ದಿಢೀರ್ ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾದ ಸಂಸದ ತೇಜಸ್ವಿ ಸೂರ್ಯ

ಬಿಜೆಪಿ ಸಂಸದ ಹಾಗೂ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರು ಬುಧವಾರ ದಿಢೀರ್ ಆಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ.
ಡಿಕೆ ಶಿವಕುಮಾರ್ ಭೇಟಿಯಾದ ಸಂಸದ ತೇಜಸ್ವಿ ಸೂರ್ಯ
ಡಿಕೆ ಶಿವಕುಮಾರ್ ಭೇಟಿಯಾದ ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು: ಬಿಜೆಪಿ ಸಂಸದ ಹಾಗೂ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರು ಬುಧವಾರ ದಿಢೀರ್ ಆಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ.

ತೇಜಸ್ವಿ ಸೂರ್ಯ ಅವರು ಇಂದು ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಡಿಕೆ ಶಿವಕುಮಾರ್​ ಅವರನ್ನು ಭೇಟಿ ಮಾಡಿದ್ದಾರೆ.

ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ತೇಜಸ್ವಿ ಸೂರ್ಯ ಅವರು, ಬೆಂಗಳೂರಿನ ಮೂಲಭೂತ ಸೌಕರ್ಯ, ಹಲವು ಅಭಿವೃದ್ಧಿ ಕಾರ್ಯಗಳ ಕುರಿತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಇಂದು ಭೇಟಿಯಾಗಿ ಚರ್ಚಿಸಿದೆ ಎಂದು ತಿಳಿಸಿದ್ದಾರೆ.

ಕಳೆದ 5-6  ತಿಂಗಳುಗಳಿಂದ ಕೆ-ರೈಡ್ & ಬಿ.ಎಂ.ಆರ್.ಸಿ.ಎಲ್ ನ ಎಂ.ಡಿ ಹುದ್ದೆಗಳು ಖಾಲಿಯಿದ್ದು, ಈ ಕುರಿತು ನಾನು ಹಲವಾರು ಬಾರಿ ಸರ್ಕಾರಕ್ಕೆ ಒತ್ತಾಯಿಸಿದ್ದೇನೆ. ಬೆಂಗಳೂರು ಸಂಚಾರ ದಟ್ಟಣೆ ನಿಯಂತ್ರಣದ ಬಹುಮುಖ್ಯ ಕಾಮಗಾರಿಗಳಿಗೆ ಪೂರ್ಣಾವಧಿ ಎಂ.ಡಿ ನೇಮಕದ ಅಗತ್ಯತೆ ಬಗೆಗೆ ಶ್ರೀ ಡಿ ಕೆ ಶಿವಕುಮಾರ್ ಬಳಿ ವಿವರಿಸಿದ್ದು, ಶೀಘ್ರಗತಿಯಲ್ಲಿ ಎರಡೂ ಪ್ರಾಧಿಕಾರಗಳಿಗೆ ಪೂರ್ಣಾವಧಿ ಎಂ ಡಿ ನೇಮಕಕ್ಕೆ ಕ್ರಮ ಕೈಗೊಳ್ಳುವುದಾಗಿ ಸಕಾರಾತ್ಮಕವಾಗಿ ಸ್ಪಂದಿಸಿರುತ್ತಾರೆ.

ಬನಶಂಕರಿ ಮೆಟ್ರೋ ಸ್ಟೇಷನ್ ಮತ್ತು ಬನಶಂಕರಿ ಬಿ.ಎಂ.ಟಿ.ಸಿ ಬಸ್ ನಿಲ್ದಾಣಗಳ ಮಧ್ಯೆ  ಸ್ಕೈವಾಕ್ ನಿರ್ಮಾಣಕ್ಕೆ 2019 ರಿಂದಲೂ ನಾನು ಒತ್ತಾಯಿಸುತ್ತ ಬಂದಿದ್ದು, ಸ್ಕೈ ವಾಕ್ ನಿರ್ಮಾಣದಿಂದ ಬಹು ಆಯಾಮದ ಸಂಚಾರಕ್ಕೆ ಇದರಿಂದ ಅನುಕೂಲವಾಗಲಿದೆ. ಈ ಯೋಜನೆಯು ನೀಲನಕ್ಷೆ 2019 ರಲ್ಲಿಯೇ ತಯಾರಾಗಿದ್ದು, ಶೀಘ್ರಗತಿಯಲ್ಲಿ ಅನುಷ್ಠಾನಗೊಳಿಸುವಂತೆಯೂ ಕೂಡ ಒತ್ತಾಯಿಸಿದ್ದು, ಶೀಘ್ರ ಕ್ರಮ ಕೈಗೊಳ್ಳುವ ಭರವಸೆ ನೀಡಿರುತ್ತಾರೆ ಎಂದು ಬಿಜೆಪಿ ಸಂಸದ ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com