ಭ್ರಮನಿರಸನಗೊಂಡಿರುವ ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಹತಾಶರಾಗಿದ್ದಾರೆ: ಸಿದ್ದರಾಮಯ್ಯ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಭವಿಷ್ಯ ನುಡಿದಿರುವ ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರು 'ಹತಾಶ'ರಾಗಿದ್ದಾರೆ ಎಂದು ಬಣ್ಣಿಸಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಭವಿಷ್ಯ ನುಡಿದಿರುವ ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರು 'ಹತಾಶ'ರಾಗಿದ್ದಾರೆ ಎಂದು ಬಣ್ಣಿಸಿದ್ದಾರೆ.

2023ರ ವಿಧಾನಸಭಾ ಚುನಾವಣೆಯ ನಂತರ ತಮ್ಮ ಪಕ್ಷದ ಬೆಂಬಲದೊಂದಿಗೆ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂಬ ಭ್ರಮೆಯಲ್ಲಿದ್ದ ಕುಮಾರಸ್ವಾಮಿ ಅವರು ಈಗ ಭ್ರಮನಿರಸನಗೊಂಡಿದ್ದಾರೆ. ಹೀಗಾಗಿ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದರು.

‘2023ರ ವಿಧಾನಸಭಾ ಚುನಾವಣೆಯ ನಂತರ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದು ತಾನೇ ಮುಖ್ಯಮಂತ್ರಿಯಾಗುತ್ತೇನೆ ಎಂಬ ಭ್ರಮೆಯಲ್ಲಿದ್ದ ಕುಮಾರಸ್ವಾಮಿ ಅವರು ಈಗ ಹತಾಶರಾಗಿದ್ದಾರೆ. ಅವರು ಈಗ ಭ್ರಮನಿರಸನಗೊಂಡಿದ್ದಾರೆ. ಅದಕ್ಕಾಗಿಯೇ ಅವರು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅವರು ಆ ಭ್ರಮೆಯಲ್ಲಿಯೇ ಇರಲಿ’ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

'ಇತ್ತೀಚೆಗೆ, ಕುಮಾರಸ್ವಾಮಿ ಅವರು ಸುದ್ದಿ ವಾಹಿನಿಯೊಂದರ ಜೊತೆಗೆ ಮಾತನಾಡಿ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಹೆಚ್ಚು ಕಾಲ ಉಳಿಯುವುದಿಲ್ಲ ಮತ್ತು ತಮ್ಮ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೇರಿದ 14 ತಿಂಗಳಲ್ಲಿ ಉರುಳಿದ ರೀತಿಯಲ್ಲಿಯೇ ಈ ಸರ್ಕಾರವು ಪತನವಾಗಲಿದೆ ಎಂದು ಎಂದು ಹೇಳಿದ್ದರು.

ಬಿಜೆಪಿಯೊಂದಿಗನ ಮೈತ್ರಿಯಿಂದ ಅಸಮಾಧಾನಗೊಂಡಿರುವ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರನ್ನು ಮತ್ತೆ ಕಾಂಗ್ರೆಸ್‌ ತೆಕ್ಕೆಗೆ ಸ್ವಾಗತಿಸುತ್ತೀರಾ ಎಂಬ ಪ್ರಶ್ನೆಗೆ ನೇರ ಪ್ರತಿಕ್ರಿಯೆ ನೀಡಲು ಸಿದ್ದರಾಮಯ್ಯ ನಿರಾಕರಿಸಿದರು.

ಅವರನ್ನೇ ಕೇಳಿ ಎಂದ ಅವರು, ಇಬ್ರಾಹಿಂ ಅವರು ತಮ್ಮೊಂದಿಗೆ ಸಮಾಲೋಚನೆ ನಡೆಸಿಲ್ಲ, ಮುಂದಿನ ದಿನಗಳಲ್ಲಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಮಾಜಿ ಕೇಂದ್ರ ಸಚಿವ ಸಿಎಂ ಇಬ್ರಾಹಿಂ ಅವರು ಕಳೆದ ವರ್ಷ ಕಾಂಗ್ರೆಸ್ ಮತ್ತು ಎಂಎಲ್‌ಸಿ ಸ್ಥಾನದಿಂದ ಕೆಳಗಿಳಿದು ಜೆಡಿಎಸ್‌ಗೆ ಸೇರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com