ಪರಿಸ್ಥಿತಿ ಬಂದರೆ ದತ್ತಮಾಲೆ ಧರಿಸುತ್ತೇನೆ; ಜೆಡಿಎಸ್ ಮುಖಂಡ ಎಚ್‌ಡಿ ಕುಮಾರಸ್ವಾಮಿ

'ದತ್ತಮಾಲೆ ಧರಿಸುವುದು ದೇವರ ಕೆಲಸ. ಇದು ಅಕ್ರಮವಲ್ಲ. ನಾನು ಯಾವುದೇ ಕಾನೂನು ಬಾಹಿರ ಕೆಲಸದಲ್ಲಿ ತೊಡಗುವುದಿಲ್ಲ. ಸಂಸ್ಕೃತಿ ಉಳಿಸಲು ಕಾನೂನಾತ್ಮಕವಾಗಿ ಏನು ಬೇಕಾದರೂ ಮಾಡುತ್ತೇನೆ' ಎಂದು ಜೆಡಿಎಸ್ ಮುಖಂಡ ಎಚ್‌ಡಿ ಕುಮಾರಸ್ವಾಮಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.
ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ

ಚಿಕ್ಕಮಗಳೂರು: ಪರಿಸ್ಥಿತಿ ಬಂದರೆ ದತ್ತಮಾಲೆ ಧರಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಮುಖಂಡ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

'ದತ್ತಮಾಲೆ ಧರಿಸುವುದು ದೇವರ ಕೆಲಸ. ಇದು ಅಕ್ರಮವಲ್ಲ. ನಾನು ಯಾವುದೇ ಕಾನೂನು ಬಾಹಿರ ಕೆಲಸದಲ್ಲಿ ತೊಡಗುವುದಿಲ್ಲ. ಸಂಸ್ಕೃತಿ ಉಳಿಸಲು ಕಾನೂನಾತ್ಮಕವಾಗಿ ಏನು ಬೇಕಾದರೂ ಮಾಡುತ್ತೇನೆ' ಎಂದು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ಯತೀಂದ್ರ ಸಿದ್ದರಾಮಯ್ಯ ಅವರ ಮೇಲೆ ತಮ್ಮ ವಾಗ್ದಾಳಿ ಮುಂದುವರಿಸಿದ ಅವರು, ಆಶ್ರಯ ಸಮಿತಿ ಅಧ್ಯಕ್ಷರಿಗೆ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪರಿಶೀಲನಾ ಸಭೆಗೆ ಹಾಜರಾಗಲು ಅವಕಾಶ ನೀಡಲಾಗಿದೆಯೇ ಎಂದು ಪ್ರಶ್ನಿಸಿದರು.

'ನನ್ನನ್ನು ವಿದ್ಯುತ್ ಕಳ್ಳ ಎಂದು ಕರೆಯಲಾಯಿತು. ಆದರೆ, ನೀವು ಲೂಟಿಯಲ್ಲಿ ತೊಡಗಿದ್ದೀರಿ. ದಂಡವನ್ನೂ ಪಾವತಿಸಿದ್ದೇನೆ’ ಎಂದು ಕುಮಾರಸ್ವಾಮಿ ಹೇಳಿದರು.

ಕುಮಾರಸ್ವಾಮಿ ಅವರ ಆರೋಪಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಕುಮಾರಸ್ವಾಮಿ ಅವರು ತಮ್ಮ ಅಧಿಕಾರಾವಧಿಯಲ್ಲಿ ನಡೆದ "ಪೋಸ್ಟಿಂಗ್‌ಗಾಗಿ ನಗದು' ಬಗ್ಗೆ ಮಾತನಾಡುತ್ತಿದ್ದಾರೆಯೇ ಹೊರತು ಹಾಲಿ ಸರ್ಕಾರದ ಬಗ್ಗೆ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, 'ಅಧಿಕಾರಿಗಳನ್ನು ವರ್ಗಾವಣೆ ಮಾಡಲು ತಮ್ಮ ಅಧಿಕಾರಾವಧಿಯಲ್ಲಿ ಹಣ ತೆಗೆದುಕೊಂಡಿದ್ದಾರೆ. ನಮ್ಮ ಅಧಿಕಾರಾವಧಿಯಲ್ಲಿ ನಾವು ಯಾವುದೇ ಹಣ ತೆಗೆದುಕೊಂಡಿಲ್ಲ. ಅವರು ಯಾವಾಗಲೂ ಸುಳ್ಳು ಹೇಳುತ್ತಿದ್ದಾರೆ' ಎಂದು ದೂರಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com