ಸಚಿವ ಕೃಷ್ಣ ಬೈರೇಗೌಡರ ಹೇಳಿಕೆಗೆ ಆಳಂದ ಶಾಸಕ ಅಸಮಾಧಾನ: ತಮ್ಮ ವಿರುದ್ಧದ ಆರೋಪಗಳ ತನಿಖೆಗೆ ಒತ್ತಾಯ

ಆಡಳಿತಾರೂಢ ಕಾಂಗ್ರೆಸ್ ನಾಯಕರೊಂದಿಗಿನ ಭಿನ್ನಾಭಿಪ್ರಾಯ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಮ್ಮ ವಿರುದ್ಧ ಮಾಡಿರುವ ಆರೋಪಗಳ ಬಗ್ಗೆ ತನಿಖೆಗೆ ಆದೇಶಿಸಬೇಕು ಎಂದು ಕಾಂಗ್ರೆಸ್ ಹಿರಿಯ ಮುಖಂಡ ಮತ್ತು ಆಳಂದ ಶಾಸಕ ಬಿಆರ್ ಪಾಟೀಲ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.
ಕಂದಾಯ ಸಚಿವ ಕೃಷ್ಣ ಬೈರೇಗೌಡ
ಕಂದಾಯ ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಆಡಳಿತಾರೂಢ ಕಾಂಗ್ರೆಸ್ ನಾಯಕರೊಂದಿಗಿನ ಭಿನ್ನಾಭಿಪ್ರಾಯ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಮ್ಮ ವಿರುದ್ಧ ಮಾಡಿರುವ ಆರೋಪಗಳ ಬಗ್ಗೆ ತನಿಖೆಗೆ ಆದೇಶಿಸಬೇಕು ಎಂದು ಕಾಂಗ್ರೆಸ್ ಹಿರಿಯ ಮುಖಂಡ ಮತ್ತು ಆಳಂದ ಶಾಸಕ ಬಿಆರ್ ಪಾಟೀಲ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.

ನಾನು ಈ ಹಿಂದೆ 2013ರಲ್ಲಿ ಶಾಸಕನಾಗಿದ್ದಾಗ ತಮ್ಮ ಕ್ಷೇತ್ರದಲ್ಲಿನ ಅಭಿವೃದ್ಧಿ ಕಾಮಗಾರಿಗಳ ಪೈಕಿ ಕೆಲವನ್ನು ಕರ್ನಾಟಕ ಗ್ರಾಮೀಣ ಮೂಲಕ ಸೌಕರ್ಯ ಅಭಿವೃದ್ಧಿ ನಿಯಮಿತಕ್ಕೆ ನೀಡಿದ್ದೆ. ಚುನಾವಣೆ ಹತ್ತಿರ ಬರುತ್ತಿದ್ದರಿಂದ ಟೆಂಡರ್ ಪ್ರಕ್ರಿಯೆಯಿಂದ ಉಂಟಾಗುವ ವಿಳಂಬ ತಪ್ಪಿಸಲು ಭೂಸೇನೆ (ಲ್ಯಾಂಡ್ ಆರ್ಮಿ) ಗೆ ಕಾಮಗಾರಿ ನೀಡಲಾಗಿತ್ತು. ಆದರೆ, ಇಲ್ಲಿಯವರೆಗೆ ಕಾಮಗಾರಿಗಳು ಮುಗಿದಿಲ್ಲ. ಮುಗಿದಿರುವಂತವುಗಳು ಕಳಪೆ ಗುಣಮಟ್ಟದಿಂದ ಕೂಡಿವೆ. ನಂತರ ಬಂದ ಬಿಜೆಪಿ ಸರ್ಕಾರ ಇತ್ತ ಗಮನ ಹರಿಸಿಲ್ಲ ಎಂದಿದ್ದಾರೆ. 

ವಿಧಾನಸಭೆಯ ಕಳೆದ ಅಧಿವೇಶನದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ್ದೆ. ಆರ್‌ಡಿಪಿಆರ್ ಸಚಿವ ಪ್ರಿಯಾಂಕ್ ಖರ್ಗೆ ಅನುಪಸ್ಥಿತಿಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಮ್ಮ ಪ್ರಶ್ನೆಗೆ ಉತ್ತರಿಸಿದ್ದರು. ಸಚಿವರು ತಮ್ಮೊಂದಿಗೆ ವಾಗ್ವಾದಕ್ಕಿಳಿದರು ಮತ್ತು ಇಷ್ಟೆಲ್ಲಾ ಗೊತ್ತಿದ್ದರೂ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಲಿಮಿಟೆಡ್‌ಗೆ ಕಾಮಗಾರಿಗಳನ್ನು ಏಕೆ ನೀಡಿದ್ದೀರಿ ಎಂದು ನನ್ನನ್ನೇ ಪ್ರಶ್ನಿಸಿ, ನನ್ನ ಮೇಲೆ ಅನುಮಾನ ಬರುವಂತೆ ಆರೋಪಿಸಿದ್ದಾರೆ ಎಂದು ದೂರಿದ್ದಾರೆ. 

ಸಚಿವರು ತಾನೇ ತಪ್ಪು ಮಾಡಿರುವುದಾಗಿ ತಮ್ಮ ವಿರುದ್ಧ ಆರೋಪಗಳನ್ನು ಮಾಡಿದ್ದಾರೆ. ಸಚಿವರ ಈ ಹೇಳಿಕೆ ವಿರುದ್ಧ ನಾನು ಪ್ರತಿಭಟಿಸಿದ್ದೇನೆ ಎಂದು ಪಾಟೀಲ್ ಹೇಳಿದ್ದಾರೆ.

ಸಚಿವ ಪ್ರಿಯಾಂಕ್ ಖರ್ಗೆ ಕೂಡ ಕಾಮಗಾರಿಯ ಪರಿಶೀಲನೆಗೆ ಸಭೆ ನಡೆಸಿಲ್ಲ. ಡಿಸೆಂಬರ್ 4 ರಿಂದ 15 ರವರೆಗೆ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ನಾನು ಭಾಗವಹಿಸಿದರೆ ಸಚಿವರು ತಮ್ಮ ವಿರುದ್ಧ ಮಾಡಿರುವ ಆರೋಪಗಳನ್ನು ಒಪ್ಪಿಕೊಂಡಂತೆ ಆಗುತ್ತದೆ. ಹೀಗಾಗಿ, ಸತ್ಯಾಸತ್ಯತೆ ಕಂಡುಹಿಡಿದು ಆರೋಪದಿಂದ ಮುಕ್ತಗೊಳಿಸಲು ಸಿಎಂ ತನಿಖೆಗೆ ಆದೇಶಿಸಬೇಕು. ತಮ್ಮ ಮೇಲಿನ ಆರೋಪ ಸಾಬೀತಾದರೆ ವಿಧಾನಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಪಾಟೀಲ್ ಸಿಎಂಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಮಂಗಳವಾರ ಸಂಜೆ ಸಿಎಂ ಸಿದ್ದರಾಮಯ್ಯ ಅವರು ಶಾಸಕರಿಂದ ಪತ್ರ ಬಂದಿಲ್ಲ ಎಂದಿದ್ದಾರೆ. ಇನ್ನೊಂದೆಡೆ, ಸಚಿವರಾದ ಕೃಷ್ಣ ಬೈರೇಗೌಡ ಮತ್ತು ಪ್ರಿಯಾಂಕ್ ಖರ್ಗೆ ವಿರುದ್ಧ ಕಾಂಗ್ರೆಸ್ ಶಾಸಕರೊಬ್ಬರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಬಿಜೆಪಿ ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com