ಎಚ್.ವಿಶ್ವನಾಥ್-ಶಾಮನೂರು ಶಿವಶಂಕರಪ್ಪ
ಎಚ್.ವಿಶ್ವನಾಥ್-ಶಾಮನೂರು ಶಿವಶಂಕರಪ್ಪ

ಎಚ್ ವಿಶ್ವನಾಥ್ ನನ್ನು ಹುಚ್ಚಾಸ್ಪತ್ರೆಗೆ ಕಳುಹಿಸಿ; ಸಿಎಂ ಸಿದ್ದು ವಿರುದ್ಧ ಮತ್ತೆ ಗುಡುಗಿದ ಶಾಮನೂರು!

ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ ಎಂದು ಅಖಿಲ ಭಾರತ ವೀರಶೈವ ಮಹಾ ಸಭೆ ಅಧ್ಯಕ್ಷ ಹಾಗೂ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ನೀಡಿದ್ದ ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ದಾವಣಗೆರೆ: ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ ಎಂದು ಅಖಿಲ ಭಾರತ ವೀರಶೈವ ಮಹಾ ಸಭೆ ಅಧ್ಯಕ್ಷ ಹಾಗೂ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ನೀಡಿದ್ದ ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. 

ಶಾಸಕ ಶಾಮನೂರು ಶಿವಶಂಕರಪ್ಪ ಅವರು ತಮ್ಮದೇ ಸರ್ಕಾರದ ವಿರುದ್ಧ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿದ್ದ ಸಿಎಂ ಸಿದ್ದರಾಮಯ್ಯ, ನಮ್ಮ ಸರ್ಕಾರದಲ್ಲಿ 7 ಮಂದಿ ಲಿಂಗಾಯತರೇ ಸಚಿವರಿದ್ದಾರೆ. ನಮ್ಮ ಸರ್ಕಾರ ಯಾವ ಸಮುದಾಯಕ್ಕೂ ಅನ್ಯಾಯ ಮಾಡಿಲ್ಲ. ನನ್ನ ಬಳಿ ಅಂಕಿಅಂಶಗಳಿವೆ ಎಂದು ತಿರುಗೇಟು ನೀಡಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಮನೂರು ಅವರು, ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯ ಆಗಿದ್ದು ಸತ್ಯ‌. ಒಂದು ಡಿಸಿ ಕೊಟ್ಟಿಲ್ಲ. ಈ ಬಗ್ಗೆ ಸಿಎಂ ಜೊತೆ ಮಾತಾಡುತ್ತೇನೆ. ಯಾರಿಗೆ ಎಲ್ಲಿ ತೊಂದರೆ ಆಗಿದೆ ಎಂದು ಹೇಳುತ್ತೇನೆ ಎಂದು ಶಾಮನೂರು ಶಿವಶಂಕರಪ್ಪ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೆ ಗುಡುಗಿದ್ದಾರೆ.

ಸಂಪುಟದಲ್ಲಿ ಏಳು ಮಂದಿ ಲಿಂಗಾಯಿತ ಸಚಿವರು ಇರಬಹುದು. ಅದರ ಬಗ್ಗೆ‌ ಪ್ರಶ್ನೆ ಇಲ್ಲ. ನಮ್ಮ ಲಿಂಗಾಯತ ಸಮಾಜದ ಐಎಎಸ್, ಐಪಿಎಸ್, ಕೆಎಎಸ್ ಅಧಿಕಾರಿಗಳ ಬಗ್ಗೆ ನಾನು ಹೇಳುತ್ತಿದ್ದೇನೆ. ಇದಕ್ಕಾಗಿಯೇ ಈ ವಿಚಾರ ರಾಜ್ಯಾದ್ಯಂತ ಚರ್ಚೆ ಆಗುತ್ತಿದೆ. ಇದರ ನಡುವೆ, ಎಂಎಲ್ ಸಿ ಎಚ್‌. ವಿಶ್ವನಾಥ್‌ ಅವರು ಮಧ್ಯಪ್ರವೇಶ ಮಾಡಿ ಶಾಮನೂರು ಅವರನ್ನು ಪ್ರಶ್ನೆ ಮಾಡಿದ್ದರು. ಎಲ್ಲರಿಗೂ ಅವರು ಕೇಳಿದ ಹಾಗೆ ಹೇಗೆ ಸ್ಥಾನಮಾನ ಕೊಡಲು ಸಾಧ್ಯ? ಅಧಿಕಾರಿಗಳನ್ನು ಅರ್ಹತೆ ಮೇಲೆ ನೇಮಿಸಲಾಗುತ್ತದೆ ಎಂದಿದ್ದರು. 

ಹೆಚ್ ವಿಶ್ವನಾಥ್ ಹೇಳಿಕೆಗೆ ಕಿಡಿಕಾರಿರುವ ಶಾಮನೂರು ಅವರು, ಹೆಚ್ ವಿಶ್ವನಾಥರನ್ನು ಹುಚ್ಚಾಸ್ಪತ್ರೆಗೆ ಕಳುಹಿಸಿ. ನನ್ನ ಹೇಳಿಕೆಗೆ ಎಂಎ​ಲ್​ಸಿ ಹೆಚ್ ವಿಶ್ವನಾಥ ಹೇಳಿಕೆ ನೀಡಿದ್ದಾರೆ. ನಾನು ಸತ್ಯ ಹೇಳಿದ್ದೇನೆ.‌ ವಿಶ್ವನಾಥ ತರ ನಾನು ಯಾರಿಗೋ ಬೆಣ್ಣೆ ಹಚ್ಚಿ ಎಂಎಲ್​ಸಿ ಆಗಿಲ್ಲ.‌ ನಾನು ಜನರಿಂದ ಎಳು ಸಲ ಎಂಎಲ್​ಎ ಆಗಿದ್ದೇನೆ ಎಂದು ತಿರುಗೇಟು ನೀಡಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com