ಆಪರೇಷನ್ ಹಸ್ತ ಮಾಡಿಲ್ಲ; ಬಿಜೆಪಿ- ಜೆಡಿಎಸ್‌ನ ಹಲವು ಶಾಸಕರು ಶೀಘ್ರದಲ್ಲೇ ಕಾಂಗ್ರೆಸ್‌ ಸೇರಲಿದ್ದಾರೆ: ಸಿದ್ದರಾಮಯ್ಯ

ತಮ್ಮ ಪಕ್ಷವು 'ಆಪರೇಷನ್ ಹಸ್ತ'ದಲ್ಲಿ ತೊಡಗಿಲ್ಲ ಎಂದು ಪ್ರತಿಪಾದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ನ ಹಲವು ಶಾಸಕರು, ಮುಖಂಡರು ಮತ್ತು ಕಾರ್ಯಕರ್ತರು ಸ್ವಯಂಪ್ರೇರಿತರಾಗಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ ಎಂದು ಸೋಮವಾರ ಹೇಳಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ತಮ್ಮ ಪಕ್ಷವು 'ಆಪರೇಷನ್ ಹಸ್ತ'ದಲ್ಲಿ ತೊಡಗಿಲ್ಲ ಎಂದು ಪ್ರತಿಪಾದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ನ ಹಲವು ಶಾಸಕರು, ಮುಖಂಡರು ಮತ್ತು ಕಾರ್ಯಕರ್ತರು ಸ್ವಯಂಪ್ರೇರಿತರಾಗಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ ಎಂದು ಸೋಮವಾರ ಹೇಳಿದ್ದಾರೆ.

ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಎರಡೂವರೆ ವರ್ಷ ಪೂರೈಸಿದ ನಂತರ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡಬೇಕೇ ಅಥವಾ ಬೇಡವೇ ಎಂಬುದನ್ನು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಅವರು ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್‌ನಿಂದ ಹಾಲಿ ಶಾಸಕರು, ಮಾಜಿ ಶಾಸಕರು, ಮುಖಂಡರು ಮತ್ತು ಕಾರ್ಯಕರ್ತರು ಸೇರಿದಂತೆ ಅನೇಕ ಜನರು ಆಡಳಿತ ಪಕ್ಷದ ಯಾವುದೇ ರೀತಿಯ ಒತ್ತಾಯವಿಲ್ಲದೆ ಕಾಂಗ್ರೆಸ್‌ಗೆ ಬರುತ್ತಿದ್ದಾರೆ ಎಂದರು.

‘ಆಪರೇಷನ್ ಹಸ್ತ’ ಮಾಡುವ ಪ್ರಶ್ನೆಯೇ ಇಲ್ಲ. ಯಾರೇ ಪಕ್ಷಕ್ಕೆ ಬಂದರೂ, ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ. ‘ಹಸ್ತ’ ಇಲ್ಲ, ಆಪರೇಷನ್ ಇಲ್ಲ. ನಮ್ಮ ಪಕ್ಷದ ಸಿದ್ಧಾಂತ ಮತ್ತು ನಾಯಕತ್ವವನ್ನು ಒಪ್ಪಿಕೊಂಡು ಬಿಜೆಪಿ ಅಥವಾ ಜೆಡಿಎಸ್‌ನ ಯಾರೇ ಪಕ್ಷಕ್ಕೆ ಬಂದರೂ ಅವರಿಗೆ ಬೇಡ ಎಂದು ಹೇಳಲು ಸಾಧ್ಯವೇ? ಎಂದು ಸಿದ್ದರಾಮಯ್ಯ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಇತ್ತೀಚೆಗೆ ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಉಪಾಹಾರ ಕೂಟದ ಕುರಿತು ಮಾತನಾಡಿದ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರಿಗೆ ಆಯಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಮನವಿ ಮಾಡಲಾಗಿದೆ ಎಂದರು.

ಲೋಕಸಭೆ ಚುನಾವಣೆಗೂ ಮುನ್ನ ಅಥವಾ ನಂತರ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗಲಿದೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ‘ನಮ್ಮ ಪಕ್ಷದ ಆಂತರಿಕ ವಿಚಾರದಲ್ಲಿ ಅವರೇಕೆ ಹೇಳಿಕೆ ನೀಡುತ್ತಿದ್ದಾರೆ. ಈ ಬಗ್ಗೆ ನಿರ್ಧರಿಸಲು ಹೈಕಮಾಂಡ್ ಇದೆ. ಇದೆಲ್ಲವನ್ನು ಹೇಳಲು ಅವರು ಯಾರು? ಎಂದು ಖಾರವಾಗಿ ಪ್ರತಿಕ್ರಿಯಿಸಿದರು.

ಮುಂದಿನ ಐದು ವರ್ಷವೂ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ ಎಂದು ಕಳೆದ ವಾರ ಸಿದ್ದರಾಮಯ್ಯ ಅವರೇ ಹೇಳಿಕೆ ನೀಡಿರುವುದು ಕಾಂಗ್ರೆಸ್ ವಲಯದಲ್ಲಿ ಕೆಲವರಿಗೆ ಇಷ್ಟವಾಗಿಲ್ಲ. ಪಕ್ಷದ ಹಲವು ಶಾಸಕರು ಮತ್ತು ಸಚಿವರು ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಆದರೆ, ನಂತರ ತನ್ನ ಹೇಳಿಕೆಯನ್ನು ತಪ್ಪಾಗಿ ಬಿಂಬಿಸಿದ್ದಕ್ಕೆ ಮಾಧ್ಯಮಗಳನ್ನು ದೂಷಿಸಿದ ಸಿದ್ದರಾಮಯ್ಯ, ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ಬದ್ಧ ಎಂದು ಸ್ಪಷ್ಟಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com