ಮುಂದಿನ ವಾರ ನಿಗಮ ಮಂಡಳಿ ನೇಮಕಾತಿ ಅಂತಿಮ, ಪಟ್ಟಿ ಹೈಕಮಾಂಡ್ ಗೆ ರವಾನೆ: ಡಿಕೆಶಿ

ಮುಂದಿನ ವಾರ ಮತ್ತೊಂದು ಸುತ್ತಿನ ಚರ್ಚೆಯ ನಂತರ ಆಡಳಿತಾರೂಢ ಕಾಂಗ್ರೆಸ್ ವಿವಿಧ ನಿಗಮ ಮಂಡಳಿಗಳಿಗೆ ನೇಮಕಾತಿಯನ್ನು ಅಂತಿಮಗೊಳಿಸಲಿದೆ ಮತ್ತು ನಂತರ ಪಟ್ಟಿಯನ್ನು ಪಕ್ಷದ ವರಿಷ್ಠರಿಗೆ ಕಳುಹಿಸಲಾಗುವುದು ಎಂದು ಉಪ...
ಡಿಸಿಎಂ ಡಿ ಕೆ ಶಿವಕುಮಾರ್
ಡಿಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಮುಂದಿನ ವಾರ ಮತ್ತೊಂದು ಸುತ್ತಿನ ಚರ್ಚೆಯ ನಂತರ ಆಡಳಿತಾರೂಢ ಕಾಂಗ್ರೆಸ್ ವಿವಿಧ ನಿಗಮ ಮಂಡಳಿಗಳಿಗೆ ನೇಮಕಾತಿಯನ್ನು ಅಂತಿಮಗೊಳಿಸಲಿದೆ ಮತ್ತು ನಂತರ ಪಟ್ಟಿಯನ್ನು ಪಕ್ಷದ ವರಿಷ್ಠರಿಗೆ ಕಳುಹಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ. 

ನಿಗಮ ಮಂಡಳಿ ನೇಮಕಾತಿ ಸಂಬಂಧ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮಂಗಳವಾರದಿಂದ ನಗರದಲ್ಲಿ ರಾಜ್ಯ ನಾಯರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ.

"ಇಂದು ಕೂಡ ಅವರು(ಸುರ್ಜೇವಾಲಾ) ಚರ್ಚೆ ನಡೆಸಿದ್ದಾರೆ. ನಮ್ಮಲ್ಲಿ ಕೆಲವು ನಾಯಕರು ಸಹ ಅವರೊಂದಿಗೆ ಮಾತನಾಡುತ್ತಿದ್ದಾರೆ. ನಾವು ಕೆಲವು ಹಿರಿಯ ನಾಯಕರು ಮತ್ತು ಶಾಸಕರ ಅಭಿಪ್ರಾಯವನ್ನು ಕೇಳಿದ್ದೇವೆ. ಅವರು ನವೆಂಬರ್ 28 ರಂದು ಮತ್ತೆ ಬರುತ್ತಿದ್ದಾರೆ. ಈ ಮಧ್ಯೆ, ಮುಖ್ಯಮಂತ್ರಿ (ಸಿದ್ದರಾಮಯ್ಯ) ಮತ್ತು ನಾನು ಚುನಾವಣಾ ಪ್ರಚಾರಕ್ಕಾಗಿ ತೆಲಂಗಾಣಕ್ಕೆ ಹೋಗುತ್ತಿದ್ದೇವೆ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಶಿವಕುಮಾರ್ ಅವರು ಹೇಳಿದ್ದಾರೆ.

ಚುನಾವಣಾ ಪ್ರಚಾರ ಮುಗಿಸಿ ಸುರ್ಜೇವಾಲಾ ಅವರು ನ.28ರಂದು ನಗರಕ್ಕೆ ವಾಪಸಾಗಲಿದ್ದು, ಬಳಿಕ ಪಟ್ಟಿಯನ್ನು ಅಂತಿಮಗೊಳಿಸಿ ದೆಹಲಿಗೆ ಕಳುಹಿಸಲಾಗುವುದು ಎಂದು ಡಿಸಿಎಂ ತಿಳಿಸಿದ್ದಾರೆ.

ಮುಂದಿನ ಲೋಕಸಭಾ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ಈಗಲೇ ನಿಗಮ ಮಂಡಳಿಗಳಿಗೆ ನೇಮಕಾತಿಯನ್ನು ಪೂರ್ಣಗೊಳಿಸಲು ಕಾಂಗ್ರೆಸ್ ನಾಯಕರು ಮುಂದಾಗಿದ್ದು, ಯಾವುದೇ ಅಸಮಾಧಾನ, ಅತೃಪ್ತಿಗೆ ಆಸ್ಪದ ನೀಡದಂತೆ ಎಚ್ಚರಿಕೆಯಿಂದ ಪಟ್ಟಿಯನ್ನು ಸಿದ್ದಗೊಳಿಸಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com