದು ನಿಗದಿಪಡಿಸುವ ಮಾನದಂಡಗಳನ್ನು ನೋಡಲು ಕುತೂಹಲದಿಂದ ಕಾಯುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com