ಪಕ್ಷದ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ನೇಮಕ; ನಮಗೆ ಸಾಮೂಹಿಕ ನಾಯಕತ್ವ ಬೇಕು ಎಂದ ಕೆಎಸ್ ಈಶ್ವರಪ್ಪ

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಅವರು ವಿಜಯೇಂದ್ರ ಅವರನ್ನು ಅಭಿನಂದಿಸಿದ್ದಾರೆ.  ಶನಿವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಈಶ್ವರಪ್ಪ, ನಮ್ಮ ಪಕ್ಷವು ಸಾಮೂಹಿಕ ನಾಯಕತ್ವವನ್ನು ಬಯಸುತ್ತದೆ ಎಂದರು.
ಕೆಎಸ್ ಈಶ್ವರಪ್ಪ
ಕೆಎಸ್ ಈಶ್ವರಪ್ಪ
Updated on

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಅವರು ವಿಜಯೇಂದ್ರ ಅವರನ್ನು ಅಭಿನಂದಿಸಿದ್ದಾರೆ.

ಶನಿವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಈಶ್ವರಪ್ಪ, ನಮ್ಮ ಪಕ್ಷವು ಸಾಮೂಹಿಕ ನಾಯಕತ್ವವನ್ನು ಬಯಸುತ್ತದೆ ಮತ್ತು ಒಬ್ಬ ವ್ಯಕ್ತಿಯನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುವುದಿಲ್ಲ ಎಂದು ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.

2024ರ ಲೋಕಸಭೆ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿದ ಅವರು, 'ಲೋಕಸಭೆ ಚುನಾವಣೆ ಸಮೀಪಿಸುತ್ತಿದೆ. ಇಡೀ ದೇಶವೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಂಭ್ರಮಿಸುತ್ತಿದೆ. ಕಳೆದ ಚುನಾವಣೆಯ ಸಂದರ್ಭದಲ್ಲಿಯೂ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವಿತ್ತು. ಆಗಲೂ ನಮ್ಮ ರಾಜ್ಯದಲ್ಲಿ ಬಿಜೆಪಿ 26 ಲೋಕಸಭಾ ಸ್ಥಾನಗಳನ್ನು ಗೆದ್ದಿದ್ದರೆ, ಕಾಂಗ್ರೆಸ್ ಕೇವಲ ಒಂದು ಸ್ಥಾನ ಗೆದ್ದಿತ್ತು. ಅದರಂತೆ ಈ ಬಾರಿಯೂ ಲೋಕಸಭೆ ಚುನಾವಣೆಯಲ್ಲಿ ಕಳೆದ ಬಾರಿಗಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದ್ದೇವೆ' ಎಂದು ಹೇಳಿದರು.

'ವಿಜಯೇಂದ್ರ ಅವರು ಸಂಪೂರ್ಣ ನಾಯಕತ್ವ ವಹಿಸಿಕೊಂಡಿದ್ದಾರೆ ಎಂದು ಭಾವಿಸುವುದು ಸರಿಯಲ್ಲ. ನಮ್ಮ ಪಕ್ಷವು ಎಲ್ಲರಿಗೂ ಮನ್ನಣೆ ನೀಡುತ್ತಿದ್ದು, ಎಲ್ಲರ ಸಹಕಾರದಿಂದ ಪಕ್ಷ ಮುನ್ನಡೆಯಲಿದೆ' ಎಂದು ಹೇಳಿದರು.

ಪಕ್ಷದ ಎಲ್ಲಾ ನಾಯಕರ ವಿಶ್ವಾಸಕ್ಕೆ ತೆಗೆದುಕೊಂಡು, ಅದರಂತೆ ಮುನ್ನಡೆಯುವುದಾಗಿ ವಿಜಯೇಂದ್ರ ಕೂಡ ತಮ್ಮ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

'ಪಕ್ಷದ ಸ್ಥಾನಮಾನವನ್ನು ಲೆಕ್ಕಿಸದೆ, ಇಲ್ಲಿ ಎಲ್ಲರೂ ಕಾರ್ಯಕರ್ತರು. ಪ್ರಧಾನಿ ನರೇಂದ್ರ ಮೋದಿ ಕೂಡ ಕಾರ್ಯಕರ್ತರು. ಜೊತೆಗೆ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನೂರಾರು ಕಾಂಗ್ರೆಸ್‌ಗಳಿವೆ ಮತ್ತು ದೇಶದಲ್ಲಿ ಬಿಜೆಪಿ ಏಕೈಕ ಪಕ್ಷವಾಗಿದೆ. ನಮ್ಮ ರಾಷ್ಟ್ರೀಯ ನಾಯಕರು ನಮಗೆ ನೀಡಿದ ರಾಷ್ಟ್ರೀಯತೆಯ ಪಾಠವೇ ಇದಕ್ಕೆ ಕಾರಣ. ಇದುವೇ ನಮ್ಮ ಪಕ್ಷದ ಒಗ್ಗಟ್ಟಿಗೂ ಕಾರಣವಾಗಿದೆ' ಎಂದು ವಿಜಯೇಂದ್ರ ಹೇಳಿದರು.

'ಕರ್ನಾಟಕದಲ್ಲಿಯೂ ಕಾಂಗ್ರೆಸ್ ಪಕ್ಷದಲ್ಲಿ ನೂರಾರು ಬಿರುಕುಗಳಿದ್ದು, ಮುಂದಿನ ದಿನಗಳಲ್ಲಿ ಯಾವ ಪ್ರಮಾಣದಲ್ಲಿ ಬಿರುಕು ಮೂಡಿದೆ ಎಂಬುದು ಜನರ ಮುಂದೆ ಬರಲಿದೆ. 5 ವರ್ಷ ನಾನೇ ಮುಖ್ಯಮಂತ್ರಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ದೇವರ ದಯೆಯಿದ್ದರೆ, ನಾನು ಮುಖ್ಯಮಂತ್ರಿಯಾಗುತ್ತೇನೆ ಎಂದು ಪರಮೇಶ್ವರ್ ಹೇಳಿದ್ದಾರೆ. ಈ ರೇಸ್‌ನಲ್ಲಿ ಪ್ರಿಯಾಂಕ ಖರ್ಗೆ, ಸತೀಶ್ ಜಾರಕಿಹೊಳಿ ಮತ್ತು ಡಿಕೆ ಶಿವಕುಮಾರ್ ಕೂಡ ಸೇರಿಸಿದ್ದಾರೆ. ಇದನ್ನು ನೋಡಿದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಒಡೆದ ಮನೆಯಂತಾಗಿದ್ದು, ಬಿಜೆಪಿ ಒಗ್ಗಟ್ಟಿನಿಂದ ಕೂಡಿದೆ ಎಂಬುದು ಗೊತ್ತಾಗುತ್ತದೆ. ಲೋಕಸಭೆ ಚುನಾವಣೆಯಲ್ಲಿ ಪಕ್ಷ ಎಲ್ಲಾ ಸ್ಥಾನಗಳನ್ನು ಗೆಲ್ಲುತ್ತದೆ ಮತ್ತು ಯುವಕರ ಬಲದೊಂದಿಗೆ ನಾವು ಮುನ್ನಡೆಯುತ್ತೇವೆ ಎಂದು ವಿಜಯೇಂದ್ರ ಹೇಳಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com