5 ಗ್ಯಾರಂಟಿಗಳ ಜಾರಿ ಕಾಂಗ್ರೆಸ್ ಸರ್ಕಾರದ ಜವಾಬ್ದಾರಿ: ಹೆಚ್'ಡಿ.ಕುಮಾರಸ್ವಾಮಿ

ಕಾಂಗ್ರೆಸ್ ಗೆ 135 ಸೀಟು ಕೊಟ್ಟ ಜನತೆಯ 'ಗ್ಯಾರಂಟಿ ಬೇಡಿಕೆ'ಯಲ್ಲಿ ನ್ಯಾಯವಿದೆ. 5 ಗ್ಯಾರಂಟಿ ಜಾರಿ ಕಾಂಗ್ರೆಸ್ ಸರ್ಕಾರದ ಜವಾಬ್ದಾರಿ ಎಂದು ಜೆಡಿಎಸ್ ನಾಯಕ ಹೆಚ್'ಡಿ.ಕುಮಾರಸ್ವಾಮಿಯವರು ಮಂಗಳವಾರ ಹೇಳಿದ್ದಾರೆ.
ಹೆಚ್.ಡಿ.ಕುಮಾರಸ್ವಾಮಿ
ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಕಾಂಗ್ರೆಸ್ ಗೆ 135 ಸೀಟು ಕೊಟ್ಟ ಜನತೆಯ 'ಗ್ಯಾರಂಟಿ ಬೇಡಿಕೆ'ಯಲ್ಲಿ ನ್ಯಾಯವಿದೆ. 5 ಗ್ಯಾರಂಟಿ ಜಾರಿ ಕಾಂಗ್ರೆಸ್ ಸರ್ಕಾರದ ಜವಾಬ್ದಾರಿ ಎಂದು ಜೆಡಿಎಸ್ ನಾಯಕ ಹೆಚ್'ಡಿ.ಕುಮಾರಸ್ವಾಮಿಯವರು ಮಂಗಳವಾರ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ಗೆ 135 ಸೀಟು ಕೊಟ್ಟ ಜನತೆಯ 'ಗ್ಯಾರಂಟಿ ಬೇಡಿಕೆ'ಯಲ್ಲಿ ನ್ಯಾಯವಿದೆ. 5 ಗ್ಯಾರಂಟಿ ಜಾರಿ ಕಾಂಗ್ರೆಸ್ ಸರ್ಕಾರದ ಜವಾಬ್ದಾರಿ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗುವುದಕ್ಕೆ ಮುನ್ನ ಸಿದ್ದರಾಮಯ್ಯ, ಡಿಕೆ.ಶಿವಕುಮಾರ್ ಅವರೇ ಸಹಿ ಮಾಡಿಕೊಟ್ಟ ಕಾರ್ಡುಗಳು ಜನರ ಬಳಿ ಇವೆ. ಆ ಗ್ಯಾರಂಟಿಗಳಿಗೆ ಗ್ಯಾರಂಟಿಯೇ ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಮಾಧ್ಯಮಗಳಲ್ಲಿ ಕಾಂಗ್ರೆಸ್ ಕೊಟ್ಟ 'ಗ್ಯಾರಂಟಿ ಜಾಹೀರಾತು'ಗಳೂ ಇನ್ನೂ ಜನಮಾನಸದಿಂದ ಮಾಸಿಲ್ಲ. ಅದೇ ರೀತಿ; ಸ್ವತಃ ಮುಖ್ಯಮಂತ್ರಿಗಳೇ ಜೂನ್ 1ಕ್ಕೆ ಜಾರಿ ಮಾಡುವ ಬಗ್ಗೆ ಜಾಹೀರಾತು ನೀಡಿ ಜನರಿಗೆ ಖಾತರಿ ಕೊಡಲಿ. ವಿಳಂಬದಿಂದ ಸರಕಾರದ ವಿಶ್ವಾಸಾರ್ಹತೆಗೆ ಪೆಟ್ಟು ಬೀಳುವುದೇ ಹೆಚ್ಚು. ಜನರಿಗೆ ಅಭದ್ರತೆಯ ಗ್ಯಾರಂಟಿ ಬೇಡವೇ ಬೇಡ.

ಅದು ಬಿಟ್ಟು 'ಕೆಲ ಸಚಿವರು, ಶಾಸಕ'ರನ್ನು ನನ್ನ ಮೇಲೆ ಛೂ ಬಿಟ್ಟರೆ ಪ್ರಯೋಜನವಿಲ್ಲ. ಅಂತಹ ರಾಜಕಾರಣ ಉಪಯೋಗವೂ ಇಲ್ಲ. ಗ್ಯಾರಂಟಿಗಳ ಬಗ್ಗೆ ಜನಕ್ಕೆ ಬೆಟ್ಟದಷ್ಟು ನಿರೀಕ್ಷೆ ಇದೆ. ಜಾರಿ ಮಾಡಿ, ಅದರ ಹೊರತಾಗಿ ಈ  ಭರವಸೆಗಳೇ ಅಗಮ್ಯಗೋಚರವಾಗಿ ಗಮ್ಯವೇ ಇಲ್ಲದ ಆಡಳಿತ ಕೊಡುವುದು ಬೇಡ. ಇಷ್ಟೇ ನನ್ನ ಕಾಳಜಿ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com