ನಿಗಮ ಮಂಡಳಿಗಳ ಪ್ರಮುಖ ನೇಮಕಾತಿ ಬಗ್ಗೆ ನನ್ನೊಂದಿಗೆ ಸಮಾಲೋಚನೆ ನಡೆದಿಲ್ಲ: ಗೃಹ ಸಚಿವ ಪರಮೇಶ್ವರ್

ಕಾಂಗ್ರೆಸ್ ನ ಶಾಸಕರು ಹಾಗೂ ಕಾರ್ಯಕರ್ತರನ್ನು ಪ್ರಮುಖ ನಿಗಮ, ಮಂಡಳಿಗಳಿಗೆ ನೇಮಕ ಮಾಡುವ ಸಂಬಂಧ ಚರ್ಚೆ ನಡೆಯುತ್ತಿದ್ದು, ಈ ಪ್ರಕ್ರಿಯೆ ಸಂಬಂಧ ಕಾಂಗ್ರೆಸ್ ನಾಯಕರಲ್ಲಿ ಭಿನ್ನಾಭಿಪ್ರಾಯವಿದ್ದಂತೆ ಕಾಣುತ್ತಿದೆ. 
ಡಾ ಜಿ ಪರಮೇಶ್ವರ್
ಡಾ ಜಿ ಪರಮೇಶ್ವರ್

ಬೆಂಗಳೂರು: ಕಾಂಗ್ರೆಸ್ ನ ಶಾಸಕರು ಹಾಗೂ ಕಾರ್ಯಕರ್ತರನ್ನು ಪ್ರಮುಖ ನಿಗಮ, ಮಂಡಳಿಗಳಿಗೆ ನೇಮಕ ಮಾಡುವ ಸಂಬಂಧ ಚರ್ಚೆ ನಡೆಯುತ್ತಿದ್ದು, ಈ ಪ್ರಕ್ರಿಯೆ ಸಂಬಂಧ ಕಾಂಗ್ರೆಸ್ ನಾಯಕರಲ್ಲಿ ಭಿನ್ನಾಭಿಪ್ರಾಯವಿದ್ದಂತೆ ಕಾಣುತ್ತಿದೆ. 

ಈ ಪ್ರಕ್ರಿಯೆ ಬಗ್ಗೆ ನನ್ನೊಂದಿಗೇನು ಸಮಾಲೋಚನೆ ನಡೆಸಿಲ್ಲ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಬಹಿರಂಗ ಹೇಳಿಕೆ ನೀಡಿದ್ದಾರೆ. 

ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಿಎಂ ಸಿದ್ದರಾಮಯ್ಯ ನಿಗಮ, ಮಂಡಳಿಗಳಿಗೆ ನೇಮಕಾತಿ ಮಾಡುವುದರ ಬಗ್ಗೆ ಯಾವುದೇ ನಾಯಕರೊಂದಿಗೂ ಸಮಾಲೋಚನೆ ನಡೆಸಿಲ್ಲ. ಈ ಪ್ರಕ್ರಿಯೆ ಇನ್ನೂ ಪ್ರಾಥಮಿಕ ಹಂತದಲ್ಲಿದೆ ಎಂದು ಹೇಳಿದ್ದಾರೆ. 

ನಿಗಮ, ಮಂಡಳಿಗಳ ನೇಮಕಾತಿಗೆ ಸಂಬಂಧಿಸಿದಂತೆ ಸುರ್ಜೆವಾಲ ರಾಜ್ಯಕ್ಕೆ ಆಗಮಿಸಿದ್ದು ಸ್ಥಳೀಯ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com